ಬೆಂಗಳೂರು, (ಮೇ.11): ಸಂಸದ ಪ್ರಜ್ವಲ್ ರೇವಣ್ಣನ ಪಾಸ್ಪೋರ್ಟ್ ಅನ್ನು ಕೇಂದ್ರ ಸರ್ಕಾರ ರದ್ದು ಮಾಡುತ್ತಿಲ್ಲ. ಪ್ರಜ್ವಲ್‌ನನ್ನು ಪ್ರಧಾನಿ ನರೇಂದ್ರ ಮೋದಿಯೇ ರಕ್ಷಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಕುರಿತು ಟ್ವಿಟ್ ಮಾಡಿ ಕಿಡಿ ಕಾರಿರುವ ಕಾಂಗ್ರೆಸ್, ಪ್ರಜ್ವಲ್ ರೇವಣ್ಣನ ಪಾಸ್ಪೋರ್ಟ್ ರದ್ದು ಮಾಡಿದರೆ ಆತ ಅನಿವಾರ್ಯವಾಗಿ ದೇಶಕ್ಕೆ ಮರಳಬೇಕಾಗುತ್ತದೆ, ಆದರೆ ಕೇಂದ್ರ ಸರ್ಕಾರ ಪಾಸ್ಪೋರ್ಟ್ ರದ್ದು ಮಾಡಲು ಮುಂದಾಗುತ್ತಿಲ್ಲ.
ರಾಜ್ಯ ಸರ್ಕಾರ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿ ಇಂಟರ್ ಪೋಲ್ ಸಹಕಾರ ಕೋರಿತ್ತು, ಆದರೆ ಇದುವರೆಗೂ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ. ಪ್ರಜ್ವಲ್ ರೇವಣ್ಣನನ್ನು ಪ್ರಧಾನಿ ಮೋದಿಯೇ ರಕ್ಷಿಸುತ್ತಿದ್ದಾರೆ ಎನ್ನುವುದಕ್ಕೆ ಬೇರೆ ಪುರಾವೆ ಬೇಕೇ? ಎಂದು ಪ್ರಶ್ನಿಸಿದೆ.
ಅಲ್ಲದೆ ಮೋದಿಗೆ ಪ್ರಜ್ವಲ್ ರೇವಣ್ಣ “ಕೋಂಪ್ಲೇನ್ ಬಾಯ್” ಏಕೆಂದರೆ ಪ್ರಜ್ವಲ್ ರೇವಣ್ಣನನ್ನು ಗೆಲ್ಲಿಸಿದರೆ ಮೋದಿ ಶಕ್ತಿ ಬರುತ್ತದೆಯಂತೆ! ಇಂತಹ ಕೋಂಪ್ಲೇನ್ ಬಾಯ್‌ಗೆ ಮೋದಿ ಕಷ್ಟ ಕೊಡಬಲ್ಲರೆ! ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….