ಬೆಂಗಳೂರು, (ಫೆ.16); ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಕೇವಲ ಮುಂಬರುವ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಜೆಟ್ ಆಗಿದೆಯೇ ಹೊರತು, ಜನಸಾಮಾನ್ಯರಿಗೆ ಯಾವುದೇ ರೀತಿಯ ಲಾಭವಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿ ಬಜೆಟ್ ಮೇಲೆ ಹರಿತಲೇಖನಿಗೆ ಪ್ರತಿಕ್ರಿಯೆ ನೀಡಿದ ಅವರು, 15 ಬಾರಿ ಬಜೆಟ್ ಮಂಡಿಸಿ 1.5 ಲಕ್ಷ ಕೋಟಿ ಸಾಲ ಮಾಡಿರುವ ದಾಖಲೆ ಸೃಷ್ಟಿಸಿರುವ ಸಿದ್ದರಾಮಯ್ಯ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ ಕಂತೆಯ ರಾಜಕೀಯ ಬಜೆಟ್ ಮಂಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ವಿದ್ಯಾರ್ಥಿಗಳಿಗೆ, ರೈತರಿಗೆ, ಮಹಿಳೆಯರಿಗೆ ಶೂನ್ಯ ಬಜೆಟ್ ಆಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಕಡೆಗಣಿಸಲಾಗಿದೆ. ದೊಡ್ಡಬಳ್ಳಾಪುರಕ್ಕೆ ಜಿಲ್ಲಾಸ್ಪತ್ರೆಗೆ ಅನುದಾನ ನೀಡದೆ ಮಲತಾಯಿ ಧೋರಣೆ ಮುಂದುವರಿಸಲಾಗಿದೆ.
ಈ ಬಜೆಟ್ ನೋಡಿದರೆ ಜನರು ನಾವು ಎಷ್ಟು ತಪ್ಪು ಮಾಡಿದ್ದೇವೆ ಇವರನ್ನು ಗೆಲ್ಲಿಸಿ ಎಂದು ಜನ ಅಂದುಕೊಂಡಿದ್ದಾರೆ. ಕೇಂದ್ರ ಸರಕಾರ ಅಮೃತಕಾಲ ಅಂದರೆ ಸಿದ್ದರಾಮಯ್ಯ ಅವರು ವಿನಾಶಕಾಲ ಎಂದು ಹೇಳಿದರು. ಇವತ್ತಿನ ಸಿಎಂ ಬಜೆಟ್ ರಾಜ್ಯದ ವಿನಾಶಕಾಲಕ್ಕೆ ಬುನಾದಿ ಹಾಕಿದೆ ಎಂದು ಮುನೇಗೌಡ ಆತಂಕ ವ್ಯಕ್ತಪಡಿಸಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರ ಬಜೆಟ್ ಮಂಡನೆ ಮಾಡಿದ್ದಾಗ ಸದನಕ್ಕೆ ಬರುವಾಗ ಕಿವಿಗೆ ಹೂವು ಇಟ್ಟುಕೊಂಡು ಸಿದ್ದರಾಮಯ್ಯ ಬಂದಿದ್ದರು. ಈಗ ಅದೇ ಹೂವನ್ನ 7 ಕೋಟಿ ಜನರ ಕಿವಿಗೆ ಇಟ್ಟಿದ್ದಾರೆ ಎಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….