ಬೆಂಗಳೂರು, (ಮೇ.11): ಇತ್ತೀಚೆಗೆ ಬಿಡುಗಡೆಯಾದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದು ಮೊದಲ ಸ್ಥಾನ ಗಳಿಸಿದ ಬಾಗಲಕೋಟೆಯ ಅಂಕಿತಾ ಬಸಪ್ಪ ಕೊಣ್ಣೂರ ಅವರನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಮೊಬೈಲ್ ಮೂಲಕ ಸಂಪರ್ಕಿಸಿ ಶುಭ ಹಾರೈಸಿದರು.
ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಮೊದಲ ಸ್ಥಾನ ಪಡೆದಿರುವುದು ನನಗೆ ಬಹಳ ಸಂತೋಷ ತಂದಿದ್ದು, ನಿನಗೆ ಶುಭವಾಗಲಿ ಮಗು. ಬೆಂಗಳೂರಿಗೆ ಬಂದಾಗ ತಮ್ಮ ಮನೆಗೆ ಬರಬೇಕೆಂದು ಶಿವಕುಮಾರ್ ಅವರು ಅಂಕಿತಾಗೆ ಆಹ್ವಾನ ನೀಡಿದರು.
ಅಲ್ಲದೆ ಅಂಕಿತಾ ತಂದೆ ಬಸಪ್ಪ ಅವರ ಜತೆಯೂ ಮಾತನಾಡಿ ಮಗಳ ಸಾಧನೆಗೆ ಶುಭಾಶಯ ತಿಳಿಸಿದರು.
ಮೇ 9ರಂದು 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಿಲಿತಾಂಶ ಪ್ರಕಟವಾಗಿತ್ತು. ಇದರಲ್ಲಿ ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿನಿ ಆದ ಅಂಕಿತಾ ಬಸಪ್ಪ ಕೊಣ್ಣೂರು 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….