ರೈತರ ಬರ ಪರಿಹಾರ ಹಣ ಬ್ಯಾಂಕ್ ಸಾಲಕ್ಕೆ ಜಮೆ ಆಗುತ್ತಿದೆ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು, (ಮೇ.20): ರಾಜ್ಯ ಸರ್ಕಾರ ವರ್ಷದ ಸಂಭ್ರಮದಲ್ಲಿದೆ. ಆದರೆ, ಕೇಂದ್ರ ಸರ್ಕಾರ ನೀಡಿರುವ ಬೆಳೆ ಪರಿಹಾರ ಹಣವು ಸಾಲಕ್ಕೆ ಜಮೆ ಆಗುತ್ತಿದೆ. ಇದು ಈ ಸರ್ಕಾರದ ವೈಖರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ರೈತರು ಬರದಿಂದ ಕಂಗೆಟ್ಟು ಸಂಕಷ್ಟದಲ್ಲಿದ್ದಾರೆ. ರೈತರಿಗೆ ಈ ಸರ್ಕಾರದ ಕೊಡುಗೆ ಏನೂ ಇಲ್ಲ. ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ಆರಂಭ ಆಗಿವೆ. ಬರ ಪರಿಹಾರ ಹಣವನ್ನು ಸಾಲಕ್ಕೆ ವಜಾ ಮಾಡ್ತಿದ್ದಾರೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿಲ್ಲ. ಹಲವು ಇಲಾಖೆಗಳಲ್ಲಿ ವೇತನ ನೀಡಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಕಳೆದ ಒಂದು ವರ್ಷದಲ್ಲಿ ಎಷ್ಟು ಮಂತ್ರಿಗಳು ಜಿಲ್ಲೆಗಳಲ್ಲಿ ಸಭೆ ಮಾಡಿದ್ದಾರೆ. ಸಮಸ್ಯೆಗಳ ಬಗ್ಗೆ ಏನು ಸೂಚನೆಗಳನ್ನು ಕೊಟ್ಟಿದ್ದಾರೆ. ಜನರ ಕಷ್ಟಗಳನ್ನು ಬಗೆಹರಿಸಿದ್ದಾರೆಯೇ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಮುಖ್ಯಮಂತ್ರಿಗಳು ಸಭೆ ನಡೆಸಿ ಅಧಿಕಾರಿಗಳ ಮೇಲೆ ವಾಗ್ದಾಳಿ ನಡೆಸಿದ್ದರು. ಆದರೆ, ಜನರ ಕೆಲಸಗಳು ಏನಾಗಿವೆ? ಅಭಿವೃದ್ಧಿ ಕೆಲಸಗಳು ಎಲ್ಲಾದರೂ ಆಗಿವೆಯೇ? ಕೇವಲ ಗ್ಯಾರಂಟೀಗಳ ಹೆಸರು ಹೇಳಿಕೊಂಡು ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಅವರು ಟೀಕಾ ಪ್ರಹಾರ ನಡೆಸಿದರು.

ರಾಜ್ಯದ ನೀರಾವರಿ ಯೋಜನೆಗಳ ಪರಿಸ್ಥಿತಿ ಏನಾಗಿದೆ? ರಸ್ತೆಯ ಪರಿಸ್ಥಿತಿ ಹೇಗಾಗಿದೆ? ಕಳೆದ ಒಂದು ವರ್ಷದಿಂದ ಬ್ರ್ಯಾಂಡ್ ಬೆಂಗಳೂರು ಏನಾಗಿದೆ? ಮಳೆ ಬಂದು ಬೆಂಗಳೂರಿನ ಪರಿಸ್ಥಿತಿ ಏನಾಗಿದೆ ಎನ್ನುವುದನ್ನು ಈಗ ಕಣ್ಣಾರೆ ನೋಡುತ್ತಿದ್ದೇವೆ. ಎರಡು ದಿನ ಸುರಿದ ಮಳೆಗೆ ಬೆಂಗಳೂರು ಜನರು ನರಕ ನೋಡುತ್ತಿದ್ದಾರೆ. ಮನೆಗಳಿಗೆ ಬೀಗ ಹಾಕಿ ಹೋಟೆಲ್ ಗೆ ಹೋಗಿ ಜೀವನ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಅತ್ಯಂತ ಮೌಲ್ಯವಾದ ದಿನಗಳನ್ನು ನಾವು ಒಂದು ವರ್ಷದಲ್ಲಿ ಕಳೆದುಕೊಂಡಿದ್ದೇವೆ. ರಾಜ್ಯದ ಅಭಿವೃದ್ಧಿ ಹಿಮ್ಮುಖವಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.

