ಬೆಂಗಳೂರು, (ಮಾ.10): ಲೋಕಸಭೆ ಚುನಾವಣೆ ಯಾವುದೇ ಸಮಯದಲ್ಲಿ ಘೋಷಣೆ ಆಗಬಹುದು ಎಂಬ ರೀತಿ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಇದೇ ತಿಂಗಳಲ್ಲಿಯೇ ಘೋಷಣೆ ಆಗುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಮಾರ್ಚ್ 13, 14 ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದ್ದು, ಅಷ್ಟರಲ್ಲಿ ನಾವು ಸರ್ಕಾರಿ ಕಾರ್ಯಕ್ರಮ ಮಾಡಬೇಕಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಎಂಎಲ್ ಸಿ ಪುಟ್ಟಣ್ಣ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ನಮಗೆ ಸಮಯ ಇಲ್ಲ. ಕೇಂದ್ರ ಸರ್ಕಾರ ತರಾತುರಿಯಲ್ಲಿ ಉದ್ಘಾಟನೆ ಮಾಡುತ್ತಿದೆ ಎಂದರು.
ಕಾಂಗ್ರೆಸ್ ಸಹ ಚುನಾವಣೆ ಎದುರಿಸಲು ತಯಾರಿ ಮಾಡಿಕೊಳ್ಳುತ್ತಿದೆ. ಸರ್ಕಾರಿ ಕಾರ್ಯಕ್ರಮಗಳನ್ನು ಬೇಗ ಮುಗಿಸಿಕೊಳ್ಳಬೇಕು ಎಂದೂ ಹೇಳಿದ್ದಾರೆ. ಒಟ್ಟಾರೆ, ಚುನಾವಣೆ ಸನಿಹದಲ್ಲೇ ಇದೆ ಎಂಬ ಎಚ್ಚರಿಕೆ ಮಾತುಗಳನ್ನು ಆಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….