ಬೆಂಗಳೂರು, (ಜೂ.05); ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಕಮಲ-ದಳ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಆದರೆ ಅವರ ಗೆಲುವು ಶಾಸಕ ಪ್ರದೀಪ್ ಈಶ್ವರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್ ಒಂದು ಮತ ಹೆಚ್ಚಿಗೆ ಪಡೆಯಲಿ’, ‘ಸುಧಾಕರ್ ಅವರನ್ನು ಪಾರ್ಲಿಮೆಂಟ್ ಮೆಟ್ಟಿಲು ಹತ್ತಲು ಬಿಡುವುದಿಲ್ಲ’, ಲೋಕಸಭಾ ಚುನಾವಣೆಯಲ್ಲಿ ಸುಧಾಕರ್ ಕಾಂಗ್ರೆಸ್ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಹೆಚ್ಚಿನ ಲೀಡ್ ಪಡೆಯದಿದ್ದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರದೀಪ್ ಈಶ್ವರ್ ಹೇಳಿದ್ದರು.
ಈಗ ಸುಧಾಕರ್ ಗೆಲುವಿನ ಬೆನ್ನಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪ್ರದೀಪ್ ಈಶ್ವರ್‌ಗೆ ಬಿಜೆಪಿಗರು ಆಗ್ರಹಿಸುತ್ತಿದ್ದರೆ. ಇದೀಗ ಅದಕ್ಕೆ ಸಂಬಂಧಿಸಿದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪ್ರದೀಪ್ ಈಶ್ಚರ್ ರಾಜೀನಾಮೆ ನೀಡಿದ್ದಾರೆ ಎನ್ನಲಾದ ಪತ್ರವೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಭಾಪತಿ ಯು.ಟಿ.ಖಾದರ್ ಅವರಿಗೆ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ, ಬಾಲ್ಯದಿಂದಲೇ ಪುಣ್ಯ ಕೋಟಿ ಕಥೆಯನ್ನು ಆದರ್ಶವಾಗಿರಿಸಿಕೊಂಡು, “ಕೊಟ್ಟ ಮಾತು- ಇಟ್ಟ ಹೆಜ್ಜೆ ತಪ್ಪಬಾರದು” ಅನ್ನೋ ಮಾತನ್ನು ಜೀವನದುದ್ದಕ್ಕೂ ಪಾಲಿಸುತ್ತಾ ಬಂದವನು ನಾನು.
ನಾನು ಕೆಲ ದಿನಗಳ ಹಿಂದೆ ಮಾಜಿ ಸಚಿವರಾದ ಡಾ.ಕೆ ಸುಧಾಕರ್ ಅವರು ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಒಂದು ಮತವನ್ನು ಲೀಡ್ ತೆಗೆದುಕೊಂಡರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಾರ್ವಜನಿಕವಾಗಿ ಹೇಳಿರುತ್ತೇನೆ.
ಸುಧಾಕರ್ ಅವರು ಸುಮಾರು 20 ಸಾವಿರ ಮತಗಳನ್ನು ನನ್ನ ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಂಡಿರುವುದರಿಂದ ನಾನು ಹಿಂದೆ ಆಡಿದ ಮಾತಿಗೆ ಬದ್ಧನಾಗಿ ಸ್ವಇಚ್ಛೆಯಿಂದ ನನ್ನ ವಿಧಾನಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುತ್ತಿದ್ದೇನೆ ಎಂದು ಸ್ಪೀಕರ್ ಯುಟಿ ಖಾದರ್ ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಆದರೆ ಈ ಪತ್ರ ನಕಲಿ ಎಂದು ಪ್ರದೀಪ್ ಈಶ್ವರ್ ಕಡೆಯವರು ಸ್ಪಷ್ಟನೆ ನೀಡಿದ್ದು, ಈ ರೀತಿ ನಕಲಿ ಪತ್ರ ಹರಿಬಿಟ್ಟವರ ವಿರುದ್ಧ ಪೊಲೀಸ್ ಠಾಣೆ ದೂರು ನೀಡಲು ಸಿದ್ಧತೆ ನಡೆಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….