ದೊಡ್ಡಬಳ್ಳಾಪುರ, (ಜೂ.01): ತಾಲೂಕಿನ ರಘುನಾಥಪುರದ ನೀರಿನ ಓಒರ್ ಟ್ಯಾಕ್ ಕೆಳಭಾಗದಲ್ಲಿ ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಬೆಳಕಿಗೆ ಬಂದಿದೆ.
ಮೃತನನ್ನು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ವೆಂಕಟೇಶ್ (46 ವರ್ಷ) ಎಂದು ಗುರುತಿಸಲಾಗಿದ್ದು, ಶುಕ್ರವಾರ ಬೆಳಗ್ಗೆ ಮನೆಯಿಂದ ಹೊರ ಹೋದವರು, ರಾತ್ರಿ ಶವವಾಗಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಘಟನೆ ಕುರಿತು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….