ಬರ ಪರಿಹಾರ: ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ರಾಜ್ಯ ಸರ್ಕಾರ..!

ಬೆಂಗಳೂರು, (ಮಾ 23): ರಾಜ್ಯಕ್ಕೆ NDRF ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಬಾಗಿಲು ಬಡಿದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 

ಕೇಂದ್ರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು ಕಾದು ಸಾಕಾಗಿ ಸುಪ್ರೀಂಕೋರ್ಟ್ ಮೊರೆ ಹೋದೆವು. ಸಂವಿಧಾನದ ಪರಿಚ್ಛೇದ 32 ರ ಅಡಿಯಲ್ಲಿ ನಾವು ನಮ್ಮ ಕಾನೂನುಬದ್ದ ಹಕ್ಕನ್ನು ಚಲಾಯಿಸಿದ್ದೇವೆ ಎಂದು ವಿವರಿಸಿದರು. 

ಬರದ ಸಂದರ್ಭದಲ್ಲಿ , ತುರ್ತು ಸಂದರ್ಭಗಳಲ್ಲಿ ಜನರಿಗೆ ತುರ್ತಾಗೆ ಸ್ಪಂದಿಸದ ಬೇಕು ಎನ್ನುವ ಉದ್ದೇಶದಿಂದಲೇ ವಿಪತ್ತು ನಿರ್ವಹಣಾ ಕಾನೂನು ಮಾಡಲಾಗಿದೆ. ಆದರೆ ಇದುವರೆಗೂ ಕೇಂದ್ರ ಕಾನೂನು ಬದ್ದವಾಗಿ ನಮಗೆ ಬರಬೇಕಾದ ಹಣದಲ್ಲಿ ಒಂದೇ ಒಂದು ಪೈಸೆಯನ್ನೂ ಕೊಟ್ಟಿಲ್ಲ ಎಂದರು.

ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ರಾಜ್ಯದಲ್ಲಿ 240 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳನ್ನು ಬರಗಾಲ ಅಂತ ಘೋಷಿಸಿದ್ದೇವೆ. ನಾಲ್ಕು ಬಾರಿ ಮೌಲ್ಯಮಾಪನ ಮಾಡಿದ್ದೇವೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ನಷ್ಟ ಆಗಿದೆ. 3 ಬಾರಿ ಸತತವಾಗಿ ಕೇಂದ್ರಕ್ಕೆ ಮನವಿ ಪತ್ರ ಬರೆದೆವು. ಇದುವರೆಗೂ ಕೇಂದ್ರ ಸರ್ಕಾರ ರಾಜ್ಯದ ಪಾಲಿನಲ್ಲಿ ನಯಾ ಪೈಸೆಯನ್ನೂ ಕೊಟ್ಟಿಲ್ಲ ಎಂದರು. 

ನಿಯಮವಾಳಿ ಪ್ರಕಾರ ರಾಜ್ಯ ಸರ್ಕಾರ ಮನವಿ ಮಾಡಿದ ವಾರದಲ್ಲಿ ಕೇಂದ್ರದ ತಂಡ ಬರಬೇಕು. ಆದರೆ, ಅಕ್ಟೋಬರ್ ನಲ್ಲಿ ಕೇಂದ್ರ ತಂಡ ರಾಜ್ಯಕ್ಕೆ ಬಂದು‌ ಪರಿಶೀಲನೆ ನಡೆಸಿ ಕೇಂದ್ರಕ್ಕೆ IMCT ವರದಿ ನೀಡಿದೆ. ಈ ವರದಿ ಕೊಟ್ಟ ಒಂದು ತಿಂಗಳಲ್ಲಿ ರಾಜ್ಯಕ್ಕೆ ಬರ ಪರಿಹಾರ ಕೊಡವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವುದು ನಿಯಮ. ಆದರೆ, ಇದುವರೆಗೂ ಕೇಂದ್ರ ರಾಜ್ಯದ ಜನರಿಗೆ ಸ್ಪಂದಿಸಿಲ್ಲ ಎಂದು NDRF ನಿಯಮಾವಳಿಗಳನ್ನು ಮಾಧ್ಯಮಗಳ ಎದುರಿಗೆ ಓದಿದರು.

ಕೇಂದ್ರ ತಂಡ ವರದಿ ಕೊಟ್ಟರೂ ನಮಗೆ ಕೇಂದ್ರ ಸರ್ಕಾರ ಸ್ಪಂದಿಸದಿದ್ದಾಗ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ದೆಹಲಿಗೆ ಹೋದರೂ ಕೇಂದ್ರ ಸಚಿವರ ಭೇಟಿಗೆ ಅವಕಾಶವನ್ನೇ ಕೊಡಲಿಲ್ಲ. ಬಳಿಕ ನಾನೇ ಡಿಸೆಂಬರ್ 20 ರಂದು ನಾನು ಮತ್ತು ಕೃಷ್ಣಬೈರೇಗೌಡ ಅವರು ಮತ್ತೆ ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆವು. ಆದರೂ ನಮಗೆ ಪರಿಹಾರ ಕೊಡಲಿಲ್ಲ. 

