ಹರಿತಲೇಖನಿ ದಿನಕ್ಕೊಂದು ಕಥೆ: ಮಹಾಶಿವರಾತ್ರಿ ಹಿಂದಿನ ಕಥೆ.. ಹಬ್ಬದ ಆಚರಣೆ

ಭಾರತೀಯರು ಆಚರಿಸುವ ಯಾವುದೇ ಹಬ್ಬ-ಹರಿದಿನಗಳು, ಸಮಾರಂಭ, ದಿನಾಚರಣೆ, ಜಯಂತಿ, ಉತ್ಸವಗಳು ಸಾಮಾನ್ಯವಾಗಿ ಅಮರವಾಗಿ ಉಳಿದಿರುವ ಯಾವುದೋ ಗತ ವ್ಯಕ್ತಿಯ, ಶಕ್ತಿಯ ಅಥವಾ ಪ್ರಾಚೀನತೆಯ ಪ್ರತೀಕಗಳಾಗಿರುತ್ತವೆ.

ಹೀಗೆ ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದಾದ ಮಹಾಶಿವರಾತ್ರಿ ಆಚರಣೆಗೂ ಹಿನ್ನೆಲೆಯಿದೆ, ಅನೇಕ ಕಥೆಗಳಿವೆ. ಶಿವನು ಪಾರ್ವತಿ ದೇವಿಯನ್ನು ವಿವಾಹವಾದ ದಿನವಾಗಿ ಶಿವರಾತ್ರಿಯೆಂದು ಹೇಳಲಾಗುತ್ತದೆ. ಅಲ್ಲದೆ, ದೇವತೆಗಳು ಹಾಗೂ ಅಸುರರ ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ. ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣದ ಇನ್ನೊಂದು ಮಹಿಮೆ.

ಜೊತೆಗೆ, ಭಗೀರಥನ ತಪಸ್ಸಿಗೆ ಮೆಚ್ಚಿ ಇಳೆಗೆ ಇಳಿದು ಬಂದ ಗಂಗೆಯನ್ನು ಶಿವ ತನ್ನ ಜಡೆಯಲ್ಲಿ ತುಂಬಿಸಿಕೊಂಡಿದ್ದ. ಇದರಿಂದ ವಿಚಲಿತನಾದ ಭಗೀರಥ ಗಂಗೆಯನ್ನು ಭೂಮಿಗೆ ಹರಿಸುವಂತೆ ಶಿವನನ್ನು ಪ್ರಾರ್ಥಿಸಿದ. ಆತನ ಭಕ್ತಿಗೆ ಮೆಚ್ಚಿ ಶಿವ ಗಂಗೆಯನ್ನು ಹರಿಯಬಿಟ್ಟಿದ್ದು ಇದೇ ದಿನ ಎನ್ನುತ್ತದೆ ಪುರಾಣ. ಇನ್ನು, ಶಿವನ ಆದಿ ಮತ್ತು ಅಂತ್ಯ ಹುಡುಕಲು ಹೊರಟ ವಿಷ್ಣು ಹಾಗೂ ಬ್ರಹ್ಮನಿಗೆ, ಶಿವರಾತ್ರಿಯಂದು ಶಿವ ಲಿಂಗರೂಪಿಯಾಗಿ ದರ್ಶನ ನೀಡಿದ ಎಂಬುದು ಪ್ರತೀತಿ.

ಶಿವರಾತ್ರಿ ಆಚರಣೆಯ ಹಿನ್ನೆಲೆ: ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತಃ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಮಾಘ ಬಹುಳ ಚತುರ್ದಶಿಯ ರಾತ್ರಿಯೇ ಶಿವ ಪಾರ್ವತಿಯನ್ನು ವರಿಸಿದ್ದನಂತೆ. ಹೀಗಾಗಿ ಅಂದು ರಾತ್ರಿ ದೇವಾನು ದೇವತೆಗಳೆಲ್ಲರೂ ಜಾಗರಣೆ ಮಾಡಿ, ಗಿರಿಜಾ ಕಲ್ಯಾಣ ವೀಕ್ಷಿಸಿ, ಶಿವಪಾರ್ವತಿಯರಿಬ್ಬರನ್ನೂ ಪೂಜಿಸಿದರಂತೆ. ಹೀಗಾಗಿಯೇ ಜಾಗರಣೆ ಪದ್ಧತಿ ಆಚರಣೆಗೆ ಬಂದಿದೆ ಎನ್ನಲಾಗುತ್ತದೆ.

