ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಬಜೆಟ್: ವಿಜಯೇಂದ್ರ ವಿಶ್ಲೇಷಣೆ

ಬೆಂಗಳೂರು, (ಫೆ.16): ಮುಖ್ಯಮಂತ್ರಿಗಳು ಮತ್ತು ರಾಜ್ಯದ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಶೂನ್ಯ ಪ್ರಗತಿಯ ಬಜೆಟ್ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಬಜೆಟ್ ಇದು ಎಂದು ಟೀಕಿಸಿದರು. ಯುವಕರಿಗೆ ಯಾವುದೇ ಒಂದು ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಘೋಷಣೆ ಮಾಡಿಲ್ಲ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮತ್ತು ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳಲು ಇವತ್ತು ಸನ್ಮಾನ್ಯ ಸಿದ್ದರಾಮಯ್ಯನವರು ತಮ್ಮ ಸಮಯ ವ್ಯರ್ಥ ಮಾಡಿದ್ದಾರೆ ಎಂದು ತಿಳಿಸಿದರು.

ಈ ಬಜೆಟ್‍ನ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ ಎಂದು ಆಕ್ಷೇಪಿಸಿದ ಅವರು, ಮೊನ್ನೆ ದೆಹಲಿ ಚಲೋ ಮಾಡಿದ್ದರು. ದೆಹಲಿಯಲ್ಲಿ ರಾಜ್ಯ ಸರಕಾರದ ಗೌರವವನ್ನು ಹರಾಜು ಹಾಕುವ ಕೆಲಸ ಆಗಿತ್ತು. ಇವತ್ತು ಕೂಡ ಮುಖ್ಯಮಂತ್ರಿಗಳು ತಮ್ಮ ಬಜೆಟ್‍ನಲ್ಲಿ ಕೇಂದ್ರ ಸರಕಾರವನ್ನು ದೂರುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿ ಇಲ್ಲ..ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿಯನ್ನೂ ಕೊಡದ ಬಜೆಟ್ ಇದಾಗಿದೆ. ಸಂಕಷ್ಟದಲ್ಲಿರುವ ರೈತರು ಬಜೆಟ್ ಮೂಲಕ ಪರಿಹಾರದ ನಿರೀಕ್ಷೆಯಲ್ಲಿದ್ದರು. ಇದರಡಿ ಮಹಿಳೆಯರಿಗೂ ಅನುಕೂಲ ಆಗುವುದಿಲ್ಲ. ಇವರು ತಮ್ಮ ಪ್ರಣಾಳಿಕೆಯಲ್ಲಿ ನೇಕಾರರ ಬಗ್ಗೆ ಮಾತನಾಡಿದ್ದರು. ನೇಕಾರರ ಪರವಾಗಿ ಯಾವುದೇ ಒಂದು ಯೋಜನೆಯನ್ನು ಘೋಷಣೆ ಮಾಡಿಲ್ಲ. ಯೋಜನೆ ಘೋಷಿಸುವುದು ಇರಲಿ; ಆ ನೇಕಾರರ ಹೆಸರನ್ನೂ ಉಲ್ಲೇಖಿಸಿಲ್ಲ ಎಂದು ವಿಜಯೇಂದ್ರ ಅವರು ಟೀಕಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಭರವಸೆ ನೀಡಿದ್ದರು. ಅದರ ಬಗ್ಗೆಯೂ ಉಲ್ಲೇಖ ಮಾಡಿಲ್ಲ. ‘ನುಡಿದಂತೆ ನಡೆದ ಸರಕಾರ’ ಎಂದು ಕೊಚ್ಚಿಕೊಳ್ಳುತ್ತಾರೆ. ‘ನುಡಿದಂತೆ ನಡೆದ ಸರಕಾರ’ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದು, ರಾಜ್ಯದ ರೈತರು, ಬಡವರು, ದೀನದಲಿತರು, ನೇಕಾರರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿ ಎಲ್ಲ ವರ್ಗಕ್ಕೂ ನಿರಾಸೆ ಮೂಡಿಸಿದ ಬಜೆಟ್ ಇದು ಎಂದು ತಿಳಿಸಿದರು.

ಬರಗಾಲದ ಸಂದರ್ಭದಲ್ಲೂ ಕೃಷಿ ಮತ್ತು ಬೆಳೆ ಸಾಲದ ಮನ್ನಾ ಕುರಿತು ಉಲ್ಲೇಖ ಮಾಡಿಲ್ಲ. ಸರಕಾರಿ ನೌಕರರ ಮೂಗಿಗೆ ತುಪ್ಪ ಹಚ್ಚುವ ಕೆಲಸವನ್ನು ಇವರು ಮಾಡಿದ್ದಾರೆ. ಬರಗಾಲದ ಸಂದರ್ಭದಲ್ಲಿ ಯಾವುದೇ ರೀತಿಯ ಅನುಕೂಲ ಆಗದ ಬಜೆಟ್, ನಿಶ್ಚಿತವಾಗಿ ಇದು ಕರಾಳ ದಿನ ಎಂದರೂ ತಪ್ಪಾಗಲಾರದು ಎಂದು ನುಡಿದರು.

15ನೇ ಬಜೆಟ್ ಮಂಡಿಸುತ್ತಿರುವ ಒಬ್ಬ ಅನುಭವಿ ಮುಖ್ಯಮಂತ್ರಿ ಈ ರೀತಿ ಬಜೆಟ್ ಮಂಡಿಸಬಹುದೆಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ನಿಜವಾಗಲೂ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಒಂದು ದುರಂತವೇ ಸರಿ ಎಂದ ಅವರು, ರೈತರನ್ನೂ ಕಡೆಗಣಿಸಿದ್ದಾರೆ; ಮಹಿಳೆಯರನ್ನೂ ಕಡೆಗಣಿಸಿದ್ದಾರೆ; ನೇಕಾರರನ್ನೂ ಕಡೆಗಣಿಸಿದ್ದಾರೆ, ಯುವಕರನ್ನೂ ಕಡೆಗಣಿಸಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿಯನ್ನೂ ಕಡೆಗಣಿಸಿದ ಸರಕಾರ ಬಹುಶಃ ರಾಜ್ಯದ ಜನರ ಪಾಲಿಗೆ ಬದುಕಿದ್ದೂ ಸತ್ತಂತೆ ಎಂದು ಹೇಳಿದರು

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!