ಬೆಂಗಳೂರು, (ಮಾ.23): ಜೆಡಿಎಸ್ ಮತ್ತು ಬಿಜೆಪಿ ನಡುವಿನ ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮವಾಗಿದ್ದು, ತೀವ್ರ ಕುತೂಹಲ ಕೆರಳಿಸಿರುವ ಕೋಲಾರ ಲೋಕಸಭೆ ಕ್ಷೇತ್ರವನ್ನೂ ಸೇರಿದಂತೆ ಹಾಸನ ಮತ್ತು ಮಂಡ್ಯ ಕ್ಷೇತ್ರಗಳನ್ನು ಬಿಜೆಪಿ ತನ್ನ ಮಿತ್ರಪಕ್ಷ ಜೆಡಿಎಸ್ ಗೆ ಬಿಟ್ಟು ಕೊಟ್ಟಿದೆ.
ಅರಮನೆ ಮೈದಾನದಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ್ ಅಗರ್’ವಾಲ್ ಅವರು ಕ್ಷೇತ್ರ ಹಂಚಿಕೆ ಕುರಿತು ಅಧಿಕೃತ ಘೋಷಣೆ ಮಾಡಿದ್ದಾರೆ.
ಇದರೊಂದಿಗೆ ಕ್ಷೇತ್ರ ಹಂಚಿಕೆ ಬಗ್ಗೆ ಉಂಟಾಗಿದ್ದ ಸಣ್ಣ ಪ್ರಮಾಣದ ಗೊಂದಲಕ್ಕೆ ಮಿತ್ರಪಕ್ಷಗಳೆರಡೂ ಇತಿಶ್ರೀ ಹಾಡಿವೆ.
ಆದರೆ, ಮಂಡ್ಯ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲಾಗಿರುವುದರಿಂದ ಸಂಸದೆ ಸುಮಲತಾ ಅಂಬರೀಶ್ ಅವರ ಮುಂದಿನ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….