ಬಳಿಕ ನಾನು ಬೆಂಗಳೂರಿನಲ್ಲೇ ಪ್ರಧಾನಿ ಮೋದಿಯವರನ್ನು‌ ಖುದ್ದಾಗಿ ಭೇಟಿ ಮಾಡಿ ಮನವಿ ಮಾಡಿದೆ. ಆದರೂ ಪರಿಹಾರ ಸಿಗಲಿಲ್ಲ. 

ಕೇಂದ್ರದಿಂದ ನಯಾಪೈಸೆ ಬಿಡುಗಡೆ ಆಗದಿದ್ದಾಗ 450 ಕೋಟಿ, ಕುಡಿಯುವ ನೀರಿಗೆ 870 ಕೋಟಿಬಿಡುಗಡೆ ಮಾಡಿದೆವು. ಡಿಸಿಗಳ ಬಳಿ ಇನ್ನೂ 800 ಕೋಟಿ ರೂಪಾಯಿ ಹಣ ಬರನಿರ್ವಹಣೆ ಉದ್ದೇಶಕ್ಕಾಗಿಯೇ ಮೀಸಲಿಡಲಾಗಿದೆ. ಬರ ನಿರ್ವಹಣೆ ಕುರಿತಾಗಿ ಅಧಿಕಾರಿಗಳಿಗೆ ಸ್ಪಷ್ಡ ಸೂಚನೆಗಳನ್ನು ನೀಡಲಾಗಿದೆ ಎಂದರು. 

 4600 ಕೋಟಿ ಇನ್ ಪುಟ್ ಸಬ್ಸಿಡಿಗೆ ಹಣ ಬೇಕು. ಕಾಯ್ದೆ ಪ್ರಕಾರ ಇಂಥಾ ಸನ್ನಿವೇಶದಲ್ಲಿ ತಡ ಮಾಡದೆ ಹಣ ಬಿಡುಗಡೆ ಆಗಬೇಕಿತ್ತು. ಆದರೆ ಐದು ತಿಂಗಳಾದರೂ ನಮಗೆ NDRF ನಿಧಿ ಬಂದೇ ಇಲ್ಲ. ಹೀಗಾಗಿ ನಾವು ಬೇರೆ ದಾರಿ ಇಲ್ಲದೆ ಸುಪ್ರೀಂ ಕೋರ್ಟ್ ಬಾಗಿಲು ಬಡಿಯಬೇಕಾಯಿತು. 

ನಮ್ಮ ನಾಡಿಗೆ, ನಮ್ಮ ನಾಡಿನ ಜನರಿಗೆ ಆಗಿರುವ ಅನ್ಯಾಯವನ್ನು ಸರಿಮಾಡಿ ಎಂದು, NDRF ನಿಧಿ ಕೊಡಿ ಎಂದು ಮೇಲಿಂದ ಮೇಲೆ ಮನವಿ ಮಾಡಿ ಎಲ್ಲಾ ರೀತಿಯಲ್ಲೂ ಬೇಡಿಕೆ ಸಲ್ಲಿಸಿದರೂ ಪ್ರಯೋಜನ ಆಗಲಿಲ್ಲ. ಈ ಕಾರಣಕ್ಕೆ ನಾವು ಸುಪ್ರೀಂಕೋರ್ಟ್ ಬಳಿ ನ್ಯಾಯ ಕೇಳದೆ ಬೇರೆ ದಾರಿ ಇರಲಿಲ್ಲ ಎಂದರು. 

ಇವತ್ತು ಕೊಡ್ತಾರೆ, ನಾಳೆ ಕೊಡ್ತಾರೆ, ಇವತ್ತು ಬರತ್ತೆ, ನಾಳೆ ಬರತ್ತೆ ಅಂತ  ಐದು ತಿಂಗಳು ಕಾದಿದ್ದಾಯ್ತು. ನಮಗೆ ಬೇರೆ ಇರಲಿಲ್ಲ.  

ನಮಗೆ ಕಾನೂನು ಮೊರೆ ಹೋಗುವುದು ಇಷ್ಟ ಇರಲಿಲ್ಲ. ಆದರೆ ನಾವು ಕಾನೂನು ಮೊರೆ ಹೋಗುವ ಅನಿವಾರ್ಯತೆಯನ್ನು ಕೇಂದ್ರ ಸೃಷ್ಟಿಸಿದೆ ಎಂದರು. 

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಕೇಂದ್ರದಿಂದ NDRF ಪರಿಹಾರ ಪಡೆಯಲು ಇದುವರೆಗೂ ರಾಜ್ಯ ಸರ್ಕಾರ ಮಾಡಿದ ಸಕಲ ಪ್ರಯತ್ನಗಳನ್ನೂ ವಿವರಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆ.ಐ.ಎ.ಡಿ.ಬಿ.ಯ ರೂ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗಾಗಿ ಸಿಎಂ ಸಿದ್ದರಾಮಯ್ಯ (Cmsiddaramaiah) ಹಸ್ತಾಂತರಿಸಿದರು.

[ccc_my_favorite_select_button post_id="117055"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!