ಸರಕಾರದ ಖಜಾನೆ ಖಾಲಿ ಆಗಿದೆ ಅಂತ ನಾವು ಹೇಳಲ್ಲ; ಬಜೆಟ್ ಮೂಲಕ ರಾಜ್ಯದ ವಿನಾಶಕ್ಕೆ ಬುನಾದಿ – ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು, (ಫೆ.16): ಇದು ಡಿಪಿಆರ್ ಬಜೆಟ್!ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೊಟ್ಟ ಪ್ರತಿಕ್ರಿಯೆ ಇದು.

ಪ್ರಸಕ್ತ ಸಾಲಿನ ಆಯವ್ಯಯದ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ಸರಕಾರದಿಂದ ಯವುದಾದರೂ ಯೋಜನೆ ಜಾರಿ ಮಾಡುವ ಮುನ್ನ ಸಮಗ್ರ ಯೋಜನಾ ವರದಿ (DPR) ಅಂತ ಮಾಡುತ್ತಾರೆ. ಆ DPR ಆದ ಮೇಲೆ ಏನೆಲ್ಲಾ ಆಗುತ್ತದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಬಜೆಟ್ ಕೂಡ ಹಾಗೆಯೇ ಇದೆ ಎಂದರು.

ಈ ಬಜೆಟ್ ಅನ್ನು ನೋಡಿದರೆ ಇದು ನಾಳೆ ಬಾ ಸರಕಾರದಂತೆ ಇದೆ ಎಂದು ಅವರು ಟೀಕಿಸಿದರು.

ಬಜೆಟ್ ಓದುವಾಗಲೇ ನನಗೆ ಅನಿಸಿದ್ದು ಅವರಲ್ಲಿ ವಿಶ್ವಾಸದ ಕೊರತೆ ಎದ್ದು ಕಾಣುತ್ತಿದೆ. ಅವರು ಗ್ಯಾರಂಟಿಯ ಗುಂಗಿನಿಂದ ಇನ್ನೂ ಹೊರಗೇ ಗೆ ಬಂದಿಲ್ಲ. 10 ತಿಂಗಳು ಕಳೆದರೂ ಇನ್ನೂ ಗ್ಯಾರಂಟಿಗಳ ಬಗ್ಗೆಯೇ ಕನವರಿಕೆ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.

ವಿಶ್ವಾಸ ಮೂಡುತ್ತಿಲ್ಲ: ಸಿದ್ದರಾಮಯ್ಯ ಅವರ 15ನೇ ಬಜೆಟ್ ಇದು. ರಾಜ್ಯದ ಇತಿಹಾಸದಲ್ಲಿ 15 ಬಜೆಟ್ ಗಳನ್ನು ಮಂಡಿಸುವವರು ಮುಂದೆ ಬರುತ್ತಾರೋ ಇಲ್ಲವೋ ಗೊತ್ತಿಲ್ಲ. ಸಿದ್ದರಾಮಯ್ಯ ಅವರಿಗೆ ಆಡಳಿತದಲ್ಲಿ ಸಾಕಷ್ಟು ಅನುಭವ ಇದೆ. ಆದರೆ, ಬಜೆಟ್ ನೋಡಿದರೆ ಯಾವುದೇ ರೀತಿಯ ವಿಶ್ವಾಸ ಮೂಡುತ್ತಿಲ್ಲ ಈ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.  

ಬಜೆಟ್ ಮೂಲಕ ರಾಜ್ಯದ ವಿನಾಶಕ್ಕೆ ಬುನಾದಿ: ಸರಕಾರದ ಖಜಾನೆ ಖಾಲಿ ಆಗಿದೆ ಅಂತ ನಾವು ಹೇಳಲ್ಲ. ಜನರು ಸಮೃದ್ದಿಯಾಗಿ ಖಜಾನೆ ತುಂಬಿಸಿದ್ದಾರೆ. ಈ ಬಜೆಟ್ ನೋಡಿದರೆ ಜನರು ನಾವು ಎಷ್ಟು ತಪ್ಪು ಮಾಡಿದ್ದೇವೆ ಇವರನ್ನು ಗೆಲ್ಲಿಸಿ ಎಂದು ಜನ ಅಂದುಕೊಂಡಿದ್ದಾರೆ. ಕೇಂದ್ರ ಸರಕಾರ ಅಮೃತಕಾಲ ಅಂದರೆ ಸಿದ್ದರಾಮಯ್ಯ ಅವರು ವಿನಾಶಕಾಲ ಎಂದು ಹೇಳಿದರು. ಇವತ್ತಿನ ಸಿಎಂ ಬಜೆಟ್ ರಾಜ್ಯದ ವಿನಾಶಕಾಲಕ್ಕೆ ಬುನಾದಿ ಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದರು.

