ದೊಡ್ಡಬಳ್ಳಾಪುರ, (ಮೇ.11); ನಗರದ ಹೊರವಲಯದಲ್ಲಿರುವ ನವೋದಯ ಶಾಲೆಯ ಮುಂಭಾಗ ಯುವಕನ ಶವ ಪತ್ತೆಯಾಗಿದೆ.
ಸುಮಾರು 28 ರಿಂದ 30 ವರ್ಷದ ಅಪರಿಚಿತ ಯುವಕನನ್ನು ದುಷ್ಕರ್ಮಿಗಳು ಚಾಕುವಿನಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ನವೋದಯ ಶಾಲೆಯ ಕಾಂಪೌಂಡ್ ಬಳಿಯ ಯಲಹಂಕ- ಹಿಂದುಪುರ ರಸ್ತೆಯ ಬಳಿಯೇ ಯುವಕನ ಕುತ್ತಿಗೆ ಕುಯ್ದು, ಚಾಕುವಿನಿಂದ ಚುಚ್ಚಿ ಹತ್ಯೆ ನಡೆದಿರುವುದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಶನಿವಾರ ಬೆಳಗ್ಗಿನ ಜಾವ ಘಟನೆ ನಡೆದಿದೆ ಎನ್ನಲಾಗಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ; ಮೃತ ಯುವಕನ ಗುರುತು Study.. ಹಣಕಾಸು ವಿಚಾರಕ್ಕೆ ಬರ್ಬರ ಹತ್ಯೆ ಶಂಕೆ
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….