ದೇವನಹಳ್ಳಿ, (ಮೇ.31): ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿ, ಲೋಕಸಭೆ ಚುನಾವಣೆ ನಂತರ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೊನೆಗೂ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ದೇವನಹಳ್ಳಿ ವಿಮಾನ ನಿಲ್ದಾಣದ ಮಧ್ಯರಾತ್ರಿ 12:35ರ ವೇಳೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ರೇವಣ್ಣ ಅವರಿದ್ದ ಲುಫ್ತಾನ್ಸಾ ಏರ್ಲೈನ್ಸ್ನ DLH 764 A-359 ವಿಮಾನ ಲ್ಯಾಂಡಿಗ್ ಆಯಿತು. ಇಮಿಗ್ರೇಷನ್ ಅಧಿಕಾರಿಗಳು ವಿಚಾರಣೆ ನಡೆಸಿ, ಪ್ರಜ್ವಲ್ ಎಸ್ಐಟಿ ಅಧಿಕಾರಿಗಳಿಗೆ ವಹಿಸಿದ್ದಾರೆ.
35 ದಿನಗಳ ಬಳಿಕ ಬೆಂಗಳೂರಿಗೆ ಬಂದಿಳಿದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನ ಎಸ್ಐಟಿ ಅಧಿಕಾರಿಗಳು ಏರ್ಪೋರ್ಟ್ನಲ್ಲೇ ಬಂಧಿಸಿ, ಎಸ್ಐಟಿ ಕಚೇರಿಗೆ ಕರೆದೊಯ್ದಿದ್ದಾರೆ.
ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಸಿಐಎಸ್ಎಫ್ ಸಿಬ್ಬಂದಿ ವಿಮಾನದ್ವಾರದಲ್ಲೇ ಸುತ್ತುವರಿದು ಪ್ರಜ್ವಲ್ ಅವರನ್ನ ವಶಕ್ಕೆ ಪಡೆಯಲು ಮುಂದಾದರು. ವಿಮಾನ ನಿಲ್ದಾಣದಲ್ಲಿ ಮಿಗ್ರೇಷನ್ ಅಧಿಕಾರಿಗಳು ಇಮಿಗ್ರೇಷನ್ ಪ್ರಕ್ರಿಯೆ (ಲಗೇಜ್ ಪರಿಶೀಲಿಸಿ, ಭಾರತಕ್ಕೆ ಮರಳಿರುವುದಾಗಿ ಸ್ಟ್ಯಾಂಪ್ ಹಾಕಿದ್ದಾರೆ) ಪೂರ್ಣಗೊಳಿಸುತ್ತಿದ್ದಂತೆ ಎಸ್ಐಟಿಗೆ ಹಸ್ತಾಂತರಿಸಿದ್ದಾರೆ.
ಮಾಧ್ಯಮದವರ ಕಣ್ತಪ್ಪಿಸಲು ಮಾರ್ಗ ಬದಲಿಸಿದ್ದ ಎಸ್ಐಟಿ ಅಧಿಕಾರಿಗಳು ಮಧ್ಯರಾತ್ರಿ 2 ಗಂಟೆ ವೇಳೆಗೆ ಕಚೇರಿಗೆ ಕರೆತಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….