ಬೆಂಗಳೂರು, (ಫೆ.18); ಅನಾರೋಗ್ಯದ ಹಿನ್ನಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಜೆಡಿಎಸ್, ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಟಾರ್ಜ್ ಮಾಡಲಾಗಿದೆ.
ಉಸಿರಾಟ ತೊಂದರೆ ಕಾರಣ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಚಿಕಿತ್ಸೆ ನೀಡಿದ್ದು, ಸದ್ಯ ಅವರು ಚೇತರಿಸಿಕೊಂಡಿದ್ದರಿಂದ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಆಸ್ಪತ್ರೆಯಿಂದ ಡಿಸ್ಟಾರ್ಜ್ ಆದ ಬಳಿಕ ದೇವೇಗೌಡ ಅವರನ್ನು ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಕರೆದುಕೊಂಡು ಹೋಗಲಾಗಿದೆ.
ಹೆಚ್.ಡಿ. ದೇವೇಗೌಡ ಅವರಿಗೆ ಈಗ 90 ವರ್ಷ ಪೂರ್ಣಗೊಂಡಿವೆ. ವಯೋಸಹಜ ಅರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಆದರೂ ಅವರು ರಾಜಕಾರಣದಲ್ಲಿ ಸಕ್ರಿಯವಾಗಿದ್ದು, ಸದ್ಯ ಲೋಕಸಭೆ ಚುನಾವಣೆ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….