ಚಿಕ್ಕಬಳ್ಳಾಪುರ, (ಮೇ.11); ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡ ದಿನವೇ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ತಾಲ್ಲೂಕಿನ ಗಂಗರೇಕಾಲುವೆ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ವರದಿಯಾಗಿದೆ.
ಗುರುವಾರ 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿತ್ತು. ಗಂಗರೇಕಾಲುವೆ ಗ್ರಾಮದ ಜಿ.ಎನ್.ವೈಷ್ಣವಿ ಎಂಬ ವಿದ್ಯಾರ್ಥಿನಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಅಂದು ಸಂಜೆ ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈಕೆ ಕವಿತಾ ಮತ್ತು ನರಸಿಂಹಮೂರ್ತಿ ದಂಪತಿ ಪುತ್ರಿ . ಜಿ. ಎನ್.ವೈಷ್ಣವಿ ತಾಲ್ಲೂಕಿನ ಮಂಚನಬಲೆ ಗ್ರಾಮದ ಬಿಜಿಎಸ್ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….