ದೊಡ್ಡಬಳ್ಳಾಪುರ, (ಫೆ.15): ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಉಪಚುನಾವಣೆ 2024ರ ಪ್ರಯುಕ್ತ ಇಂದು ನಡೆಯುತ್ತಿರುವ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ.
ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಟೌನ್, ಮಧುರೆ ಹೋಬಳಿ, ತೂಬಗೆರೆ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬಳ್ಳಾಪುರ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದಲ್ಲಿನ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಳ ಹೋಬಳಿ, ಸಾಸಲು ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬೆಳವಂಗಲ ಸರ್ಕಾರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಠಡಿ ಸಂಖ್ಯೆ-2ರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.
ವಿಶೇಷವಾಗಿ ಹರಿತಲೇಖನಿಗೆ ದೊರೆತಿರುವ 10 ಗಂಟೆಯ ವರದಿ ಅನ್ವಯ ದೊಡ್ಡಬಳ್ಳಾಪುರ ನಗರ ವ್ಯಾಪ್ತಿಯಲ್ಲಿ ಶೇ.19.65 ಹಾಗೂ ದೊಡ್ಡಬೆಳವಂಗಲ ವ್ಯಾಪ್ತಿಯಲ್ಲಿ 13.39 ಒಟ್ಟು ಶೇ.18.42 ಮಂದಿ ಮತ ಚಲಾವಣೆ ಮಾಡಿದ್ದಾರೆ.
ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಟ್ಟು 570 ಮತದಾರರಿದ್ದು, ಈಗಾಗಲೇ 105 ಮಂದಿ ಮತಚಲಾಯಿಸಿದ್ದಾರೆ.
ಇನ್ನು ಮತದಾನ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….