ರೈತನ ಎದೆ ಮೇಲೆ ಕಾಲಿಟ್ಟ ಕಾಡಾನೆ: ಹೊಂಡಕ್ಕೆ ಬಿದ್ದು ಬಾಲಕರ ಸಾವು..!

ಚಾಮರಾಜನಗರ, (ಜೂ.29): ಜಮೀನಿನಲ್ಲಿ ಮಲಗಿದ್ದ ರೈತನ ಎದೆಯ ಮೇಲೆ ಆನೆ ಕಾಲ ಟ್ಟಿದ್ದು, ಅವರು ಪವಾಡ ಸದೃಶ ರೀತಿಯಲ್ಲಿ ಪ್ರಾಣಾ ಪಾಯದಿಂದ ಪಾರಾಗಿದ್ದಾರೆ.

ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮ ನಿವಾಸಿ ಬಸವಣ್ಣ (52 ವರ್ಷ) ಅಪಾಯದಿಂದ ಪಾರಾದವರು. ಆಲೂಗೆಡ್ಡೆ ಬೆಳೆ ಸಂರಕ್ಷಣೆಗೆ ಕಾವಲಿಗೆಂದು ಇವರು ಜಮೀನಿಗೆ ತೆರಳಿದರು. ತೆವರಿನ ಮೇಲೆ ಮಲಗಿದ್ದಾಗ ಕಾಡಾನೆ ನುಗ್ಗಿ ಬಂದು ಎದೆಯ ಮೇಲೆ ಕಾಲಿಟ್ಟಿದೆ. ತಕ್ಷಣವೇ ಜೋರಾಗಿ ಕೂಗಿ ಕೊಂಡಿದ್ದರಿಂದ ತನ್ನ ಮರಿ ಜೊತೆ ಆನೆ ಕಾಲ್ಕಿತ್ತಿದೆ.

ಇದರಿಂದಾಗಿ ರೈತ ಅಪಾಯದಿಂದ ಪಾರಾಗಿದ್ದಾರೆ. ಆದರೆ ಎದೆಗೆ ತೀವ್ರವಾದ ಗಾಯವಾಗಿದೆ. ತಕ್ಷಣ ಸ್ಥಳೀಯರು ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಗೆ ಬಸವಣ್ಣರನ್ನು ದಾಖಲು ಮಾಡಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಹೊಂಡಕ್ಕೆ ಬಿದ್ದು ಬಾಲಕರ ಸಾವು: ಕಲಬುರಗಿ ಜಿಲ್ಲೆಯ ರಾವೂರು ಗ್ರಾಮದಲ್ಲಿ ಗುರುವಾರ ಆಟವಾಡಲು ತೆರಳಿದ್ದ ಇಬ್ಬರು ಬಾಲಕರು ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಹತ್ತಿರದ ಕಲ್ಲುಗಣಿಯ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ರಾವೂರಿನ ರವಿ ಗುತ್ತೇ ದಾರ ಅವರ ಪುತ್ರ ಭುವನ್ (5 ವರ್ಷ) ಹಾಗೂ ಅಶೋಕ ಬೆಟಗೇರಿ ಅವರ ಪುತ್ರ ದೇವು (6 ವರ್ಷ) ಮೃತರು. ಗ್ರಾಮದ ವಿವೇಕಾನಂದ ಶಿಶುವಿಹಾರ ಶಾಲೆಯಲ್ಲಿ ಓದುತ್ತಿದ್ದ ಭುವನ್ ಹಾಗೂ ದೇವು ಬೆಳಿಗ್ಗೆ ಆಟ ವಾಡಲು ಹೋಗಿದ್ದರು. ಬಹಳ ಹೊತ್ತಾದರೂ ಬಾರದಿದ್ದಾಗ ಸಂಬಂಧಿಕರು ಹುಡುಕಾಡಿದ್ದಾರೆ.

ಒಬ್ಬ ಬಾಲಕನ ಬಟ್ಟೆ ಹಾಗೂ ಆಟವಾಡಲು ಬಳಸುತ್ತಿದ್ದ ಟೈರ್ ಗಾಲಿಯು ಕಲ್ಲುಗಣಿಯ ಪಕ್ಕದಲ್ಲಿ ಕಾಣಿಸಿಕೊಂಡಿದೆ. ಅನುಮಾನಗೊಂಡು ಹೊಂಡದಲ್ಲಿ ಹುಡುಕಿದಾಗ ಇಬ್ಬರ ಬಾಲಕರ ಶವಗಳು ಪತ್ತೆಯಾಗಿವೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]