ಹರಿತಲೇಖನಿ ದಿನಕ್ಕೊಂದು ಕಥೆ: ಸಾಮಾಜಿಕ ವಿಕಸನದ ಜ್ಞಾನವನ್ನು ಪಡೆದುಕೊಳ್ಳಬೇಕು

ನಮ್ಮ ದೇಶದ ಹಾಗೂ ಕನ್ನಡ ನಾಡಿನ ದುರಂತ ಏನೆಂದರೆ ಪಾರಂಪರಿಕ ತಾಣಗಳ ಮತ್ತು ವಸ್ತುಗಳ ಬಗ್ಗೆ ಸರಿಯಾದ ಜ್ಞಾನವಿಲ್ಲದ ಅವಿವೇಕಿಗಳಿಗೆ ಮತದಾನ ಮಾಡಿ ಗೆಲ್ಲಿಸಿರುವುದು.

ಮುಂದಿನ‌ ಪೀಳಿಗೆಗೆ ಈ ನಾಡಿನ ಪಾರಂಪರಿಕ ಕಟ್ಟಡಗಳು ಸ್ಥಳಗಳು ಅವುಗಳನ್ನು ನಿರ್ಮಾಣದ ಹಿಂದಿನ ರೋಚಕ  ವಿಚಾರಗಳನ್ನು ಸಂಗತಿಗಳನ್ನು ತಿಳಿಸಲು ಸಾಧ್ಯವಾಗದಂತಹ ಸ್ಥಿತಿ ಸೃಷ್ಟಿಸುತ್ತಿದ್ದಾರೆ.

ಕುಡಿದು ಇಸ್ಪೀಟ್ ಆಡಿ ಮಜಾ ಮಾಡಲು ಬೇರೆ ಸ್ಥಳಗಳು ದೊರೆಯುವುದಿಲ್ಲವೇ, ಇವರೆಲ್ಲರೂ ಯಾವ ಮಹತ್ಸಾಧನೆ ಮಾಡಿ ಯಾವ ಮೌಲ್ಯಗಳನ್ನು ಯುವ ಜನರಿಗೆ  ಕಲಿಸುತ್ತಿದ್ದಾರೆ, ಸದನದ ಗೌರವವನ್ನಂತೂ ಹಾಳು ಮಾಡಿದ್ದಾಯಿತು ಸರ್ವ ಜನರ ಪ್ರಾತಿನಿಧಿಕ ವೇದಿಕೆಯ ಮಾನ ಕಳೆದದ್ದಾಯಿತು. ಇನ್ನು ಮುಂದಾದರೂ ಜನ ಎಚ್ಚೆತ್ತುಕೊಂಡು ಸಾಂವಿಧಾನಿಕ ಹಕ್ಕು ಮತ್ತು ಕರ್ತವ್ಯಗಳನ್ನು ಅರಿತುಕೊಂಡು ಜನಸೇವಕರನ್ನು ( ಜನ ನಾಯಕರನ್ನಲ್ಲ) ಆಯ್ಕೆ ಮಾಡಿಕೊಳ್ಳಬೇಕಿದೆ ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳ ಪ್ರಮಾಣ ಪತ್ರಗಳಿಗಿಂತ ಸಾಮಾನ್ಯ ಜ್ಞಾನದ ಪಾಠವನ್ನು ಕಲಿಯಬೇಕಿದೆ.

ರಾಜಕೀಯ ಜನಜೀವನದ ಒಂದು ಭಾಗವಾಗಬೇಕು ಅದು ಜನರ ನಿಯಂತ್ರಣದಲ್ಲಿ ಇರಬೇಕು ಬದಲಾಗಿ ಜಾತಿ ಧರ್ಮ ಮಠ ಖದೀಮರ ಅಂಕುಶಕ್ಕೆ ಸಿಲುಕಿದರೆ ಪ್ರಜೆಗಳು ಪ್ರಭುಗಳಾಗುವ ಬದಲು ಬಾಲಗಳಾಗಿ ಬೆನ್ನ ಹಿಂದೆಯೇ ಓಡುತ್ತಲೇ ಇರಬೇಕು ಗುಳ್ಳೆನರಿಯಂತಹ ಪುಡಾರಿಗಳ ಲೆಕ್ಕಾಚಾರಗಳು ಸಿಗದೇ ಕಂಗಾಲಾಗಬೇಕಾದೀತು.

