ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಇಲ್ಲದ ಅಡ್ಡಕಸುಬಿ ಬಜೆಟ್‌: ಪ್ರತಿಪಕ್ಷ ನಾಯಕ ಆರ್.ಅಶೋಕ

ಬೆಂಗಳೂರು, (ಫೆ.16): ಆರ್ಥಿಕ ತಜ್ಞ ಎಂದು ಕೊಚ್ಚಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಅಡ್ಡಕಸುಬಿ ಬಜೆಟ್‌ ಮಂಡಿಸಿದ್ದು, ಇದರಲ್ಲಿ ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಯಾವುದೂ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಕಟುವಾಗಿ ಟೀಕಿಸಿದ್ದಾರೆ. 

ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಅವರು,  ಬಜೆಟ್ ತಯಾರಿಕೆ ಎನ್ನುವುದು ಗಂಭೀರ ಹಾಗೂ ಪವಿತ್ರವಾದ ಸಾಂವಿಧಾನಿಕ ಕರ್ತವ್ಯ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ನೋಡಿದರೆ ಇದೊಂದು ‘ಅಡ್ಡಕಸುಬಿʼ ಬಜೆಟ್‌ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರವೂ ಇಲ್ಲ, ಅಭಿವೃದ್ಧಿಯೂ ಇಲ್ಲ, ದೂರದೃಷ್ಟಿಯೂ ಇಲ್ಲ ಎಂದು ಹೇಳಿದ್ದಾರೆ.

ಸಾಧನೆಯ ಬಲದಿಂದಾಗಲೀ, ಅಭಿವೃದ್ಧಿ ಕೆಲಸಗಳಿಂದಾಗಲೀ, ಲೋಕಸಭೆ ಚುನಾವಣೆ ಎದುರಿಸುವುದು ಅಸಾಧ್ಯವೆಂದು ತಿಳಿದಿರುವ ಸಿಎಂ ಸಿದ್ದರಾಮಯ್ಯನವರು ಬಜೆಟ್ ಮಂಡನೆಯ ಪವಿತ್ರ ಸಾಂವಿಧಾನಿಕ ಕರ್ತವ್ಯವನ್ನು *ಚುನಾವಣಾ ಭಾಷಣವಾಗಿಸಿ ದುರ್ಬಳಕೆ* ಮಾಡಿಕೊಂಡಿದ್ದಾರೆ. ಈ ಮೂಲಕ ಸಂವಿಧಾನಕ್ಕೆ ಮತ್ತು ಮತ ನೀಡಿ ಅಧಿಕಾರ ಕೊಟ್ಟ ಕನ್ನಡಿಗರಿಗೆ ಅಪಮಾನ ಎಸಗಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ

ತಲಾ 44,000 ರೂ. ಸಾಲಭಾಗ್ಯ: ತಮ್ಮ ಮೊದಲ ಅವಧಿಯಲ್ಲಿ 1 ಲಕ್ಷ ಕೋಟಿ ರೂ.ಗೂ ಹೆಚ್ಚು ಸಾಲ ಮಾಡಿ ಪ್ರತಿ ಪ್ರಜೆಯ ತಲೆಯ ಮೇಲೆ 44,000 ರೂ. ಗೂ ಅಧಿಕ ಸಾಲದ ಹೊರೆ ಹೇರಿದ್ದು ಮುಖ್ಯಮಂತ್ರಿ ಸಿದ್ದರಾಮ್ಯಯನವರ ದೊಡ್ಡ ಸಾಧನೆ. ಆ ಭಾಗ್ಯ, ಈ ಭಾಗ್ಯ ಎಂದು ರಾಜ್ಯದ ಜನತೆಯ ಮೇಲೆ ಸಾಲ ಭಾಗ್ಯ ಹೊರಿಸಿ, ಹಳಿ ತಪ್ಪಿದ್ದ ವಿತ್ತೀಯ ಶಿಸ್ತನ್ನು ನಂತರ ಬಂದ ಬಿಜೆಪಿ ಸರ್ಕಾರ ಕೋವಿಡ್ ಸಂಕಷ್ಟದ ಹೊರತಾಗಿಯೂ ಸರಿ ದಾರಿಗೆ ತಂದಿತ್ತು. ಆದರೆ ಈಗ ಎರಡನೇ ಅವಧಿಯಲ್ಲೂ ಸಿಎಂ ಸಿದ್ದರಾಮಯ್ಯನವರು ಕರ್ನಾಟಕವನ್ನು ದೊಡ್ಡ ಸಾಲದ ಸುಳಿಯಲ್ಲಿ ಸಿಲುಕಿಸಲು ಹೊರಟಿದ್ದಾರೆ. “ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು” ಎಂಬುದು ಈ ಸರ್ಕಾರದಲ್ಲಿ “ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲ” ಎಂಬಂತಾಗಿದೆ ಎಂದರು.

