ದೊಡ್ಡಬಳ್ಳಾಪುರದಲ್ಲಿ ಮೂರು ದಿನಗಳ ಕಾಲ ಶ್ರೀ ರಾಮೋತ್ಸವ, ಬೃಹತ್ ಶ್ರೀರಾಮ ಶೋಭಾಯಾತ್ರೆ

ದೊಡ್ಡಬಳ್ಳಾಪುರ, (ಜೂ.25): ಧಾರ್ಮಿಕ ಹಾಗೂ ಸಾಂಸ್ಕೃತಕ ನೆಲೆಗಟ್ಟಿನಲ್ಲಿ ಹಿಂದು ಬಾಂಧವರ ಸಂಘಟನೆ, ಹಿಂದೂಗಳ ಒಗ್ಗೂಡುವಿಕೆಗಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಶ್ರೀ ರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆ ಜೂನ್ 28ರಿಂದ ಮೂರು ದಿನಗಳ ಕಾಲ ನಡೆಯಲಿದ್ದು, ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಜರಂಗದಳ ಕೋಲಾರ ವಿಭಾಗಿಯ ಸಂಯೋಜಕ ನರೇಶ್ ರೆಡ್ಡಿ ತಿಳಿಸಿದ್ದಾರೆ. 

ನಗರದ ಬಜರಂಗದಳದ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಒಂಬತ್ತು ವರ್ಷಗಳಿಂದ ಶ್ರೀರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆಯನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಈ ಬಾರಿ ಚುನಾವಣೆಗಳ ಹಿನ್ನಲೆಯಲ್ಲಿ ತಡವಾಗಿದೆ. ಈ ಕಾರ್ಯಕ್ರಮವನ್ನು ಪಕ್ಷಾತೀತವಾಗಿ ಯಾವುದೇ ವ್ಯಕ್ತಿಯನ್ನು ವೈಭವೀಕರಿಸದೇ ವಿಜೃಂಭಣೆಯಿಂದ ಹಾಗೂ ಹೆಚ್ಚು ಸಂಭ್ರಮದಿಂದ ಆಚಿಸಲಾಗುತ್ತಿದ್ದು, ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಜೂನ್ 28ರಂದು ಸಂಜೆ 4 ಗಂಟೆಗೆ ನಗರದ  ಮುತ್ಯಾಲಮ್ಮ ದೇವಾಲಯದ ಬಳಿಯಿಂದ ಬೈಕ್, ಕಾರು ಸೇರಿದಂತೆ ವಿವಿಧ ವಾಹನಗಳ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ. ಸಂಜೆ 7 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಜೂನ್ 29ರಂದು ಬೆಳಿಗ್ಗೆ 7 ಗಂಟೆಯಿಂದ ಗೋ ಪೂಜೆ, ಮಹಾ ಸುದರ್ಶನ ಹೋಮ, ಶ್ರೀ ರಾಮ ತಾರಕ ಹೋಮ,ಗ್ರಾಮ ದೇವತೆ ಹೋಮ, ಮಧ್ಯಾಹ್ನ ಸಾವಿರಾರು ಮಹಿಳೆಯರಿಂದ ಲಲಿತ ಸಹಸ್ರನಾಮ ಮತ್ತು ಹನುಮಾನ್ ಚಾಲಿಸ್ ಸಾಮೂಹಿಕ ಪಠಣ ನಡೆಯಲಿದೆ. ಸಂಜೆ 4 ಗಂಟೆಗೆ ಕಲ್ಯಾಣೋತ್ಸವ ನಡೆಯಲಿದ್ದು, ಕಲ್ಯಾಣೋತ್ಸದಲ್ಲಿ ದಂಪತಿಗಳು ಭಾಗವಹಿಸಲು ಅವಕಾಶವಿದೆ. ನಂತರ ಗೋ ಆರತಿ ನಡೆಯಲಿದೆ.

