ಗ್ಯಾರಂಟಿ ಬಜೆಟ್: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆಗೆ ದೊರಕಿದ ಅನುದಾನವೇನು..?

ಬೆಂಗಳೂರು, (ಫೆ.16): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆಗಳಿಗೆ ನೀಡಲಾದ ಅನುದಾನವನ್ನು ಈ ಕೆಳಕಂಡಂತೆ ತಿಳಿಸಿದ್ದಾರೆ.

ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ APL, BPL, AAY ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ. 

2024-25ನೇ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಿದೆ.

ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು. 

ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು. ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. 

ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು. 

Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ 1,000 ರೂ. ಪ್ರೋತ್ಸಾಹಧನವನ್ನು ನೀಡಲಾಗುವುದು.

 ಆರೋಗ್ಯ ಇಲಾಖೆಯೊಂದಿಗೆ ಸಮನ್ವಯಿಸಿ ಎಲ್ಲಾ ತಾಲ್ಲೂಕುಗಳಲ್ಲಿ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಎರಡು Cataract ಶಸ್ತ್ರಚಿಕಿತ್ಸೆ ಶಿಬಿರಗಳನ್ನು ಆಯೋಜಿಸಲಾಗುವುದು.  

ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.   

ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲು ಇನ್ನೂ ಬಾಕಿಯಿರುವ 1,500 ವಿಶೇಷಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು. 

ಲಿಂಗತ್ವ ಅಲ್ಪಸಂಖ್ಯಾತರ ಬದುಕನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂ.ಗಳಿಂದ 1,200 ರೂ.ಗಳಿಗೆ ಹೆಚ್ಚಿಸಲಾಗುವುದು. ಜೊತೆಗೆ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ವಿತರಣೆಯ ಪ್ರಕ್ರಿಯೆಗಳನ್ನು ಸರಳಗೊಳಿಸಲಾಗುವುದು.

ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು;

• ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು 1500 ರೂ.ಗಳಿಂದ 2000 ರೂ.ಗಳಿಗೆ ಹೆಚ್ಚಿಸಲಾಗುವುದು. 

• ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ವಿಶೇಷ ಪ್ಯಾಕೇಜ್ ಅನ್ನು ನೀಡಲಾಗುವುದು.

• ನಿವೇಶನ ಹೊಂದಿರುವ ವಸತಿರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಕಲ್ಪಿಸಲಾಗುವುದು. 

• ಅವರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸಲು ಮರುಸಮೀಕ್ಷೆ ನಡೆಸಲಾಗುವುದು.

2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ  86,423 ಕೋಟಿ ರೂ.ಗಳನ್ನು ಒದಗಿಸಲಾಗುವುದು. 

ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದಿದ್ದಾರೆ.

ಸಮಾಜ ಕಲ್ಯಾಣ: ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿಯಲ್ಲಿ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಗೆ 27,674 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗೆ 11,44೭ ಕೋಟಿ ರೂ. ಗಳು ಸೇರಿದಂತೆ ಒಟ್ಟಾರೆ 39,12೧ ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗಿದೆ. 

ವೈಜ್ಞಾನಿಕವಾಗಿ ಹಾಗೂ ಸಂವಿಧಾನಬದ್ಧವಾಗಿ ಪರಿಶಿಷ್ಟ ಜಾತಿಯ ಮೀಸಲು ವರ್ಗೀಕರಣ ಮಾಡುವುದು ಸರ್ಕಾರದ ಧ್ಯೇಯವಾಗಿದೆ. ಈ ಕುರಿತು ಭಾರತದ ಸಂವಿಧಾನದ ಅನುಚ್ಛೇದ 341ಕ್ಕೆ ಅಗತ್ಯ ತಿದ್ದುಪಡಿ ತಂದು, ಹೊಸದಾಗಿ Clause-3 ಅನ್ನು ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ.  

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

ಕ್ರೈಸ್‌ ಅಡಿಯಲ್ಲಿ 2023-24ನೇ ಸಾಲಿನಲ್ಲಿ 23 ವಸತಿ ಶಾಲೆಗಳ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಿಗೆ ಸೇರಿದ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ ಕಾಮಗಾರಿಗಳನ್ನು 638 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುವುದು.

ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಕ್ರೈಸ್‌ ಸಂಸ್ಥೆಯ ಮೂಲಕ ಪ್ರಾರಂಭಿಸಲಾಗುವುದು. 

2023-24ನೇ ಸಾಲಿನಲ್ಲಿ 23 ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗಿದೆ. ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ 18 ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡಗಳನ್ನು 2024-25ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಮುಖಾಂತರ ನಿರ್ಮಾಣ ಮಾಡಲಾಗುವುದು. 

ಶೈಕ್ಷಣಿಕವಾಗಿ ಪ್ರಮುಖ ನಗರಗಳಲ್ಲಿ ವಸತಿನಿಲಯಗಳಿಗೆ ಬೇಡಿಕೆ ಹೆಚ್ಚುತ್ತಿರುವ ಕಾರಣ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 31 ಹೊಸ ಮೆಟ್ರಿಕ್‌ ನಂತರದ ವಸತಿನಿಲಯಗಳನ್ನು ಮಂಜೂರು ಮಾಡಲಾಗುವುದು. 

ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರದ ವಸತಿ ನಿಲಯಗಳು, ಆಶ್ರಮ ಶಾಲೆಗಳು ಮತ್ತು ವಸತಿ ಶಾಲೆಗಳ ವಿದ್ಯಾರ್ಥಿಗಳ ಭೋಜನ ವೆಚ್ಚವನ್ನು ಪ್ರತಿ ವಿದ್ಯಾರ್ಥಿಗೆ ಪ್ರತಿ ಮಾಹೆಗೆ 100 ರೂ. ನಂತೆ ಹೆಚ್ಚಿಸಲಾಗುವುದು.  

ಬೆಂಗಳೂರು ನಗರವು ವೇಗವಾಗಿ ಬೆಳೆಯುತ್ತಿರುವುದರಿಂದ ಬೆಂಗಳೂರು ಪೂರ್ವ ಭಾಗದಲ್ಲಿ 500 ಸಂಖ್ಯೆಯ ಒಂದು ನಿರಾಶ್ರಿತರ ಪರಿಹಾರ ಕೇಂದ್ರವನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ವಿರಳ ಮತ್ತು ದುಬಾರಿ ವೆಚ್ಚದ ಚಿಕಿತ್ಸಾ ಸೇವೆಗಳನ್ನು ಒದಗಿಸಲು 35 ಕೋಟಿ ರೂ.ಗಳ Corpus Fund ಅನ್ನು ಸ್ಥಾಪಿಸಲಾಗುವುದು. ಈ ನಿಧಿಯ ಬಡ್ಡಿ ಆಕರಣೆಯನ್ನು ರೋಗಿಗಳ ಚಿಕಿತ್ಸೆಯ ಅಗತ್ಯಕ್ಕನುಗುಣವಾಗಿ ನೀಡಲಾಗುವುದು. 

ಪದ್ಮಶ್ರೀ ಡಾ. ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠವನ್ನು ಸ್ಥಾಪಿಸಲಾಗುವುದು.

ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 1,750 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.      

ಪರಿಶಿಷ್ಟ ಪಂಗಡಗಳ ಕಲ್ಯಾಣ; ಪರಿಶಿಷ್ಟ ವರ್ಗಗಳ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದೆ. ಈ ಸಚಿವಾಲಯಕ್ಕೆ ಅಗತ್ಯ ಹುದ್ದೆಗಳನ್ನು ಸೃಜಿಸಿ 2023-24ನೇ ಸಾಲಿನಿಂದ ಕಾರ್ಯಾರಂಭ ಮಾಡಲಾಗಿದೆ. 

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳ ಹೆಸರನ್ನು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು ಎಂದು ಮರು ನಾಮಕರಣ ಮಾಡಲಾಗುವುದು. ಈ ಶಾಲೆಗಳ ಉನ್ನತೀಕರಣಕ್ಕೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುವುದು;

• 1 ರಿಂದ 5ನೇ ತರಗತಿವರೆಗೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಶಾಲೆಗಳಲ್ಲಿ 6ನೇ ತರಗತಿ ಪ್ರಾರಂಭಿಸಲಾಗುವುದು. 

