ಬೆಂಗಳೂರು, (ಜೂ.01): ಶಾಲಾ-ಕಾಲೇಜುಗಳು ಅಧಿಕೃತವಾಗಿ ಆರಂಭಗೊಂಡಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದ್ಯಾರ್ಥಿ ಬಸ್ ಪಾಸ್ ಒದಗಿಸಲು ಕೆಎಸ್ಆರ್ ಟಿಸಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತಂತೆ ಕೆಎಸ್ಆರ್ಟಿಸಿ ಪ್ರಕಟಣೆ ಹೊರಡಿಸಿದ್ದು, 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿರುತ್ತವೆ. ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬೇಕಿರುತ್ತದೆ.
ಪ್ರಸಕ್ತ ವರ್ಷದಲ್ಲಿ ಸರಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್ಗಳನ್ನು ವಿತರಿಸಲಾಗುವುದು ಎಂದು ಹೇಳಿದೆ. ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ನಲ್ಲಿ ಆನ್ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಸೇವಾಸಿಂಧು ಪೋರ್ಟಲ್ Iw URL&https://sevasindhuservices.karnataka.gov.in/ buspassservices/ ವಿದ್ಯಾರ್ಥಿಗಳು ದಿನಾಂಕ:31.05.2024 ರಿಂದ ಸೇವಾಸಿಂಧು ಪೋರ್ಟಲ್ನಲ್ಲಿ ಬಸ್ ಪಾಸ್ಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆನ್ ಲೈನ್ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….