ರಾಜ್ಯಮಟ್ಟದ ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ

ಬೆಂ.ಗ್ರಾ.ಜಿಲ್ಲೆ, (ಫೆ.15): ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಫೆಬ್ರವರಿ 26 ರಿಂದ 27 ರ ವರೆಗೆ ರಾಜ್ಯ ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಜಿಲ್ಲೆಯಲ್ಲಿರುವ ಉದ್ಯೋಗಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ವೀಡಿಯೊ ಕಾನ್ಫರೆನ್ಸ್ ಸಭಾಂಗಣದಲ್ಲಿ ಇಂದು ನಡೆದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಿರುದ್ಯೋಗ ಯುವಕ/ಯುವತಿಯರಿಗೆ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ  ಸರ್ಕಾರವು ಬೆಂಗಳೂರು ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದೆ. ಇದರ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ವ್ಯಾಪಕ ಪ್ರಚಾರ ನೀಡಿ, ಉದ್ಯೋಗಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಕ್ರಮ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಉದ್ಯೋಗಾಂಕ್ಷಿಗಳು ವೆಬ್ಸೈಟ್ ವಿಳಾಸ https://udyogamela.skillconnect.kaushalkar.com/candidateRegistration  ಮೂಲಕ ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಳ್ಳಿ ಎಂದು ಹೇಳಿದರು.

ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 2023 ಡಿಸೆಂಬರ್ 26 ರಿಂದ‌ ಫೆಬ್ರವರಿ 14, 2024 ರ ವರೆಗೆ ದೇವನಹಳ್ಳಿ-348, ದೊಡ್ಡಬಳ್ಳಾಪುರ-475, ಹೊಸಕೋಟೆ-395, ನೆಲಮಂಗಲ-508 ಸೇರಿದಂತೆ ಒಟ್ಟು-1726 ಅಭ್ಯರ್ಥಿಗಳು ನೋಂದಣಿಯಾಗಿದ್ದಾರೆ.  ನೋಂದಣಿಯಾಗದ ಪದವಿ ಹೊಂದಿದ ಅರ್ಹ ಅಭ್ಯರ್ಥಿಗಳನ್ನು ನೋಂದಾಯಿಸಿಕೊಳ್ಳಲು ಕ್ರಮ ವಹಿಸಿ ಎಂದರು. 

ಪಿ.ಎಂ ವಿಶ್ವಕರ್ಮ ಯೋಜನೆಯಡಿ ಜಿಲ್ಲೆಯಲ್ಲಿ 34,599 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ತಡಮಾಡದೆ ಅರ್ಜಿಗಳನ್ನು ಶೀಘ್ರ ಪರಿಶೀಲಿಸಿ ಮುಂದಿನ ತರಬೇತಿಗೆ ಕಳುಹಿಸಿ. ಪಿ.ಎಂ ವಿಶ್ವಕರ್ಮ ಯೊಜನೆ ಬಗ್ಗೆ ಹೆಚ್ಚಿನ ಪ್ರಚಾರ ಕೈಗೊಂಡು ಸಾರ್ವಜನಿಕರಿಗೆ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕರಾದ ಜಗನ್ನಾಥ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಲಲಿತ ರೆಡ್ಡಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!