8ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಕಿಯಾಗಿ ಪಾಠ ಮಾಡಿದ ಜಿಲ್ಲಾಧಿಕಾರಿ..!

ಧಾರವಾಡ, (ಮೇ.31); ಇಂದು ಪ್ರಸಕ್ತ ಸಾಲಿನ ಶಾಲಾ ಪ್ರಾರಂಭೋತ್ಸವ. ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಬೆಳಿಗ್ಗೆ ನಗರದ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಸರಕಾರಿ ಉರ್ದು ಮತ್ತು ಕನ್ನಡ ಪ್ರಾಥಮಿಕ, ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ 8 ನೇ ತರಗತಿ ಇಂಗ್ಲೀಷ ಭಾಷಾ ವಿಷಯ ಪಾಠ ಬೋಧಿಸುವ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ವಿಶಿಷ್ಟವಾಗಿ ಚಾಲನೆ ನೀಡಿದರು.

ಆರಂಭದಲ್ಲಿ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ, ಮೆದಳು, ಮನಸ್ಸು ಮತ್ತು ದೇಹ ಸಶಕ್ತ, ಸದೃಡವಾಗಿದ್ದರೆ ಉತ್ತಮ ಶಿಕ್ಷಣದ ಮೂಲಕ ಕಂಡ ಕನಸು ಸಾಧಿಸಬಹುದು. ಕಲಿಕೆಯ ಆಸಕ್ತಿ ವಿದ್ಯಾರ್ಥಿಗಳಲ್ಲಿ ಮತ್ತು ಕಲಿಸುವ ಅಭಿರುಚಿ ಶಿಕ್ಷಕರಲ್ಲಿ ಇದ್ದರೆ ಮಾತ್ರ ಅದು ಒಂದು ಕೌಶಲ್ಯಯುತವಾಗಿ ಕೂಡಿಬರುತ್ತದೆ. ವಿದ್ಯಾರ್ಥಿಗಳಿಗೆ ಶಿಕ್ಷಕರೇ ಆದರ್ಶ. ಅವರ ಜೀವನ ನಿರೂಪಣೆ ಪಾಲಕರ ಜೊತೆಗೆ ಶಿಕ್ಷಕರಿಗೂ ಸೇರಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು. 

ಧಾರವಾಡ ಜಿಲ್ಲೆಗೆ ಇರುವ ವಿದ್ಯಾಕಾಶಿ ಹೆಸರು ಉಳಿಸುವ ಅಗತ್ಯವಿದೆ. 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಶೇ. 74 ಆಗಿದೆ. ರಾಜ್ಯದಲ್ಲಿ 24 ನೇ ಸ್ಥಾನದಿಂದ 22 ನೇ ಸ್ಥಾನಕ್ಕೆ ನಮ್ಮ ಜಿಲ್ಲೆ ಬಂದಿದೆ. ಇದು ನಾವು ಹೆಮ್ಮೆ ಪಡುವ ವಿಷಯವಲ್ಲ. ಪ್ರಸಕ್ತ ಸಾಲಿನಲ್ಲಿ ಇಡಿ ಜಿಲ್ಲೆ ಶೇ. 100 ರಷ್ಟು ಫಲಿತಾಂಶ ಪಡೆಯಬೇಕು. ಇದಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡುತ್ತದೆ. 

ಹತ್ತನೇ ವರ್ಗ ಕಲಿಸುವ ಪ್ರತಿ ಶಿಕ್ಷಕ ಪ್ರತಿಜ್ಞೆ ಮಾಡಿ, ಫಲಿತಾಂಶಕ್ಕಾಗಿ ಪ್ರಮಾಣಿಕ ಪ್ರಯತ್ನ ಮಾಡಬೇಕು. 2024-25 ರಲ್ಲಿ ನಮ್ಮ ಜಿಲ್ಲೆ ರಾಜ್ಯಕ್ಕೆ ಎಸ್.ಎಸ್.ಎಲ್.ಸಿ ಫಲಿತಾಂತಶದಲ್ಲಿ ಪ್ರಥಮ ಸ್ಥಾನ ಪಡೆಯುವ ನಿಟ್ಟಿನಲ್ಲಿ ಎಲ್ಲರೂ ಕರ್ತವ್ಯ ನಿರ್ವಹಿಸಬೇಕೆಂದು ಅವರು ತಿಳಿಸಿದರು. 

ಶಾಲಾ ಕಟ್ಟಡಗಳ ದುರಸ್ತಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸರಕಾರದ ವಿಶೇಷ ಅನುದಾನ ಮತ್ತು ಅತಿವೃಷ್ಠಿ ನಿಧಿಯಲ್ಲೂ ಆರ್ಥಿಕ ನೆರವು ನೀಡಲಾಗಿದೆ. ಈಗಾಗಲೇ ದುರಸ್ತಿ ಕಾರ್ಯ ಆರಂಭಿಸಲು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು. 

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಸರಕಾರದಿಂದ ಪೂರೈಸಲಾಗಿರುವ ಉಚಿತ ಸಮವಸ್ತ್ರ ಬಟ್ಟೆ, ಪುಸ್ತಕ ವಿತರಿಸಿ ಶುಭ ಹಾರೈಸಿದರು. 

8ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಕಿಯಾಗಿ ಪಾಠ ಮಾಡಿದ ಡಿಸಿ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಘೋಷವಾಕ್ಯ ‘ಶೈಕ್ಷಣಿಕ ಬಲವರ್ಧನೆ ವರ್ಷ’ ಇದಕ್ಕೆ ಅನುಗುಣವಾಗಿ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸರಕಾರಿ ಶಾಲೆಯ 7 ಮತ್ತು 8 ನೇ ವರ್ಗದ ಮಕ್ಕಳಿಗೆ ಇಂಗ್ಲೀಷ ವಿಷಯದ ಪಾಠ ಬೋಧನೆ ಮಾಡಿದರು. 

8ನೇ ವರ್ಗದ ಇಂಗ್ಲೀಷ ಪಠ್ಯದ ದ ಸ್ವಾನ ಆ್ಯಂಡ್ ದ ಪ್ರಿನ್ಸ್‍ಸ್ ಎಂಬ ಬುದ್ಧನ ಕುರಿತ ಜಾನಪದ ನಾಟಕ ಬೋಧಿಸಿದರು. ವಿದ್ಯಾರ್ಥಿಗಳನ್ನು ವೇದಿಕೆಗೆ ಕರೆದು ಅವರನ್ನೇ ನಾಟಕದ ಪಾತ್ರದಾರಿಗಳನ್ನಾಗಿ ಮಾಡಿ, ತಾವೂ ಸೂತ್ರದಾರರಾಗಿ ಶಿಕ್ಷಕ ವೃತ್ತಿಯಲ್ಲಿ ಇರುವವರಿಗೆ ಮಾದರಿ ಆಗುವಂತೆ ಪಠ್ಯ ಬೋಧನೆ ಮಾಡಿದರು.

ಜಾನಪದ ನಾಟಕದಲ್ಲಿ ಬರುವ ಶುದ್ದೊಧನ, ಸಿದಾರ್ಥ ಮತ್ತು ದೇವದತ್ತ, ಮಂತ್ರಿಗಳ ಪಾತ್ರವನ್ನು ಒಬ್ಬೊಬ್ಬ ವಿದ್ಯಾರ್ಥಿನಿಗೆ ವಹಿಸಿ, ಓದಿಸಿ ಅದರ ಅರ್ಥವನ್ನು ಜಿಲ್ಲಾಧಿಕಾರಿಗಳು ವಿವರಿಸಿದರು. ಪಾಠದಲ್ಲಿ ಬರುವ ವ್ಯಾಕರಣ, ಸಂಜ್ಞಾವಾಚಕಗಳನ್ನು ಸ್ವತಃ ತಾವೇ ಉದ್ಧರಿಸಿ, ಅಭಿನಯಿಸಿ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. 

ಜಿಲ್ಲಾಧಿಕಾರಿಗಳ ಈ ಕಾರ್ಯವು ಇತರರಿಗೆ ಮಾದರಿ ಆಗಿದ್ದು, ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಮತ್ತು ಪಾಲಕರಿಗೆ ಆದರ್ಶವಾಗಿದೆ. ಒರ್ವ ಜಿಲ್ಲಾಧಿಕಾರಿಯಾಗಿ ದಿವ್ಯ ಪ್ರಭು ಅವರು ಹೈಸ್ಕೂಲ್ ಮಕ್ಕಳಿಗೆ ಪಾಠ ಮಾಡುವ ಮೂಲಕ, ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ಶಿಕ್ಷಕರಲ್ಲಿ, ವಿದ್ಯಾರ್ಥಿಗಳಲ್ಲಿ ಪ್ರೇರಣೆ, ಪ್ರೋತ್ಸಾಹ ತುಂಬಿದರು. 

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಧಾರವಾಡ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಡೈಟ್ ಪ್ರಾಚಾರ್ಯ ಜಯಶ್ರೀ ಕಾರೆಕರ, ಡಿವೈಪಿಸಿ ಎಸ್.ಎಂ.ಹುಡೇದಮನಿ, ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ, ಟಿ.ಸಿ.ಡಬ್ಲ್ಯೂ ಪ್ರಾಚಾರ್ಯ ಬಿ.ಎಂ. ಬಡಿಗೇರ, ಬಿ.ಆರ್.ಸಿ ಮಂಜುನಾಥ ಅಡವೆರ, ವಿಷಯ ಪರಿವೀಕ್ಷರಾದ ಬಿ.ಬಿ. ದುಬ್ಬನಮರಡಿ, ನಫಿಜಾಬಾನು ದಾವಲಸಾಬನವರ, ಶಿವಲೀಲಾ ಕಳಸಣ್ಣವರ ಸೇರಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಭಾಗವಹಿಸಿದ್ದರು. 

ಕಾರ್ಯಕ್ರಮದಲ್ಲಿ ಎಸ್.ಎಂ.ಹುಡೆದಮನಿ ಸ್ವಾಗತಿಸಿದರು. ಡಿಡಿಪಿಐ ಎಸ್.ಎಸ್.ಕೆಳದಿಮಠ ಪ್ರಸ್ತಾವಿಕವಾಗಿ ಮಾತನಾಡಿದರು. ಜಯಲಕ್ಷ್ಮಿ.ಎಚ್. ಕಾರ್ಯಕ್ರಮ ನಿರೂಪಿಸಿದರು. ಬಿಇಓ ಅಶೋಕ ಸಿಂದಗಿ ವಂದಿಸಿದರು. 

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!