ಸೋಮವಾರಪೇಟೆ, (ಮೇ.10); ಅಪ್ರಾಪ್ತ ಬಾಲಕಿಯೊಂದಿಗಿನ ನಿಶ್ಚಿತಾರ್ಥ ಮುಂದೂಡಿಕೆಯಾದ ಕೋಪದಲ್ಲಿ SSLC ವಿದ್ಯಾರ್ಥಿನಿಯ ರುಂಡ ಕತ್ತರಿಸಿ ತಲೆ ಮರೆಸಿಕೊಂಡಿದ್ದ ಆರೋಪಿ ಪ್ರಕಾಶ್ ಶವವಾಗಿ ಪತ್ತೆಯಾಗಿದ್ದಾನೆ.
ಸೋಮವಾರಪೇಟೆಯ ಸೂರ್ಲಬ್ಬಿ ಗ್ರಾಮದ ಹಮ್ಮಿಯಾಲದಲ್ಲಿ ಮೃತದೇಹ ಪತ್ತೆಯಾಗಿದೆ. ಬಾಲಕಿಯ ಮನೆಯಿಂದ ಸುಮಾರು ಮೂರು ಕಿಮಿ ದೂರದಲ್ಲಿರುವ ಹಮ್ನಿಯಾಲದಲ್ಲಿ ಗುರುವಾರ ಕೊಲೆ ನಡೆದಿತ್ತು.
ಕೊಲೆ ಬಳಿಕ ಆರೋಪಿಯು ಬಾಲಕಿಯ ರುಂಡದೊಂದಿಗೆ ಪರಾರಿಯಾಗಿದ್ದ. ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ.
ಕೊಲೆ ನಡೆದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ನಡೆಸುತ್ತಿರುವಾಗ ಮೃತದೇಹ ಪತ್ತೆಯಾಗಿದೆ. ಬಾಲಕಿಯ ರುಂಡ ಇನ್ನೂ ಪತ್ತೆಯಾಗಿಲ್ಲ, ಶೋಧ ಮುಂದುವರೆದಿದೆ ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….