ರಾಜ್ಯ ಸರ್ಕಾರದಿಂದ ರೈತರಿಗೆ ದ್ರೋಹ: ಬಸವರಾಜ ಬೊಮ್ಮಾಯಿ ಆಕ್ರೋಶ

ಹಾವೇರಿ, (ಮೇ.15): ರಾಜ್ಯ ಸರಕಾರ ಕೇಂದ್ರ‌ ಸರಕಾರ ನೀಡಿದ ಬರ ಪರಿಹಾರದಲ್ಲಿ 2 ಸಾವಿರ ರೂ. ಕಡಿತ ಮಾಡಿ ನೀಡುತ್ತಿದ್ದು, ಬರ ಪರಿಹಾರವನ್ನು ಸಾಲಕ್ಕೆ ಹೊಂದಾಣಿಕೆ ಮಾಡಿ ರೈತರಿಗೆ ದೊಡ್ಡ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಬರ ಪರಿಹಾರವಾಗಿ ಕೊಟ್ಟಿದ್ದೆ ಜುಜಬಿ 2 ಸಾವಿರ, ಈಗ ಅದನ್ನೇ ಕಟ್ ಮಾಡಿ ರೈತರ ಖಾತೆಗೆ ಹಣ ನೀಡುತ್ತಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರ ಪರಿಹಾರ ನೀಡಿರುವ ಹಣವನ್ನು ರೈತರ ಸಾಲಕ್ಕೆ ಹೊಂದಾಣಿಕೆ ಮಾಡುತ್ತಿದ್ದಾರೆ. ರೈತರು ಸಂಕಷ್ಟದಲ್ಲಿ ಇದ್ದಾರೆ ಎನ್ನುವ ಕಾರಣಕ್ಕೆ ಪರಿಹಾರ ನೀಡುವುದು‌‌. ಅದನ್ನು ಸಾಲಕ್ಕೆ ಹೊಂದಾಣಿಕೆ ಮಾಡಿದರೆ, ಅದು ಹೇಗೆ ಪರಿಹಾರವಾಗುತ್ತದೆ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರಕ್ಕೆ ರೈತರಿಗೆ ಸಹಾಯ ಮಾಡುವ ಮನಸಿದ್ದರೆ, ಕಾಂಗ್ರೆಸ್ ಚುನಾವಣಾ ಘೋಷಣಾ ಪತ್ರದಲ್ಲಿ ಹೇಳಿರುವಂತೆ ರೈತರ ಸಾಲ ಮನ್ನಾ ಮಾಡಲಿ, ಕಾಂಗ್ರೆಸ್ ಘೋಷಣಾ ಪತ್ರ ಕರ್ನಾಟಕದಿಂದ ಪ್ರಾರಂಭವಾಗಲಿ ಎಂದು ಆಗ್ರಹಿಸಿದರು. 

ನಮ್ಮ ಅವಧಿಯಲ್ಲಿ ಪ್ರವಾಹ ಬಂದಾಗ ಎರಡು ಪಟ್ಟು ಪರಿಹಾರ ನೀಡಿದ್ದೇವು. ಇವರು ಪರಿಹಾರವಾಗಿ ಕೊಟ್ಟಿರುವುದೇ ಜುಜುಬಿ ಎರಡು ಸಾವಿರ ರೂಪಾಯಿ, ಅದನ್ನೂ ಕಡಿತಗೊಳಿಸಿ ರೈತರಿಗೆ ನೀಡುತ್ತಿರುವುದು ಘೋರ ಅನ್ಯಾಯ, ಇದನ್ನು ರಾಜ್ಯ ಸರ್ಕಾರ ತಕ್ಷಣವೇ ಸರಿಪಡಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಕೊಲೆಗಡುಕರನ್ನು ಗಲ್ಲಿಗೇರಿಸಲಿ: ಇನ್ನು ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಹತ್ಯೆಯಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದ್ದಕ್ಕೆ ಸಾಕ್ಷಿ. ಇಂತಹ ಹೇಯ ಕೃತ್ಯ ಯಾರೇ ಮಾಡಿರಲಿ ಅವರನ್ನು ತಂದು ಗಲ್ಲಿಗೇರಿಸಿ, ಶಿಕ್ಷೆ ಕೊಡಿಸಿ, ಹಾಡಹಗಲೇ ಇಂತಹ ಘೋರ ಕೃತ್ಯ ನಡೆದರೂ ಪೊಲಿಸರು ರಾಜಕಾರಣದ ಪ್ರಕರಣಗಳು ಜಾತಿನಿಂದನೆ ಪ್ರಕರಣ ದಾಖಲಿಸುವುದು ಕ್ಲಬ್ ನಡೆಸುವುದರಲ್ಲಿ ಮಗ್ನರಾಗಿದ್ದಾರೆ.

ಈ ರೀತಿಯಲ್ಲಿ ಕೊಲೆ, ಅತ್ಯಾಚಾರಗಳು ನಡೆಯುತ್ತಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ರಾಜ್ಯ ಸರಕಾರವೇ ಮುಂದೆ ನಿಂತು ಕುಮ್ಮಕ್ಕು ನೀಡುವುದನ್ನು ನಾನು ನೋಡಿರಲಿಲ್ಲ. ಇದೊಂದು ಜನವಿರೋಧಿ ಸರಕಾರ ಎಂದು ವಾಗ್ದಾಳಿ ನಡೆಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

"ಧರ್ಮಸ್ಥಳ ಸತ್ಯ ಯಾತ್ರೆಗೆ" (Dharmasthala Satya Yatre) ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಬಿ.ಮುನೇಗೌಡ ಕರೆ ನೀಡಿದ್ದಾರೆ.

[ccc_my_favorite_select_button post_id="113258"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ, ಬೆಳ್ಳಿ ಗೆದ್ದವರಿಗೆ 3 ಹಾಗೂ ಕಂಚು ಗೆದ್ದವರಿಗೆ 2 ಕೋಟಿ ರೂ.ಗಳ ಬಹುಮಾನ: Cmsiddaramaiah

[ccc_my_favorite_select_button post_id="113214"]
ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ!| Video ನೋಡಿ

ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆ ಬದಿಯಲ್ಲಿನ ಚರಂಡಿ ನುಗ್ಗಿರುವ ಘಟನೆ ನಗರದ ಹೊರವಲಯದಲ್ಲಿನ Doddaballapura ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

[ccc_my_favorite_select_button post_id="113161"]
ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ (Hit & Run) ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ- ದಾಬಸ್‌ಪೇಟೆ ನಡುವಿನ

[ccc_my_favorite_select_button post_id="113236"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!