ಸೋಮವಾರಪೇಟೆ, (ಮೇ.11); ಅಪ್ರಾಪ್ತ ಬಾಲಕಿಯೊಂದಿಗಿನ ನಿಶ್ಚಿತಾರ್ಥ ಮುಂದೂಡಿಕೆಯಾದ ಕೋಪದಲ್ಲಿ SSLC ವಿದ್ಯಾರ್ಥಿನಿಯ ರುಂಡ ಕತ್ತರಿಸಿ ತಲೆ ಮರೆಸಿಕೊಂಡಿದ್ದ ಆರೋಪಿ ಆತನನ್ನು ಜೀವಂತವಾಗಿ ಪೊಲೀಸರು ಬಂಧಿಸಿದ್ದಾರೆ, ಬಂಧನದ ಫೋಟೋ ಬಿಡುಗಡೆ ಆಗಿದೆ.
ಪ್ರಕಾಶ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ ಎಂದು ಸುದ್ದಿ ನಿನ್ನೆ ಪ್ರಕಟವಾಗಿತ್ತು. ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸುದ್ದಿಯನ್ನು ನಿರಾಕರಿಸಿದ್ದರು.
ಇಂದು ಪ್ರಕಾಶನನ್ನು ಬಂಧಿಸಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ದೃಢಪಡಿಸಿದ್ದಾರೆ. ಆತನನ್ನು ಬಂಧಿಸಿರುವ ಛಾಯಾಚಿತ್ರವನ್ನು ಬಿಡುಗಡೆಗೊಳಿಸಿದ್ದಾರೆ.
ಪ್ರಕರಣ ಸಂಬಂಧ ಪ್ರಕಾಶ್‌ನನ್ನು ಸ್ಥಳ ಮಹಜರಿಗಾಗಿ ಕರೆದೊಯ್ದು ಮೃತಳ ರುಂಡವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಹತ್ಯೆಯಾದ ಘಟನಾ ಸ್ಥಳದಿಂದ 50 ಮೀಟರ್ ದೂರದ ಪೊದೆಯೊಂದರಲ್ಲಿ ರುಂಡ ಪೊಲೀಸರಿಗೆ ಸಿಕ್ಕಿದೆ. ಸದ್ಯ ಆರೋಪಿಯನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….