ಬೆಂಗಳೂರು, (ಫೆ.18): ಪರ್ಫ್ಯೂಮ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಕುಂಬಳಗೋಡು ಸಮೀಪದ ರಾಮಸಂದ್ರದಲ್ಲಿ ನಡೆದಿದೆ. ಈ ದುರಂತದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿದ್ದಾರೆಂದು ವರದಿಯಾಗಿದೆ.
ಕಾರ್ಖಾನೆಯಲ್ಲಿನ ಕೆಮಿಕಲ್ ಸ್ಪೋಟಗೊಂಡ ಪರಿಣಾಮ ಕ್ಷಣ ಮಾತ್ರದಲ್ಲೇ ಎಲ್ಲೆಡೆ ಬೆಂಕಿ ಹೊತ್ತಿಕೊಂಡಿದೆ. ಭಾರಿ ಸ್ಪೋಟದಿಂದ ಫ್ಯಾಕ್ಟರಿ ಹೊತ್ತಿ ಉರಿಯುತ್ತಿದೆ.
ಈ ಅನಾಹುತದಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ವಿಷಯ ತಿಳಿದ ನಂತರ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುತ್ತಿದ್ದಾರೆ. ಸದ್ಯ ಕುಂಬಳಗೋಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….