ದಾವಣಗೆರೆ, (ಫೆ.18); ಗಾಯಾಳು ಮಹಿಳೆಯನ್ನು ತಮ್ಮ ಕಾರಿನಲ್ಲಿಯೇ ಆಸ್ಪತ್ರೆಗೆ ಸೇರಿಸುವ ಮೂಲಕ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮಾನವೀಯತೆ ಮೆರೆದಿದ್ದಾರೆ.
ಜಿಲ್ಲೆಯ ಕುಕ್ಕವಾಡ ಗ್ರಾಮದ ಹಾಲಮ್ಮ ಎಂಬುವರು ಕೆಎಸ್ಆರ್ಟಿಸಿ ಬಸ್ ನಲ್ಲಿ ದಾವಣಗೆರೆಗೆ ಬರುತ್ತಿದ್ದರು. ಈ ವೇಳೆ ಬಸ್ ನ ಫುಟ್ ಬೋರ್ಡ್ ಮೇಲೆ ನಿಂತಿದ್ದ ಹಾಲಮ್ಮ, ಹದಡಿ ಗ್ರಾಮದ ಸಮೀಪ ಆಯಾತಪ್ಪಿ ಕೆಳಗೆ ಬಿದ್ದಿದ್ದಾರೆ. ಅವರು ಬಿದ್ದ ರಭಸಕ್ಕೆ ಗಂಭೀರ ಗಾಯಗಳಾಗಿವೆ.
ಇದೇ ವೇಳೆ ಕಾರಿನಲ್ಲಿ ದಾವಣಗೆರೆಗೆ ತೆರಳುತ್ತಿದ್ದ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಕಾರು ನಿಲ್ಲಿಸಿ ಹಾಲಮ್ಮ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲು ಮಾಡಿದ್ದಾರೆ.
ಶಾಸಕರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….