ಬೆಂಗಳೂರು, (ಮಾ.23); ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಇಂದು ಕೆಪಿಸಿಸಿ ಕಚೇರಿಯಲ್ಲಿ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಶಾಸಕರು ಹಾಗೂ ಪಕ್ಷದ ನಾಯಕರೊಂದಿಗೆ ಮಹತ್ವ ಸಭೆ ನಡೆಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ.
ಮೂಲಗಳ ಮಾಹಿತಿ ಅನ್ವಯ, ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಕ್ಷಾ ರಾಮಯ್ಯ ಪರ ಒಲವು ವ್ಯಕ್ತವಾಗಿದ್ದು, ಅವರೇ ಅಭ್ಯರ್ಥಿಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಕುರಿತು ನಾಳೆ ಸಂಜೆಯ ಒಳಗಾಗಿ ಘೋಷಣೆ ಹೊರಬೀಳುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಸಭೆಯಲ್ಲಿ ಸಚಿವ ಡಾ.ಎಂ.ಸಿ.ಸುಧಾಕರ್, ಕೆಹೆಚ್ ಮುನಿಯಪ್ಪ, ಶಾಸಕ ಪ್ರದೀಪ್ ಈಶ್ವರ್, ಮಾಜಿ ಶಾಸಕರಾದ ರಮೇಶ್ ಕುಮಾರ್, ಟಿ.ವೆಂಕಟರಮಣಯ್ಯ, ಶಿವಶಂಕರ್ ರೆಡ್ಡಿ ಮತ್ತಿತರರಿದ್ದರು ಎನ್ನಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….