ಬೆಂಗಳೂರು, (ಮೇ.22): ಪಾಳೇಗಾರಿಕೆ ರಾಜಕಾರಣಕ್ಕೆ ಹೆಸರಾದ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ರೈತರ ಶೋಷಣೆ ಮಿತಿ ಮೀರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಸಚಿವ ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮ ರಡಿ ಕ್ಷೇತ್ರ ವ್ಯಾಪ್ತಿಯ ಇಸ್ಲಾಂಪುರ ಗ್ರಾಮದ ರೈತ ತನ್ನ ಕೃಷಿ ಚಟುವಟಿಕೆಗೆ ಸಾಲ ಮಾಡಿಕೊಂಡಿದ್ದರು. ಆದರೆ, ಸಾಲ ತೀರಿಸಲು ವಿಳಂಬವಾಗಿದ್ದರಿಂದ ಸಾಲ ಕೊಟ್ಟವರು ರೈತನ ಪುತ್ರಿ, ಪುತ್ರನನ್ನು ಅಕ್ರಮ ಬಂಧನದಲ್ಲಿಟ್ಟಿದ್ದರು.
ಇದರಿಂದ ನೊಂದ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಈ ರಾಜ್ಯದ ಜನತೆ ಇನ್ನು ಏನೇನು ಅನುಭವಿಸಬೇಕು ಎಂಬುದು ತಿಳಿಯದಾಗಿದೆ. ಮೀಟರ್ ಬಡ್ಡಿ ದಂಧೆಕೋರರು ಕೊಲೆಗಡುಕರಿಗೆ ಈ ಸರಕಾರ ನೆರವು ನೀಡಿ ನೆರಳಿನ ಭಾಗ್ಯ ಕಲ್ಪಿಸಿಕೊಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….