ದೊಡ್ಡಬಳ್ಳಾಪುರ, (ಮಾ.23); ಇಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ-ನ್ಯಾಕ್ “ಎ” ಶ್ರೇಣಿ ದೊರೆತಿದೆ.
ಕಳೆದ ವಾರ ಕಾಲೇಜಿಗೆ ಭೇಟಿ ನೀಡಿದ್ದ ತಜ್ಞರ ಸಮಿತಿ ವಿವಿಧ ಹಂತಗಳಲ್ಲಿ ಸಮಗ್ರ ಪರಿಶೀಲನೆ ನಡೆಸಿತ್ತು. 3.24 ಸಿಜಿಪಿಎ ಅಂಕಗಳೊಂದಿಗೆ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯಕ್ಕೆ ಎ ಶ್ರೇಣಿ ನೀಡಲಾಗಿದ್ದು, ಮುಂದಿನ 5 ವರ್ಷಗಳವರೆಗೆ ಈ ಮೌಲ್ಯಾಂಕನ ಚಾಲ್ತಿಯಲ್ಲಿರುತ್ತದೆ.
ಮೊದಲ ಯತ್ನದಲ್ಲೇ ನ್ಯಾಕ್ ಎ ಶ್ರೇಣಿ ಪಡೆದಿರುವ ಆರ್‌ಎಲ್‌ಜೆಐಟಿ ಸಾಧನೆಗೆ ಶ್ರೀ ದೇವರಾಜ ಅರಸ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಜಿ.ಎಚ್.ನಾಗರಾಜ, ಉಪಾಧ್ಯಕ್ಷ ಜೆ.ರಾಜೇಂದ್ರ, ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ಪ್ರಾಂಶುಪಾಲ ಡಾ.ವಿಜಯ್ ಕಾರ್ತಿಕ್ ಸಂತಸ ವ್ಯಕ್ತಪಡಿಸಿದ್ದು, ಪರಿಶ್ರಮ ವಹಿಸಿದ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….