ಏಳು ಕೋಟಿ ಜನರ ಕಿವಿಗೆ ಹೂವು: ಹಿಂದಿನ ಬಿಜೆಪಿ ಸರ್ಕಾರ ಬಜೆಟ್ ಮಂಡನೆ ಮಾಡಿದ್ದಾಗ ಸದನಕ್ಕೆ ಬರುವಾಗ ಕಿವಿಗೆ ಹೂವು ಇಟ್ಟುಕೊಂಡು ಸಿದ್ದರಾಮಯ್ಯ ಬಂದಿದ್ದರು. ಈಗ ಅದೇ ಹೂವನ್ನ 7 ಕೋಟಿ ಜನರ ಕಿವಿಗೆ ಇಟ್ಟಿದ್ದಾರೆ. ಈ ಬಜೆಟ್ ನೋಡಿದರೆ ‘ನಾಳೆ ಬಾ ಸರಕಾರ ‘ ದಂತೆ ಕಾಣುತ್ತಿದೆ ಎಂದು ಅವರು ಕಿಡಿಕಾರಿದರು.

ಕೇಂದ್ರ ಸರಕಾರಕ್ಕೆ ಅವರು ನಿತ್ಯವೂ ಬೈತಾರೆ. ಆದರೆ ಅದೇ ಕೇಂದ್ರಕ್ಕೆ ಮನವಿ ಮಾಡುತ್ತೇವೆ ಅನ್ನುತ್ತಾರೆ. ಬಜೆಟ್ ಪುಸ್ತಕದ ಪ್ರತಿ ಪುಟದಲ್ಲಿಯೂ ಕೇಂದ್ರ ಸರಕಾರವನ್ನು  ಬೈದಿದ್ದಾರೆ. ಒಂದು ಸುಳ್ಳನ್ನು ಸತ್ಯ ಮಾಡಬೇಕಾದಾರೆ ನೂರು ಬಾರಿ ಸುಳ್ಳು ಹೇಳು ಎನ್ನುವ ಮಾತಿದೆ. ಅದೇ ಕೆಲಸವನ್ನು ಈಗ ಸಿದ್ದರಾಮಯ್ಯ ಅವರು ಮಾಡಿದ್ದಾರೆ. ಇಂತಹ ಕೆಟ್ಟ ಸರಕಾರ ಈ ದೇಶದಲ್ಲಿ ಯಾವತ್ತೂ ಬಂದಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಜನರ ಮೇಲೆ ಸಿಎಂಗೆ ಸಿಟ್ಟಿದೆ, ಬಜೆಟ್ ನಲ್ಲಿ ಅದು ಕಾಣುತ್ತಿದೆ: ನಾಡಿನ ಜನರ ಮೇಲೆ ಸಿದ್ದರಾಮಯ್ಯಗೆ ಆಕ್ರೋಶ ಇದ್ದಂತೆ ಇದೆ. ಆ ಸಿಟ್ಟನ್ನು ಬಜೆಟ್‌ನಲ್ಲಿ ತೋರಿಸಿದ್ದಾರೆ. ಇಷ್ಟೇ ಈ ಬಜೆಟ್ ನ ಸಾರಾಂಶ. ಅಷ್ಟೇ ಅಲ್ಲದೆ, ಸಿದ್ದರಾಮಯ್ಯಗೆ ಜೆಡಿಎಸ್, ಬಿಜೆಪಿ, ಕೇಂದ್ರದ ಮೇಲೆ ಇಷ್ಟು ದಿನ ಆಕ್ರೋಶ ಇತ್ತು ಅಂತ ಅಂದುಕೊಂಡಿದ್ದೆ. ಆದರೆ ಈ ಬಜೆಟ್ ನೋಡಿದರೆ ಸಿದ್ದರಾಮಯ್ಯ ಅವರಿಗೆ 7 ಕೋಟಿ ಕನ್ನಡಿಗರ ಮೇಲೆ ಆಕ್ರೋಶ ಇದೆ ಅಂತ ಅರ್ಥವಾಗುತ್ತದೆ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!