ರಾಜಸ್ಥಾನ, (ಮಾ.08): ಮಹಾಶಿವರಾತ್ರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ 14 ಮಕ್ಕಳು ಗಾಯಗೊಂಡಿರುವ ಘಟನೆ ಕೋಟಾದಲ್ಲಿ ನಡೆದಿದೆ.
ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ, ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಹೀರಾಲಾಲ್ ನಗರ್ ತಿಳಿಸಿದ್ದಾರೆ.
ಘಟನೆಯಿಂದಾಗಿ ಆಸ್ಪತ್ರೆ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜಸ್ಥಾನದ ಇಂಧನ ಸಚಿವ ಹೀರಾಲಾಲ್ ನಗರ್ ಆಸತ್ರೆಗೆ ಭೇಟಿ ನೀಡಿ ಗಾಯಗೊಂಡ ಮಕ್ಕಳ ಸ್ಥಿತಿಗತಿ ವಿಚಾರಿಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಹೀರಾಲಾಲ್ ನಗರ್ ಇದೊಂದು ಅತ್ಯಂತ ದುಃಖಕರ ಘಟನೆ.. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರಿಗೆ ಶೇಕಡಾ 100ರಷ್ಟು ಸುಟ್ಟ ಗಾಯಗಳಾಗಿವೆ.
ಸಾಧ್ಯವಿರುವ ಎಲ್ಲ ಚಿಕಿತ್ಸೆ ನೀಡಲು ವಿಶೇಷ ತಂಡವನ್ನು ರಚಿಸಲಾಗಿದೆ. ಯಾವುದೇ ರೀತಿಯ ನಿರ್ಲಕ್ಷ್ಯ ಕಂಡುಬಂದಲ್ಲಿ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಹೈ-ಟೆನ್ಷನ್ ಓವರ್ ಹೆಡ್ ವಿದ್ಯುತ್ ತಂತಿ ಸ್ಪರ್ಶಗೊಂಡು ಹೆಚ್ಚಿನ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….