ಉದ್ಯೋಗ ಭದ್ರತೆ ಆರ್ಥಿಕವಾಗಿ ಸದೃಢರಾಗಲು ಅರೆ ವೈದ್ಯಕೀಯ ಕೋರ್ಸುಗಳು ಸಹಕಾರಿ

ದೊಡ್ಡಬಳ್ಳಾಪುರ, (ಮಾ.01); ಸಾರ್ವಜನಿಕರಿಗೆ ಅತ್ಯವಶ್ಯಕವಾದ ಸೇವೆಯನ್ನು ಒದಗಿಸುವ ಕೋರ್ಸುಗಳಲ್ಲಿ ಅರೆ ವೈದ್ಯಕೀಯ ಕೋರ್ಸುಗಳು  ಮಹತ್ವದ ಪಾತ್ರ ವಹಿಸುತ್ತಿದ್ದು, ಉದ್ಯೋಗ ಭದ್ರತೆ ಆರ್ಥಿಕವಾಗಿ ಸದೃಢರಾಗಲು ಸಹಕಾರಿಯಾಗಿವೆ ಎಂದು ಸುಜ್ಞಾನ ದೀಪಿಕಾ ಸಂಸ್ಥೆಯ ಮುಖ್ಯಸ್ಥ ಎಂ.ಎಸ್ ಮಂಜುನಾಥ್ ತಿಳಿಸಿದರು. 

ನಗರದ ಕನ್ನಡ ಜಾಗೃತ ಭವನದಲ್ಲಿ ಹೆಚ್.ಇ.ಎಚ್.ಎಸ್ ಸಮೂಹ ವಿದ್ಯಾಸಂಸ್ಥೆಗಳ ಹೆಚ್.ಇ.ಎಚ್.ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಕಾಲೇಜಿನ  ಸಂಭ್ರಮ- 2024 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನ ಇರುವುದು ಶ್ರಮಪಡುವುದಕ್ಕೆ ಹೊರತು ಸುಖ ಪಡುವುದಕ್ಕಲ್ಲ, ಈಗ ಶ್ರಮಪಟ್ಟು ಜ್ಞಾನಾರ್ಜನೆ ಮಾಡಿದರೆ ಮುಂದೆ ಸುಖ ಕಟ್ಟಿಟ್ಟ ಬುತ್ತಿಯಾಗಿರುತ್ತದೆ. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಬೇಕಾಗುತ್ತದೆ. ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಬೇಕಿದೆ ಎಂದ ಅವರು, ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸದಿದ್ದತೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಕಿವಿ ಮಾತು ಹೇಳಿದರು. 

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಜಿ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಷಯ ವಿಜ್ಞಾನವನ್ನು ಅರಿತ ಮನುಷ್ಯ ತನ್ನ ಜೀವನವನ್ನು ಉಜ್ವಲಗೊಳಿಸಿಕೊಳ್ಳಬಹುದು. ಅರೆ ವೈದ್ಯಕೀಯ ಕೋರ್ಸುಗಳು  ಪಡೆದವರು ಇಂದು ವಿದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸಮಾಜದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡಿದರೆ ಸಮಾಜ ತಾನಾಗಿಯೇ ನಮ್ಮನ್ನು ಗೌರವಿಸುತ್ತದೆ. ಶ್ರಮ ಹಾಗೂ ಏಕಾಗ್ರತೆ ಸಾಧನೆಯ ಮೊದಲ ಮೆಟ್ಟಿಲುಗಳು ಎಂದರು. 

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ ಮಾತನಾಡಿ, ತಂತ್ರಜ್ಞಾನದ ದುರ್ಬಳಕೆ ಇಂದು ಹೆಚ್ಚಾಗುತ್ತಿದೆ. ಮೊಬೈಲ್‍ನಿಂದಾಗಿ ದೈಹಿಕ ಚಟುವಟಿಕೆಗಳು ಕಡಿಮೆಯಾಗುತ್ತಿವೆ. ಆರೋಗ್ಯವನ್ನು ಕಾಪಾಡಲು ಸಹಕರಿಸುವ ಅರೆ ವೈದ್ಯಕೀಯ ಪದವೀಧರರು ಮೊದಲು ತಮ್ಮ ಆರೋಗ್ಯದ ಕಡೆ ಲಕ್ಷ್ಯ ನೀಡಬೇಕು. ಕೇವಲ ಪುಸ್ತಕವನಷ್ಟೇ ಜೀವನ ನಿರ್ವಹಣೆಗೆ ಸಾಕಾಗುವುದಿಲ್ಲ. ತಾಳ್ಮೆ ಹಾಗೂ ಹೊಂದಾಣಿಕೆ ಜೀವನದ ಮುಖ್ಯ ಭಾಗಗಳಾಗಿವೆ. ಸಾಧಾರಣ ವ್ಯಕ್ತಿಗಳಾಗಿದ್ದವರು ನಿರಂತರ ಪರಿಶ್ರಮದಿಂದ ಉನ್ನತ ಮಟ್ಟಕ್ಕೇರಿರುವ ನಿದರ್ಶನಗಳಿವೆ ಎಂದರು. ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಹೂ ಹಾಗು ನೆನಪಿನ ಕಾಣಿಕೆ ನೀಡಿ ಸ್ವಾಗತಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಗೌ.ರಾ.ರಾಮಮೂರ್ತಿ, ಅಧ್ಯಾಪಕರಾದ ಸುನಿಲ್ ಕುಮಾರ್, ಕೀರ್ತನ ಭಾಗವಹಿಸಿದ್ದರು. 

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!