ಚಿಕ್ಕಬಳ್ಳಾಪುರ, (ಫೆ.18); ಬಾಲಕಿಯ ಮೇಲೆ ಎರಗಿ ಅತ್ಯಾಚಾರ ಎಸಗಿ, ಗರ್ಭಿಣಿ ಮಾಡಿ ಯುವಕ ಪರಾರಿಯಾಗಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ.
ಆರೋಪಿ ಸುರೇಶ್ ಎಂಬಾತ ಈ ಕೃತ್ಯವೆಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು, ಮೇಕೆ ಮೇಯಿಸಲು ಹೋಗುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿ ಅತ್ಯಾಚಾರವೆಸಗಿದ್ದಾನೆ. ಕೃತ್ಯಕ್ಕೆ ಮಹಿಳೆಯೊಬ್ಬಳ ಸಹಕಾರ ಇತ್ತು ಎನ್ನಲಾಗಿದೆ.
ಈ ವಿಷಯವನ್ನು ಹೊರಗೆ ಹೇಳದಂತೆ ಬೆದರಿಕೆಯನ್ನೂ ಹಾಕಿದ್ದಾನೆ ಎನ್ನಲಾಗಿದೆ. ಮಾತ್ರವಲ್ಲದೇ ಮದುವೆ ಆಗುವುದಾಗಿ ನಂಬಿಸಿ, ಪದೇಪದೇ ಆಕೆಯೊಂದಿಗೆ ದೈಹಿಕ ಸಂಪರ್ಕವನ್ನು ಬೆಳೆಸಿದ್ದಾನೆ. ಆಕೆ ಗರ್ಭಿಣಿಯಾದ ಬಳಿಕ ಆರೋಪಿ ಪರಾರಿಯಾಗಿದ್ದಾನೆ ಎಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ.
ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದ್ದನ್ನು ಗಮನಿಸಿದ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆಕೆ 7 ಗರ್ಭಿಣಿ ಎಂಬುದು ಗೊತ್ತಾಗಿದೆ.
ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ಪೋಲಿಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….