ಮಾಸ್ಕೋ, (ಮಾ.23): ಭಯೋತ್ಪಾದಕ ದಾಳಿಯಿಂದ 143 ಮಂದಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಮಾರ್ಚ್ 24ರಂದು ರಾಷ್ಟ್ರೀಯ ಶೋಕ ದಿನವನ್ನು ಆಚರಿಸುವುದಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಿಸಿದ್ದಾರೆ.
ಮಾಸ್ಕೋ ಬಳಿಯ ಕ್ರೋಕಸ್ ಸಿಟಿ ಹಾಲ್‌ನಲ್ಲಿ ನಡೆದ ಸಂಗೀತ ಕಚೇರಿಯಲ್ಲಿ ಗುಂಡಿನ ದಾಳಿಯ ಕುರಿತು ಶನಿವಾರ ಮಾತನಾಡಿದ ಅವರು, ರಕ್ತಸಿಕ್ತ ಬರ್ಬರ ಭಯೋತ್ಪಾದಕ ಕೃತ್ಯಕ್ಕೆ ಸಂಬಂಧಿಸಿ ನಾನು ಇಂದು ನಿಮ್ಮೊಂದಿಗೆ ಮಾತಾಡುತ್ತಿದ್ದೇನೆ.
ಬಯೋತ್ಪಾದಕ ದಾಳಿಯಲ್ಲಿ ಬಲಿಯಾದವರು ಅಮಾಯಕ ಜನರು. ಇದೊಂದು ಅನಾಗರಿಕ ಭಯೋತ್ಪಾಕ ಕೃತ್ಯ ಹೀಗಾಗಿ ಮಾರ್ಚ್ 24 ರಂದು ದೇಶದಲ್ಲಿ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸುವುದಾಗಿ ಹೇಳಿದರು.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಈ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಹೊತ್ತುಕೊಂಡಿದ್ದು ದಾಳಿಯಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗಲಿದೆ ಎಂದು ಪುಟಿನ್ ಎಚ್ಚರಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….