35,471  ಕಡತಗಳು ವಿಲೇವಾರಿ ಬಾಕಿ: ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಇಲಾಖೆಗಳ ಕೆಲಸ ನೋಡಿದರೆ ಅರ್ಥ ಆಗುತ್ತದೆ. ಎಂಟು ಪ್ರಮುಖ ಇಲಾಖೆಗಳಲ್ಲಿ 35,471  ಕಡತಗಳು ವಿಲೇವಾರಿ ಆಗಿಲ್ಲ ಎಂಬ ವರದಿಯನ್ನು ಓದಿದೆ. ಇದು ಸರ್ಕಾರದ ಸಾಧನೆಯೇ? ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು ಮಾಜಿ ಮುಖ್ಯಮಂತ್ರಿಗಳು.

ವರ್ಗಾವಣೆಗೆ CSR ಫಂಡ್ ಸಂಜ್ಞೆಯಾಗಿ ಬಳಕೆ: ಚುನಾವಣೆ ನಂತರ ಓರ್ವ ಮಂತ್ರಿಯಾದರೂ ಜಿಲ್ಲೆಗಳಿಗೆ ಭೇಟಿ ನೀಡಿದ್ದೀರಾ? ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ಕೆಲಸ ಮಾಡಿಸಿದ್ದಾರಾ? ಇಲ್ಲ. ರಾಜ್ಯದ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ನಾಡಿನ ಅಭಿವೃದ್ಧಿಗೆ ಪೂರಕವಾದ ಕೆಲಸ ಆಗಿಲ್ಲ. ಸರ್ಕಾರದ ಐದು ವರ್ಷದ ಆಡಳಿತಾತ್ಮಕ ಮಂಜೂರಾತಿ ಮುಂದುವರಿಸಿದ್ದು ಬಿಟ್ಟರೆ ಏನೂ ಆಗಿಲ್ಲ. ವರ್ಗಾವಣೆ ದಂಧೆಯೂ ನಿಂತಿಲ್ಲ. ವರ್ಗಾವಣೆಗೆ ಸಿ ಎಸ್ ಆರ್ ಫಂಡ್ ಹೆಸರನ್ನು ಸಂಜ್ಞೆಯಾಗಿ ಬಳಕೆ ಮಾಡಲಾಗುತ್ತಿದೆ ಎಂದು ಅವರು ಆರೋಪ ಮಾಡಿದರು.

ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ, ಸಾ.ರಾ.ಮಹೇಶ್, ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಉಪಸ್ಥಿರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

"ಧರ್ಮಸ್ಥಳ ಸತ್ಯ ಯಾತ್ರೆಗೆ" (Dharmasthala Satya Yatre) ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಬಿ.ಮುನೇಗೌಡ ಕರೆ ನೀಡಿದ್ದಾರೆ.

[ccc_my_favorite_select_button post_id="113258"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ, ಬೆಳ್ಳಿ ಗೆದ್ದವರಿಗೆ 3 ಹಾಗೂ ಕಂಚು ಗೆದ್ದವರಿಗೆ 2 ಕೋಟಿ ರೂ.ಗಳ ಬಹುಮಾನ: Cmsiddaramaiah

[ccc_my_favorite_select_button post_id="113214"]
ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ!| Video ನೋಡಿ

ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆ ಬದಿಯಲ್ಲಿನ ಚರಂಡಿ ನುಗ್ಗಿರುವ ಘಟನೆ ನಗರದ ಹೊರವಲಯದಲ್ಲಿನ Doddaballapura ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

[ccc_my_favorite_select_button post_id="113161"]
ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ (Hit & Run) ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ- ದಾಬಸ್‌ಪೇಟೆ ನಡುವಿನ

[ccc_my_favorite_select_button post_id="113236"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!