ದೊಡ್ಡಬಳ್ಳಾಪುರ, (ಮೇ.11); ನಗರದ ಹೊರವಲಯದಲ್ಲಿರುವ ನವೋದಯ ಶಾಲೆ ಬಳಿ ನಡೆದಿರುವ ಹತ್ಯೆಗೊಳಗಾದ ಯುವಕ ಗುರುತು ಪತ್ತೆ ಹಚ್ಚಲಾಗಿದೆ.
ಮೃತನನ್ನು ಹುಸ್ಕೂರು ನಿವಾಸಿ ಹೇಮಂತ್ ಗೌಡ (29 ವರ್ಷ) ಎಂದು ಗುರುತಿಸಲಾಗಿದ್ದು, ಹಣ ಕಾಸು ವಿಚಾರಕ್ಕೆ ಬರ್ಬರ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ನವೋದಯ ಶಾಲೆಯ ಸಮೀಪದ ಯಲಹಂಕ- ಹಿಂದುಪುರ ರಸ್ತೆಯ ಬಳಿಯೇ ಯುವಕನ ಕುತ್ತಿಗೆ ಕುಯ್ದು, ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆ ನಡೆದಿರುವುದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಶನಿವಾರ ಬೆಳಗ್ಗಿನ ಜಾವ ಘಟನೆ ನಡೆದಿದೆ ಎನ್ನಲಾಗಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….