ಬೆಳಗಾವಿ, (ಮೇ.13): ಕೃಷಿ ಕೆಲಸ ಮುಗಿಸಿ ಸ್ನಾನ ಮಾಡಲು ನದಿಗೆ ತೆರಳಿದ್ದ ರೈತನ ಮೇಲೆ ಮೊಸಳೆ ದಾಳಿ ಮಾಡಿ ನೀರಿನೊಳಗೆ ಎಳೆದುಕೊಂಡು ಹೋದ ಪರಿಣಾಮ ರೈತ ಮೃತಪಟ್ಟಿರುವ ಘಟನೆ ಚಿಕ್ಕೋಡಿ ತಾಲೂಕಿನ ದತ್ತವಾಡ-ಸದಲಗಾ ಬಳಿಯ ದೂಧಗಂಗಾ ನದಿ ದಡದಲ್ಲಿ ನಡೆದಿದೆ.
ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದ ನಿವಾಸಿ ಮಹಾದೇವ ಪುನ್ನಪ್ಪ ಖುರೆ (72 ವರ್ಷ) ಮೃತ ರೈತ.
ಈತ ನದಿ ಜಲಾನಯನ ಪಕ್ಕದ ಕಾಂತಿ ಪ್ರದೇಶದಲ್ಲಿ ತಮ್ಮ ಜಮೀನಿನಲ್ಲಿ ಕೃಷಿ ಕೆಲಸ ಮುಗಿಸಿ ಸ್ನಾನಕ್ಕೆಂದು ನದಿಗೆ ತೆರಳಿದ್ದರು. ನದಿಯಲ್ಲಿ ಸ್ವಲ್ಪ ಹೊತ್ತು ಈಜಿಕೊಂಡು ಮರಳಿ ನದಿಯ ದಡಕ್ಕೆ ಬರುತ್ತಿದ್ದಾಗ ಮೊಸಳೆ ಆತನ ಕಾಲು ಹಿಡಿದು ನೀರಿನೊಳಗೆ ಎಳೆದುಕೊಂಡು ಹೋಗಿದೆ ಎನ್ನಲಾಗಿದೆ.
ರೈತ ಮಹದೇವನ ಎಡತೊಡೆಯ ಮೇಲೆ ಗಾಯದ ಗುರುತು ಇದ್ದು, ರಮೇಶ ಪ್ರಧಾನ ಎಂಬುವವರ ಜಮೀನಿನ ಬಳಿಯ ನದಿ ದಡದಲ್ಲಿ ಮೃತ ದೇಹ ಪತ್ತೆಯಾಗಿದೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….