ಕೇಂದ್ರದ ಮೇಲೆ ಆರೋಪ: ಬಜೆಟ್‌ ಪುಸ್ತಕದಲ್ಲಿ ಸುಳ್ಳುಗಳು: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ದ್ವೇಷ ಭಾಷಣವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಸಂಪತ್ತಿನ ಶೇಖರಣೆ, ಅಸಮಾನತೆ ಎಂಬ ಹಳೆಯ ವಾದವನ್ನೇ ಜನರ ಮುಂದಿಟ್ಟಿದ್ದಾರೆ. ಹೀಗೆ ಹೇಳುತ್ತಲೇ ದಲಿತರಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂ. ಅನ್ನು ಬೇರೆ ಯೋಜನೆಗಳಿಗೆ ಬಳಸಿದ್ದಾರೆ. ಬೊಕ್ಕಸದಲ್ಲಿ ಹಣವಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರೇ ಪರೋಕ್ಷವಾಗಿ ಹೇಳಿದ್ದು, ಹಾಗೆನೂ ಇಲ್ಲ ಎಂದು ಬಜೆಟ್‌ನಲ್ಲಿ ಸಮರ್ಥಿಸಿಕೊಂಡಿದ್ದಾರೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ. 

15 ನೇ ಹಣಕಾಸು ಯೋಜನೆಯಡಿ ವಿಶೇಷ ಅನುದಾನ ಎಂಬ ಹಸಿ ಸುಳ್ಳನ್ನು ಬಜೆಟ್‌ ಪುಸ್ತಕದಲ್ಲಿ ಸೇರಿಸಿದ್ದಾರೆ. ಈ ರೀತಿಯ ಶಿಫಾರಸನ್ನು ಮಾಡಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಅಲ್ಲದೆ ರಾಜ್ಯಕ್ಕೆ ಎಷ್ಟು ನಷ್ಟವಾಗಿದೆ ಎಂಬ ಹೊಸ ತಲೆ ಬುಡವಿಲ್ಲದ ಲೆಕ್ಕವನ್ನು ನೀಡಿದ್ದಾರೆ. 2004-2014 ರ ಅವಧಿಯಲ್ಲಿ ಯುಪಿಎ ನೀಡಿದ್ದು 81,795 ಕೋಟಿ ರೂ. 2014-2024 ರ ಅವಧಿಯಲ್ಲಿ ಮೋದಿ ಸರ್ಕಾರ ನೀಡಿರುವುದು 2,82,791 ಕೋಟಿ ರೂ. ಅಂದರೆ ಈ ಪ್ರಮಾಣ 242% ಕ್ಕೂ ಅಧಿಕ ಎಂದು ಆರ್.ಅಶೋಕ ಸತ್ಯಾಂಶವನ್ನು ವಿವರಿಸಿದ್ದಾರೆ.

ಗ್ಯಾರಂಟಿ ಯೋಜನೆಯಿಂದ ಜನರ ಆದಾಯ ಹೆಚ್ಚಿದೆ ಎಂದಿದ್ದಾರೆ. ಒಂದು ಕಡೆ ವಿದ್ಯುತ್‌ ದರ ಏರಿಕೆ, ರೈತರ ಪಂಪ್‌ಸೆಟ್‌ಗೆ ವಿದ್ಯುತ್‌ ಕಡಿತ, ಕಿಸಾನ್‌ ಸಮ್ಮಾನ್‌ ನಿಧಿ ಸ್ಥಗಿತ, ವಿದ್ಯಾನಿಧಿ ಸ್ಥಗಿತ, ಹೈನುಗಾರರಿಗೆ ಹಾಲಿನ ಪ್ರೋತ್ಸಾಹಧನ ಸ್ಥಗಿತ, ಮುದ್ರಾಂಕ ಶುಲ್ಕ ದರ ಏರಿಕೆ ಮೊದಲಾದವುಗಳ ಮೂಲಕ ಜನರಿಗೆ ದರ ಏರಿಕೆಗಳ ಬರೆ ಹಾಕಿದ್ದಾರೆ ಎಂದು ಹೇಳಿದ್ದಾರೆ.  

ಒಟ್ಟಿನಲ್ಲಿಈ ಬಜೆಟ್ ಅತ್ಯಂತ ನೀರಸ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ಇಲ್ಲದ ಅಡ್ಡಕಸುಬಿ ಬಜೆಟ್. ಬಜೆಟ್ ಬಗೆಗಿನ ನಿರೀಕ್ಷೆಗಳೆಲ್ಲ ಹುಸಿಯಾಗಿದ್ದು, ಇದು‌ ‘ಸಾಲರಾಮಯ್ಯನ ಸೋಗಲಾಡಿ’ ಬಜೆಟ್ ಆಗಿದೆ ಎಂದು ಟೀಕಿಸಿದ್ದಾರೆ.