ಜೂನ್ 30ರಂದು ಮಧ್ಯಾಹ್ನ 12.30ಕ್ಕೆ ಭಗತ್ ಸಿಂಗ್ ಕ್ರೀಡಾಂಗಣದಿಂದ ಬೃಹತ್ ಶೋಭಾ ಯಾತ್ರೆ ನಡೆಯಲಿದೆ. ಮೆರವಣಿಗೆಯಲ್ಲಿ ಭಾರತ ಮಾತೆ, ಶ್ರೀರಾಮ, ಹನುಮ, ಶಿವ ಪ್ರತಿಮೆಗಳೊಂದಿಗೆ ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಭುವನೇಶ್ವರಿದೇವಿಯ ಮೆರವಣಿಗೆ ವಿವಿಧ ಕಲಾತಂಡಗಳೊಡನೆ ನಡೆಯಲಿದೆ. ನಂತರ ಕಾರ್ಕಳದ ಶೀಕಾಂತ್ ಶೆಟ್ಟಿ ಅವರಿಂದ ದಿಕ್ಸೂಚಿ ಭಾಷಣವಿದೆ.

ಸಂಜೆ ರಾಮಾಯಣ ಕಥೆಯ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಕಾರ್ಯಕ್ರಮಗಳಿದ್ದು, ಹಿಂದೂ ಸಮಾಜದ ಪ್ರತೀಕವಾಗಿ ಶಕ್ತಿ ತೋರಿಸುವ ಈ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ರವಿ ಕುಮಾರ್, ಉಪಾಧ್ಯಕ್ಷ  ಎಸ್.ಎಂ.ಸದಾಶಿವಯ್ಯ, ಬಜರಂಗದಳ ಸತ್ಸಂಗದ ಪ್ರಮುಖ ಭಾಸ್ಕರ್ ಭಗತ್, ವಿಶ್ವ ಹಿಂದೂ ಪರಿಷತ್ ನಗರ ಘಟಕದ ಅಧ್ಯಕ್ಷ ಮಧುಸೂದನ್, ಕಾರ್ಯದರ್ಶಿ ಮಂಜುಳಾ, ತಾಲೂಕು ಸಂಯೋಜಕ ವಿರಾಜ್ ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪ್ರಜ್ವಲ್ ರೇವಣ್ಣ ಶಿಕ್ಷೆ ಬಗ್ಗೆ ನಮ್ಮ ಪ್ರತಿಕ್ರಿಯೆಗಿಂತ ಜೆಡಿಎಸ್- ಬಿಜೆಪಿ ನಾಯಕರ ಪ್ರತಿಕ್ರಿಯೆ ಬಹುಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಜ್ವಲ್ ರೇವಣ್ಣ ಶಿಕ್ಷೆ ಬಗ್ಗೆ ನಮ್ಮ ಪ್ರತಿಕ್ರಿಯೆಗಿಂತ ಜೆಡಿಎಸ್- ಬಿಜೆಪಿ ನಾಯಕರ ಪ್ರತಿಕ್ರಿಯೆ

ನಾವು ಮಾತನಾಡಿದರೆ ರಾಜಕೀಯವಾಗುತ್ತದೆ. ಹೀಗಾಗಿ ಜೆಡಿಎಸ್-ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡುವುದು ಬಹುಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ( D.K. Shivakumar)

[ccc_my_favorite_select_button post_id="112052"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಶಿಕ್ಷಕ ಮುಸ್ಲಿಂ ಎಂಬ ಕಾರಣಕ್ಕೆ ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಹಾಕಿದ ಕಿಡಿಗೇಡಿಗಳು

ಶಿಕ್ಷಕ ಮುಸ್ಲಿಂ ಎಂಬ ಕಾರಣಕ್ಕೆ ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಹಾಕಿದ ಕಿಡಿಗೇಡಿಗಳು

ಶಾಲೆಯ ಮುಖ್ಯ ಶಿಕ್ಷಕ ಮುಸ್ಲಿಂ (Muslim teacher) ಎಂಬ ಕಾರಣಕ್ಕೆ ಆತನನ್ನು ಶಾಲೆಯಿಂದ ಎತ್ತಂಗಡಿ ಮಾಡಿಸುವ ಉದ್ದೇಶದಿಂದ ಶಾಲೆಯ ಆವರಣದಲ್ಲಿದ್ದ ಕುಡಿಯುವ ನೀರಿನ ಟ್ಯಾಂಕ್ ಗೆ

[ccc_my_favorite_select_button post_id="112064"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!