ಪ್ರತಿ ಸಂವತ್ಸರದಲ್ಲಿ, ಶಿಶಿರ ಋತುವಿನ ಮಾಘ ಮಾಸದ ಕೃಷ್ಣಪಕ್ಷ ಚತುರ್ದಶಿಯಂದು, ರಾತ್ರಿ ವೇಳೆಯಲ್ಲಿ ಶಿವ ಪಾರ್ವತಿ ಜೊತೆಯಲ್ಲಿ ಭೂಮಿಯಲ್ಲಿ ಸಂಚರಿಸುತ್ತ ಎಲ್ಲಾ ಸ್ಥಾವರ ಜಂಗಮ ಲಿಂಗಗಳಲ್ಲಿ ಸಂಕ್ರಮಣಗೊಳ್ಳುತ್ತಾನೆ. ಆ ಸಮಯದಲ್ಲಿ ಅಂದರೆ ಶಿವರಾತ್ರಿಯಂದು ರಾತ್ರಿಯ ವೇಳೆಯಲ್ಲಿ ತನ್ನನ್ನು ಯಾರು ಪೂಜಿಸುವರೋ ಅವರ ಪಾಪಗಳು ಪರಿಹಾರವಾಗುತ್ತವೆ ಎಂದು ಸ್ವತಃ ಶಿವನೇ ತಿಳಿಸಿದ್ದಾನೆ ಎಂಬುದರ ಬಗ್ಗೆ ಶಾಸ್ತ್ರೋಕ್ತಿ ಇದೆ.

ಶಿವರಾತ್ರಿಯು ಸಮಯ ಪೂಜೆಗೆ ಬಹು ಪ್ರಾಶಸ್ತ್ಯವಾದ ಸಮಯ. ಆ ದಿನ ರಾತ್ರಿಯಲ್ಲಿ ಮೋಡಗಳಿಲ್ಲದ ಶುಭ್ರ ಆಕಾಶ, ಮಂಗಳಕರ ನಾದ ಶುಭ್ರ ಚಂದ್ರ ಸ್ಪೂರ್ತಿ ಹುಟ್ಟಿಸುವ ಸಂವೇದನಾಶೀಲ ವಾತಾವರಣವನ್ನು ಕಾಣಬಹುದು. ಈ ಪರ್ವಕಾಲ ಪೂಜೆಗೆ ಪ್ರಶಸ್ತವಾದ ಕಾಲವಾಗಿದ್ದು, ಅಂದು ಈಶ್ವರನ ಆರಾಧನೆ ಮಾಡಿದರೆ ಪಾಪ ಕರ್ಮಗಳನ್ನು ಕಳೆದುಕೊಳ್ಳುತ್ತಾನೆ ಎಂಬ ಪ್ರತೀತಿ ಸ್ಕಂದ ಪುರಾಣದಲ್ಲಿ ಉಲ್ಲೇಖವಾಗಿದೆ.

