ಧರ್ಮಸ್ಥಳ, (ಮಾ.08); ಧರ್ಮಸ್ಥಳ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಶ್ರೀ ಮಂಜುನಾಥನಿಗೆ ಸೇವೆ ಸಲ್ಲಿಸುತ್ತಿದ್ದ ಲತಾ ಹೆಸರಿನ ಆನೆ ಇಂದು ಹೃದಯಾಘಾತದಿಂದ ನಿಧನ ಹೊಂದಿದೆ.
60ವರ್ಷ ಪ್ರಾಯದ ಲತಾ ಆನೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು. ಇಂದು ಮಧ್ಯಾಹ್ನದ ವೇಳೆ ಹೃದಯಾಘಾತದಿಂದ ಮೃತಪಟ್ಟಿದೆ.
ಲತಾ ಆನೆಯನ್ನು ಕಳೆದುಕೊಂಡಿರುವ ಶಿವಾನಿ ಹಾಗೂ ಲಕ್ಷ್ಮಿ ಇಬ್ಬರು ಮಂಕಾಗಿದ್ದಾರೆ.
ಧರ್ಮಸ್ಥಳ ಕ್ಷೇತ್ರದ ಎಲ್ಲಾ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುತ್ತಿದ್ದಳು. ಅದರಲ್ಲಿಯೂ ಮಂಜನಾಥನ ರಥೋತ್ಸವ, ಲಕ್ಷದೀಪೋತ್ಸವ, ಶಿವರಾತ್ರಿ ಉತ್ಸವಗಳಲ್ಲಿ ಲತಾ ಎಂದಿಗೂ ಮುಂಚೂಣಿಯಲ್ಲಿರುತ್ತಿದ್ದಳು.
ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಇಂದು ಸಂಜೆ ಲತಾಳ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….