ರಾಜಕಾರಣವೆಂದರೆ ವೈಯಕ್ತಿಕವಾಗಿ ನಿಂದನೆ ಮಾಡಿಕೊಂಡು ಆ ಕುರಿತು ಗುಂಪುಗಳನ್ನು ಕಟ್ಟಿ ದೊಡ್ಡ ದೊಡ್ಡ ಕಟೌಟ್ ಗಳಿಗೆ ತರಹೇವಾರಿ ಹಾರಗಳನ್ನು ಹಾಕಿ ಜಾತಿಯ ತಕ್ಕಡಿಯಲ್ಲಿ ತುಲಾಭಾರ ಮಾಡಿ ಜೈಕಾರ ಹಾಕುವುದು , ಪುಡಾರಿ ಮಾಡಿದ ಎಲ್ಲಾ  ವಂಚನೆ ದ್ರೋಹ ಮೋಸ ದರೋಡೆಗಳನ್ನು ಲೀಗಲೈಸ್ ಮಾಡಿ ಸಮರ್ಥನೆ ಮಾಡಿಕೊಂಡು ಅವನು ಮಾಡಿರುವ ಹಗರಣಗಳ ನೆರಳಲ್ಲಿ ತೂಕಡಿಸಿ ಸುಖಿಸುವುದೇ ಆಗಿದೆ ಎಂಬ ಅನಾಹುತಕಾರಿ ಸಂದೇಶವನ್ನು ಈಗಾಗಲೇ ಎಲ್ಲೆಡೆ ರಾಜಾರೋಷವಾಗಿ ಆಚರಿಸಲಾಗುತ್ತಿದೆ. 

ಇದರ ಹೊರತಾಗಿ ಸಮಾಜದ ಆಗುಹೋಗುಗಳ ಬಡವರ ದಮನಿತರ ದಲಿತರ ವೃದ್ಧರ ಮುಖ್ಯವಾಗಿ ಯುವಜನರ ಕನಸುಗಳಿಗೆ ಬೆನ್ನೆಲುಬಾಗಿ ನಿಲ್ಲುವುದು ಆ ಕುರಿತು ಯೋಜನೆಗಳನ್ನು ರೂಪಿಸಿ ಆರ್ಥಿಕವಾಗಿ ಶೈಕ್ಷಣಿಕವಾಗಿ ಸಮಾನತೆಯ ಹಾದಿಯಲ್ಲಿ ಎಲ್ಲರನ್ನೂ ಕರೆದೊಯ್ಯುವ ದೂರ ದೃಷ್ಟಿಯುಳ್ಳ ಚಿಂತನೆಗಳನ್ನು ಹೊಂದುವುದೇ ಈ ನಾಡಿನ ಜನರನ್ನು ಪ್ರತಿನಿಧಿಸುವವನ ಆದ್ಯ ಕರ್ತವ್ಯವಾಗಬೇಕಿದೆ.  

ಇನ್ನೂ ಸಮಾಜದ ನಾಲ್ಕನೇ ಅಂಗವಾದ ಮಾದ್ಯಮವು ನಾಚಿಕೆ ಬಿಟ್ಟು ಐತಿಹಾಸಿಕವಾಗಿ ಜನರಿಗಾಗಿ ಸಾಧನೆಗೈದು ಸಮಾಜದ ಒಳಿತಿಗಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದಂತಹ ಮಹನೀಯರ ಹೆಸರುಗಳನ್ನು ಈಗಿನ ಪುಡಾರಿಗಳಿಗೆ ಅಂಟಿಸಿ ಮೊಳೆ ಹೊಡೆಯುವ ಕೆಲಸವನ್ನು ಬಿಡಬೇಕು. 

ಜನರು ಸಾಮಾಜಿಕ ವಿಕಸನದ ಜ್ಞಾನವನ್ನು ಪಡೆದುಕೊಳ್ಳಬೇಕಾಗಿದೆ; ಚಿನ್ನು ಪ್ರಕಾಶ್ ಶ್ರೀರಾಮನಹಳ್ಳಿ

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನ್ ಬರ್ತಿದೀನಿ ಚಿನ್ನ: ದರ್ಶನ್| ದಿ ಡೆವಿಲ್ ಟ್ರೈಲರ್ ಇಲ್ಲಿದೆ ನೋಡಿ

ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನ್ ಬರ್ತಿದೀನಿ ಚಿನ್ನ: ದರ್ಶನ್| ದಿ ಡೆವಿಲ್

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ನಟನೆಯ ‘ ದಿ ಡೆವಿಲ್’ (The Devil) ಸಿನಿಮಾ ಇದೇ ತಿಂಗಳ 11ರಂದು ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ.

[ccc_my_favorite_select_button post_id="117049"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!