ಹೀಗೆ, ಮಹಾಶಿವರಾತ್ರಿಯ ಈ ಪವಿತ್ರ ದಿನದ ಮಧ್ಯರಾತ್ರಿಯಲ್ಲಿ ಶಿವ ಲಿಂಗ ರೂಪದಲ್ಲಿ ಆವಿರ್ಭವಿಸಿದನಂತೆ. ಹಿಂದೂಗಳಿಗೆ ಪ್ರಮುಖವಾಗಿ ಶಿವಭಕ್ತರಿಗೆ ಮಹಾ ಶಿವರಾತ್ರಿ ಉಪವಾಸದ ದಿನವಾದರೂ ಹಬ್ಬದ ಸಡಗರ ಮನೆ ಮಾಡುತ್ತದೆ. ಅಂದು ಪ್ರಾತಃಕಾಲದಲ್ಲಿಯೇ ಎದ್ದು, ಸ್ನಾನ ಮಾಡಿ, ಮಡಿ ವಸ್ತ್ರ ತೊಟ್ಟು, ಉಪವಾಸವಿದ್ದು, ಶಿವದೇವಾಲಯಗಳಿಗೆ ತೆರಳಿ, ಶಿವಾರ್ಚನೆ ಮಾಡಿದರೆ ಮತ್ತು ರಾತ್ರಿಯಿಡೀ ಜಾಗರಣೆ ಮಾಡಿ ಶಿವನ ಪೂಜೆ ಮಾಡಿದರೆ ಎಲ್ಲ ಕಷ್ಟಗಳೂ ಪರಿಹಾರವಾಗಿ ಸುಖ, ಶಾಂತಿ, ಸಂಪತ್ತು ಲಭಿಸುತ್ತದೆ, ಪಾಪ ಪರಿಹಾರವಾಗುತ್ತದೆ ಎಂಬ ನಂಬಿಕೆಯೂ ಇದೆ.

ಸಾಮಾನ್ಯವಾಗಿ ಎಲ್ಲ ಶಿವ ದೇವಾಲಯಗಳಲ್ಲೂ ಮಹಾ ರಾತ್ರಿಯಿಡೀ ಗಂಗಾಜಲಾಭಿಷೇಕ, ಪಂಚಾಮೃತ ಅಭಿಷೇಕ ನಡೆಯುತ್ತದೆ, ಗೋರೋಚನ, ವಿಭೂತಿ ಹಾಗೂ ರುದ್ರಾಕ್ಷಿ ಮಾಲೆಯಿಂದ ಶಿವಲಿಂಗವನ್ನು ಅಲಂಕರಿಸಲಾಗುತ್ತದೆ. ಪುಷ್ಪಗಳಿಂದ ಹಾಗೂ ಬಿಲ್ವಪತ್ರೆಯಿಂದ ವಿಶೇಷ ಅಲಂಕಾರದೊಂದಿಗೆ, ಪೂಜಾ ಕೈಂಕರ್ಯಗಳು ನಡೆಯುತ್ತವೆ. ಮಹಾ ಶಿವರಾತ್ರಿಯಂದು ಬಿಲ್ವಪತ್ರೆಯನ್ನು ಶಿವಲಿಂಗದ ಮೇಲಿಟ್ಟು ಪೂಜಿಸಿದರೆ, ಯಾಗ ಮಾಡಿದ ಫಲ ದೊರೆಯುತ್ತದೆ ಎಂದೂ ಹಿರಿಯರು ಹೇಳುತ್ತಾರೆ.

ಶಿವರಾತ್ರಿಯ ಆಚರಣೆಗೆ ವೈಜ್ಞಾನಿಕ ಕಾರಣ: ಶಿವರಾತ್ರಿಯ ಆಚರಣೆಗೆ ವೈಜ್ಞಾನಿಕ ಕಾರಣಗಳೂ ಇವೆ. ಸೂರ್ಯ ಮತ್ತು ಚಂದ್ರರ ಚಲನೆಯಿಂದಾಗುವ ಎಲ್ಲಾ ಕಾಲ ವ್ಯತ್ಯಾಸಕ್ಕೆ ನಮ್ಮ ದೇಹ ಹೊಂದಿಕೊಳ್ಳ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಈ ಹಬ್ಬದ ಆಚರಣೆ ಮುಖ್ಯವಾಗಿದೆ. ಈ ಸಮಯದಲ್ಲಿ ಚಳಿಗಾಲವು ಮುಗಿದು ಬೇಸಿಗೆ ಕಾಲವು ಪ್ರಾರಂಭಗೊಳ್ಳುವುದು. ಅಂದರೆ ಈ ದಿನದಂದು ಚಳಿಗಾಲ ಉತ್ತುಂಗದಲ್ಲಿದ್ದು ಕೃಷ್ಣ ಪಕ್ಷದ ಕೊನೆಯ ದಿನವೂ ಆಗಿರುತ್ತದೆ. ಈ ದಿನದಲ್ಲಿ ಸೂರ್ಯನ ಶಾಖ ಕಡಿಮೆಯಾಗಿರುತ್ತದೆ ಮತ್ತು ಚಂದ್ರನ ಪ್ರಕಾಶವೂ ಕ್ಷೀಣಿಸಿರುತ್ತದೆ. ನಮ್ಮ ಪೂರ್ವಜರು ಇದನ್ನೆಲ್ಲಾ ಅರಿತೇ ಹಬ್ಬ ಹರಿದಿನಗಳನ್ನು ಆಚರಿಸುತ್ತಿದ್ದರು.

