ಬೆಂಗಳೂರು, (ಮಾ.08); ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿಯುವುದಾಗಿ ಮಾಜಿ ಸಚಿವ ಎಂಟಿಬಿ ನಾಗಾರಾಜ ಘೋಷಿಸಿದ್ದು, ಅಭಿಮಾನಿಗಳಿಗೆ ನಿರಾಸೆಯಾಗಿದೆ.
ಹೊಸಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ತಾವು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆ ಸ್ಪರ್ಧಿಸುವಂತೆ ಪಕ್ಷದ ನಾಯಕರು ಹೇಳಿದ್ದಾರೆ. ಆದರೆ ನಾನು ಸ್ಪರ್ಧಿಸುವುದಿಲ್ಲ. ಈ ಬಾರಿ ಯಾರು ಲೋಕಸಭಾ ಚುನಾವಣೆ ಗೆಲ್ಲುತ್ತಾರೆ ಎಂಬುದು ನಮ್ಮ ವರಿಷ್ಠರಿಗೆ ಗೊತ್ತಿದೆ. ಹೀಗಾಗಿ ಗೆಲ್ಲುವವರಿಗೆ ಪಕ್ಷದಿಂದ ಟಿಕೆಟ್ ನೀಡಲು ನಿರ್ಧರಿಸಲಾಗಿದೆ ಎಂದರು.
ಕರ್ನಾಟಕದ ಎಲ್ಲ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಇನ್ನೆರಡು ದಿನಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಎಂಟಿಬಿ ನಾಗರಾಜ್ ಹೇಳಿಕೆ ಅಭಿಮಾನಿಗಳಿಗೆ ನಿರಾಸೆಗೆ ಕಾರಣವಾಗಿದೆ. ಇತ್ತೀಚೆಗಷ್ಟೇ ದೊಡ್ಡಬಳ್ಳಾಪುರದಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಅಭಿಮಾನಿಗಳು ಎಂಟಿಬಿ ಅವರಿಗೆ ಚಿಕ್ಕಬಳ್ಳಾಪುರ ಲೋಕಸಭೆಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದರು.
ಉಳಿದಂತೆ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ಇಬ್ಬರು ಮಾತ್ರ ಉಳಿದಿದ್ದು, ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಟಿಕೆಟ್ ಲಭಿಸಲಿದೆ ಎಂಬ ಮಾತು ವ್ಯಾಪಕವಾಗಿದ್ದು, ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಪುತ್ರ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….