• 1 ರಿಂದ 7ನೇ ತರಗತಿವರೆಗೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಶಾಲೆಗಳಲ್ಲಿ 8ನೇ ತರಗತಿಯನ್ನು ಪ್ರಾರಂಭಿಸಲಾಗುವುದು.  

• ಪ್ರತಿ ತರಗತಿಯ ವಿದ್ಯಾರ್ಥಿಗಳ ಸಂಖ್ಯಾಬಲವನ್ನು 25 ರಿಂದ 40ಕ್ಕೆ ಹೆಚ್ಚಿಸಲಾಗುವುದು. 

ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳು ಇಲ್ಲದಿರುವ 7 ಜಿಲ್ಲಾ ಕೇಂದ್ರಗಳಲ್ಲಿ ತಲಾ ಎರಡರಂತೆ 100 ಸಂಖ್ಯಾಬಲದ ಬಾಲಕ/ಬಾಲಕಿಯರ 14 ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು. 

IISc, IIT ಮತ್ತು NIT ಸಂಸ್ಥೆಗಳ ಮೂಲಕ Artificial Intelligence and Machine Learning ಮುಂತಾದ ೬ ರಿಂದ 12 ತಿಂಗಳ ಅವಧಿಯ ವೃತ್ತಿಪರ ತರಬೇತಿ ಕೋರ್ಸ್‌ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡಗಳ 200 ಇಂಜಿನಿಯರಿಂಗ್‌ ಪದವೀಧರರಿಗೆ 15,000 ರೂ.ಗಳ ಶಿಷ್ಯವೇತನವನ್ನು ನೀಡಲಾಗುವುದು.

ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ 5,000 ಯುವಕ/ಯುವತಿಯರಿಗೆ ಡ್ರೋನ್ ತರಬೇತಿಯನ್ನು ನೀಡಲಾಗುವುದು. 

ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್‌ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ, ಯಾವುದೇ ಫೆಲೋಶಿಪ್‌ ಪಡೆಯದಿದ್ದಲ್ಲಿ ಮಾಸಿಕ 25,000 ರೂ.ಗಳಂತೆ ಶಿಷ್ಯವೇತನ ನೀಡಲಾಗುವುದು.  

ಪರಿಶಿಷ್ಟ ಪಂಗಡದ ಕೊರಗ, ಜೇನುಕುರುಬ, ಯರವ, ಕಾಡುಕುರುಬ, ಸೋಲಿಗ, ಗೊಂಡ, ಸಿದ್ದಿ, ಮಲೈಕುಡಿ, ಕುಡಿಯ, ಹಸಲರು, ಗೌಡಲು, ಬೆಟ್ಟಕುರುಬ, ಹಕ್ಕಿ-ಪಿಕ್ಕಿ, ಇರುಳಿಗ, ರಾಜಗೊಂಡ ಹರಿಣಿಶಿಕಾರಿ ಮುಂತಾದ 23 ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಈ ಕೆಳಕಂಡ ಎರಡು ಉಪಕ್ರಮಗಳನ್ನು ರೂಪಿಸಲಾಗುವುದು; 

• ಏಕಲವ್ಯ ಮಾದರಿಯ ಪ್ರತಿ ವಸತಿ ಶಾಲೆಯಲ್ಲಿ 20 ಸೀಟುಗಳನ್ನು ಮೀಸಲಿರಿಸಿ, ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ನೀಡಿ ನೇರ ಪ್ರವೇಶ ಕಲ್ಪಿಸಲಾಗುವುದು.

• ಪಡಿತರ ಚೀಟಿ ಮುಂತಾದ ಸರ್ಕಾರಿ ದಾಖಲೆಗಳನ್ನು ಒದಗಿಸಲು ವಿಶೇಷ ಕೋಶವನ್ನು 3 ಕೋಟಿ ರೂ.ಗಳ ಅನುದಾನದಲ್ಲಿ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಸ್ಥಾಪಿಸಲಾಗುವುದು ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!