ಬೆಂಗಳೂರು, (ಮಾ.08); ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ವಿಚಾರ ಎಐಸಿಸಿಗೆ ಬಿಟ್ಟಿದ್ದು ಯಾವ ಕ್ಷಣದಲ್ಲಿ ಬೇಕಾದ್ರೂ ಪಟ್ಟಿ ಬಿಡುಗಡೆ ಆಗಬಹುದು. ಮೊದಲ ಪಟ್ಟಿಯಲ್ಲಿ ಎಷ್ಟು ಅಭ್ಯರ್ಥಿಗಳಿದ್ದಾರೆ ಹೇಳೋಕೆ ಆಗಲ್ಲ. 50% ಚರ್ಚೆ ಅಷ್ಟೇ ಮಾಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.
ಮಲ್ಲಿಕಾರ್ಜುನ ಖರ್ಗೆ ಭೇಟಿ ಬಗ್ಗೆ ಮಾತನಾಡಿದ ಅವರು, ನಾನು ಪಕ್ಷದ ಅಧ್ಯಕ್ಷ, ಅವರು ರಾಷ್ಟ್ರೀಯ ಅಧ್ಯಕ್ಷರು. ನಿನ್ನೆ ಮೀಟಿಂಗ್ ನಡೆಯಿತು. ಮುಂದಿನ ಕೆಲಸಗಳನ್ನು ಅವರು ಮಾಡುತ್ತಾರೆ. ನಾವು ಪಕ್ಷದ ಸಂಘಟನೆ ವಿಚಾರದಲ್ಲಿ ಏನು ಮಾತನಾಡಬೇಕು ಅದನ್ನು ಚರ್ಚೆ ಮಾಡಿದ್ದೇವೆ ಅಷ್ಟೇ ಎಂದು ತಿಳಿಸಿದರು.
ದಲಿತ ಮುಖ್ಯಮಂತ್ರಿ ವಿಚಾರವಾಗಿ ಮಹದೇವಪ್ಪ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ, ಆಸೆ ಪಡೋದ್ರಲ್ಲಿ ತಪ್ಪೇನಿಲ್ಲ. ಯಾರಗ ರ್ಯಾರೋ ಏನೇನೋ ಆಸೆ ಪಡುತ್ತಾರೆ. ಅವರೂ ಕೂಡಾ ಆಸೆ ಪಟ್ಟಿದ್ದಾರೆ ಅಷ್ಟೇ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….