ದೊಡ್ಡಬಳ್ಳಾಪುರ, (ಮೇ.11); ತಾಲೂಕು ವ್ಯವಸಾಯ ಸೇವಾ ಸಹಕಾರ ಸಂಘದ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಜೆಡಿಎಸ್ ಹಿರಿಯ ಮುಖಂಡ ಕಂಚಿಗನಾಳ ಲಕ್ಷ್ಮೀನಾರಾಯಣ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚಂದ್ರಕಲಾ ಮಂಜುನಾಥ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಉಪಾಧ್ಯಕ್ಷರಾಗಿ ಕಂಚಿಗನಾಳ ಲಕ್ಷ್ಮೀನಾರಾಯಣ್ ಅವರು ಅವಿರೋಧವಾಗಿ ಆಯ್ಕೆಯಾದರು.
ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಕಂಚಿಗನಾಳ ಲಕ್ಷ್ಮೀನಾರಾಯಣ್ ಅವರನ್ನು ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ, ಜಿಪಂ ಮಾಜಿ ಅಧ್ಯಕ್ಷ ಹೆಚ್.ಅಪ್ಪಯ್ಯಣ್ಣ, ಜೆಡಿಎಸ್ ಹಿರಿಯ ಮುಖಂಡರಾದ ಎ.ನರಸಿಂಹಯ್ಯ, ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ವಕ್ತಾರ ಕುಂಟನಹಳ್ಳಿ ಮಂಜುನಾಥ್, ನಗರಸಭೆ ಮಾಜಿ ಸದಸ್ಯ ಚಂದ್ರಶೇಖರ್, ನ್ಯಾಯವಾದಿ ಮುರುಳಿಧರ್, ನಿರ್ದೇಶಕ ಆನಂದ್, ಮುಖಂಡರಾದ ರಾ.ಬೈರೇಗೌಡ, ಅಮರ್ ನಾಥ್, ಪುಟ್ಟ ಬಸವರಾಜು, ರಾಜಘಟ್ಟ ಶಿವಣ್ಣ, ಕೊಡಿಗೇಹಳ್ಳಿ ಕೆಂಪೇಗೌಡ ಮತ್ತಿತರರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….