ಇನ್ನು, ಈ ದಿನದಂದು ನಾವು ಮಾಡುವ ಶಿವನ ಪೂಜೆ, ಉಪವಾಸಗಳು ನಮಗೆ ತುಂಬಾ ಉಪಯುಕ್ತ. ಅಂದು ಪರಶಿವನಿಗೆ ನೀರಿನ ಅಭಿಷೇಕ ಮತ್ತು ಬಿಲ್ವ ಪತ್ರೆಯ ಪೂಜೆ ಮಾಡುತ್ತೇವೆ.

ಬಿಲ್ವ ಪತ್ರೆಯಲ್ಲಿ ಉಸಿರಾಟದ ತೊಂದರೆ ನಿವಾರಿಸುವ ಗುಣವಿದೆ. ಬಿಲ್ವವನ್ನು ಲಿಂಗದ ಮೇಲೆ ಹಾಕುವಾಗ ಅದರ ವಾಸನೆ ನಮ್ಮ ದೇಹದ ಒಳಗೆ ಹೋಗುವುದು. ಶಿವನ ಲಿಂಗವು ಕಲ್ಲಿನದಾಗಿದ್ದು ಅದರ ಮೇಲೆ ನೀರನ್ನು ಸುರಿಯುವುದರಿಂದ ಬಹಳಷ್ಟು ಶಕ್ತಿ ಹೊರಹೊಮ್ಮುತ್ತದೆ. ಅದೊಂದು ವಿಶಿಷ್ಟ ಕಲ್ಲಿನಿಂದ ಮಾಡಿದ ಲಿಂಗವಾಗಿರುತ್ತದೆ.

ಜೊತೆಗೆ, ಪೂಜಿಸುವ ದೇಗುಲವನ್ನು ವಾಸ್ತುವಿನ ಪ್ರಕಾರ ಕಟ್ಟಿರುತ್ತಾರೆ. ಈ ಕ್ಷೇತ್ರದಲ್ಲಿ ಹೆಚ್ಚಿನ ಗುರುತ್ವಾಕರ್ಷಣವಿದ್ದು ಅದನ್ನು ಶಿವ ಶಕ್ತಿಯೆಂದೂ ಕರೆಯುವರು. ಇಲ್ಲಿ ಮಂತ್ರಗಳನ್ನು ಪಠಿಸುತ್ತಾ ವಿಶಿಷ್ಟ ಕಲ್ಲಿನಿಂದ ಕೆತ್ತಿರುವ ಲಿಂಗಕ್ಕೆ ನೀರಿನ ಅಭಿಷೇಕ ಮಾಡುವುದರಿಂದ ಸುತ್ತಮುತ್ತಲೆಲ್ಲ ಹೆಚ್ಚಿನ ಶಕ್ತಿ ಬರುವುದೆಂಬ ನಂಬಿಕೆ ಇದೆ.

ಸಂಗ್ರಹ ವರದಿ; ಗಣೇಶ್. ಎಸ್., ದೊಡ್ಡಬಳ್ಳಾಪುರ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]