ಪದೇ ಪದೆ ಆರೋಪ: ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌.ಅಶೋಕ, ಮುಖ್ಯಮಂತ್ರಿಗಳು ವಿಧಾನಸಭೆಯ ಒಳಗೆ ಕಾಂಗ್ರೆಸ್‌ನ ಶಾಲು ಧರಿಸಿಕೊಂಡು ಬಜೆಟ್‌ ಮಂಡಿಸಿದ್ದಾರೆ. ಕೇಂದ್ರ ಸರ್ಕಾರದ ಮೇಲೆ ನಿರಂತರವಾಗಿ ಆರೋಪ ಮಾಡಿ ತೆಗಳಿದ್ದಾರೆ. 15 ನೇ ಹಣಕಾಸು ಆಯೋಗವಿದ್ದಾಗ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದರು. ಅದಕ್ಕೆ ಅವರೇ ಒಪ್ಪಿಗೆ ಕೊಟ್ಟು ಈಗ ಅನ್ಯಾಯ ಆಗಿದೆ ಎಂದರೆ ಕುಣಿಯಲಾಗದವರು ನೆಲ ಡೊಂಕು ಎಂದಂತಾಗುತ್ತದೆ. ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಬೇಕು. ಇಡೀ ದೇಶಕ್ಕೆ ಇವರೊಬ್ಬರೇ ತೆರಿಗೆ ಪಾವತಿಸುವಂತೆ ಮಾತಾಡುತ್ತಾರೆ. ಕೇಂದ್ರ ಸರ್ಕಾರದಿಂದ ಅನುದಾನ ತರುವುದು ಹೇಗೆಂದು ಯೋಚಿಸದೆ ತೆಗಳುವ ಕೆಲಸ ಮಾಡಿರುವುದರಿಂದ ನಾವು ಸಭಾತ್ಯಾಗ ಮಾಡಿದ್ದೇವೆ ಎಂದರು. 

ಹಿಂದೆ ಬಿಜೆಪಿ ಬಜೆಟ್‌ ಮಂಡನೆ ವೇಳೆ ಕಾಂಗ್ರೆಸ್‌ನವರು ಕಿವಿ ಮೇಲೆ ಹೂ ಇಟ್ಟುಕೊಂಡಿದ್ದರು. ಆದರೆ ಈಗ ನಾವು ಪ್ರತಿಭಟಿಸಿದ್ದನ್ನು ಸ್ಪೀಕರ್‌ ಮಾಧ್ಯಮಕ್ಕೆ ತಿಳಿಯದಂತೆ ಮಾಡಿದ್ದಾರೆ. ರಾಜ್ಯಕ್ಕೆ 14,000 ಕೋಟಿ ರೂ. ಆದಾಯ ಕಡಿಮೆಯಾದರೆ, ಕೇಂದ್ರದಿಂದ ಬರುವ ಅನುದಾನ 3,000 ಕೋಟಿ ರೂ. ಹೆಚ್ಚಿದೆ. ಸಿಎಂ ಸಿದ್ದರಾಮಯ್ಯನವರು 7 ಕೋಟಿ ಕನ್ನಡಿಗರ ಮೇಲೆ ತೆರಿಗೆಯ ಜೊತೆಗೆ ಸಾಲದ ಹೊರೆ ಹಾಕಿದ್ದಾರೆ. ಒಟ್ಟು ಸಾಲ 1 ಲಕ್ಷ ಕೋಟಿ ರೂ. ದಾಟಿದೆ. ಸಾಲವನ್ನು ಈ ಮಟ್ಟಕ್ಕೆ ದಾಟಿಸಿದ ಮೊದಲ ಮುಖ್ಯಮಂತ್ರಿ ಇವರೇ ಎಂದರು. 

ಲೂಟಿ ಹೊಡೆದ ಹಣವನ್ನು ಸಾಗಿಸಲು ಸುರಂಗ ಯೋಜನೆ ರೂಪಿಸಿದ್ದಾರೆ. ಬಿ.ಎಸ್‌.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಉತ್ತಮ ಅನುದಾನ ನೀಡಿದ್ದಾರೆ. ಆದರೆ ಈಗಿನ ಬಜೆಟ್‌ನಲ್ಲಿ ಬೆಂಗಳೂರಿಗೆ ಅನುದಾನವೇ ಇಲ್ಲ. ಇದು ಚುನಾವಣೆಗಾಗಿ ಮಾಡಿದ ಬೋಗಸ್‌ ಬಜೆಟ್‌ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!