ಕಬಾಬ್‌ ಪ್ರಿಯರಿಗೆ ಶಾಕ್.. ಬಣ್ಣ ಬೆರೆಸಿದರೆ ಜೈಲು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಾಳಜಿಗೆ ವ್ಯಾಪಕ ಪ್ರಶಂಸೆ

ಬೆಂಗಳೂರು, (ಜೂ.25): ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬಣ್ಣ ಬಳಕೆಗೆ ನಿಷೇಧ ಹೇರಿದ್ದ ರಾಜ್ಯ ಆರೋಗ್ಯ ಇಲಾಖೆ ಇದೀಗ ಚಿಕನ್, ಫಿಶ್ ಸೇರಿದಂತೆ ಕಬಾಬ್ ತಯಾರಿಯಲ್ಲಿ ಕೃತಕ ಬಣ್ಣ ಬೆರೆಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಚಿಕನ್ ಕಬಾಬ್‌ಗಳಲ್ಲೂ ಕೃತಕ ಬಣ್ಣಗಳ ಬೆರಸುವಿಕೆಯಿಂದಾಗುವ ದುಷರಿಣಾಮಗಳ ಬಗ್ಗೆ ಪರೀಕ್ಷೆಗೊಳಪಡಿಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆಹಾರ ಸುರಕ್ಷತಾ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದರು.

ಒಂದು ವೇಳೆ ಅನಧಿಕೃತವಾಗಿ ಕೃತಕ ಬಣ್ಣಗಳನ್ನು ಬಳಸಿಕೊಂಡರೆ ಆಹಾರ ಸುರಕ್ಷತೆ ಮತ್ತು ಗುಣ ಮಟ್ಟಕಾಯಿದೆ- 2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಶಿಕ್ಷೆಯ ತನಕ ಜೈಲು ಶಿಕ್ಷೆ ಮತ್ತು 10 ಲಕ್ಷ ರು. ತನಕ ದಂಡ ವಿಧಿಸಲಾಗು ವುದೆಂದು ಎಚ್ಚರಿಕೆ ನೀಡಲಾಗಿದೆ. 

ಈ ಆದೇಶವು ಬೀದಿ ಬದಿಯ ತಳ್ಳು ಗಾಡಿ ವ್ಯಾಪಾರಿಗಳಿಂದ ಹಿಡಿದು ಪಂಚತಾರಾ ಹೋಟೆಲ್‌ವರೆಗೂ ಎಲ್ಲರಿಗೂ ಅನ್ವಯವಾಗಲಿದೆ. ಕಳೆದ ಮಾಚ್ ೯ನಲ್ಲಿ ಮಕ್ಕಳು ಹೆಚ್ಚಾಗಿ ಬಳಸುವ ಕಾಟನ್ ಕ್ಯಾಂಡಿ, ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಕೆ ನಿಷೇಧಿಸಿ ಆದೇಶ ಹೊರಡಿಸಲಾಗಿತ್ತು.

ಸಚಿವ ದಿನೇಶ್ ಗುಂಡೂರಾವ್ ಸೂಚನೆಯ ಮೇರೆಗೆ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ಗುಣಮಟ್ಟ ಪರೀಕ್ಷೆಗೆ ಒಳಪಡಿಸಲಾಗಿತ್ತು. ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಸಾರ್ವಜನಿಕರು ಹೋಟೆಲ್‌ಗಳಲ್ಲಿ ಮತ್ತು ಬೀದಿ ಬದಿಯಲ್ಲಿ ಮುಗಿಬಿದ್ದು ತಿನ್ನುವ ಕಬಾಬ್ ಆರೋಗ್ಯಕ್ಕೆ ಹಾನಿಕಾರಕವೆಂದು ಕಂಡು ಬಂದಿತ್ತು.

ವಿಶ್ಲೇಷಣೆಗೊಳಪಡಿಸಲಾದ ಮಾದರಿಗಳಲ್ಲಿ 08 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ 07 ಮಾದರಿಗಳು ಹಾಗೂ ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 01) ಕೂಡಿದ್ದು ಕಂಡು ಬಂದಿತ್ತು.

ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಕಬಾಬ್ ಸೇರಿದಂತೆ ಆಹಾರದಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನು ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಈ ಬಣ್ಣದಲ್ಲಿರುವ ರೋಡಮೈನ್-ಬಿ ಅಥವಾ ಆರ್ ಎಚ್‌ಬಿ ಎಂಬ ರಾಸಾಯನಿಕವು ಆಹಾರದ ಮೂಲಕ ದೇಹ ಸೇರಿದರೆ ಕ್ಯಾನ್ಸ‌ರ್ ಕಾಯಿಲೆಗೆ ತುತ್ತಾಗಬೇಕಾ ಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಾರಿಗೆ ಮುಷ್ಕರ: ಆರ್. ಅಶೋಕ ಏಟು, ಸಿಎಂ ಸಿದ್ದರಾಮಯ್ಯ ತಿರುಗೇಟು

ಸಾರಿಗೆ ಮುಷ್ಕರ: ಆರ್. ಅಶೋಕ ಏಟು, ಸಿಎಂ ಸಿದ್ದರಾಮಯ್ಯ ತಿರುಗೇಟು

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಬೆಳಗ್ಗೆ ಆರಂಭವಾಗಿದ್ದ ರಾಜ್ಯ ಸಾರಿಗೆ ಬಸ್ ನೌಕರರ ಮುಷ್ಕರ (Transport strike)

[ccc_my_favorite_select_button post_id="112164"]
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ

[ccc_my_favorite_select_button post_id="112187"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕಣ್ಣೀರು ತರಿಸುವ  ನವವಿವಾಹಿತೆಯ ಸೂಸೈಡ್ ನೋಟ್..!

ಕಣ್ಣೀರು ತರಿಸುವ ನವವಿವಾಹಿತೆಯ ಸೂಸೈಡ್ ನೋಟ್..!

ಅಣ್ಣಾ, ಈ ಬಾರಿ ನಾನು ನಿನಗೆ ರಾಖಿ ಕಟ್ಟಲು ಸಾಧ್ಯವಾಗದಿರಬಹುದು ಎಂದು ಸುಸೈಡ್ ನೋಟ್ ಬರೆದಿರುವ ಸಹೋದರಿಯೋರ್ವಳು ಗಂಡನ ಕಿರುಕುಳದಿಂದ ಬೇಸತ್ತು ಮದುವೆಯಾದ ಆರು ತಿಂಗಳಲ್ಲಿಯೇ suicide

[ccc_my_favorite_select_button post_id="112128"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!