ಇಂದಿನಿಂದ ದೇಶಾದ್ಯಂತ 3 ನೂತನ ಕಾನೂನು ಜಾರಿ..!: ಬ್ರಿಟಿಷ್ ಕಾಲದ ಮೂರು ಅಪರಾಧ ಕಾಯ್ದೆ ರದ್ದು

ನವದೆಹಲಿ, (ಜುಲೈ.01); ದೇಶದಲ್ಲಿ ಜುಲೈ 1ರಿಂದ 3 ನೂತನ ಕ್ರಿಮಿನಲ್ ಕಾನೂನುಗಳು ಜಾರಿಗೆ ಬಂದಿವೆ. ಇದರನ್ವಯ ಬ್ರಿಟಿಷರ ವಸಾಹತುಶಾಹಿ ಯುಗದ 3 ಅಪರಾಧ ಕಾನೂನುಗಳನ್ನು ಅಂತ್ಯಗೊಳಿಸಿ ನೂತನ ಕ್ರಿಮಿನಲ್ ಕಾನೂನುಗಳು ಜಾರಿಗೆ ತರಲಾಗಿದೆ. 

ಗೃಹ ಸಚಿವ ಅಮಿತ್ ಶಾ ಈ ಹೊಸ ಕಾನೂನುಗಳು ದಂಡದ ಕ್ರಮಕ್ಕೆ ಪ್ರಾಮುಖ್ಯತೆ ನೀಡುವುದಕ್ಕಿಂತ ನ್ಯಾಯ ಒದಗಿಸುವಲ್ಲಿ ಆದ್ಯತೆ ನೀಡುತ್ತವೆ ಎಂದು ತಿಳಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, ಭಾರತೀಯ ಸಾಕ್ಷ್ಯ ಅಧಿನಿಯಮ ಎಂಬ ಮೂರು ಕಾನೂನುಗಳು ಬ್ರಿಟಿಷರ ಭಾರತೀಯ ದಂಡ ಸಂಹಿತಾ(ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತಾ (ಸಿಆರ್‌ಪಿಸಿ), ಭಾರತೀಯ ಸಾಕ್ಷ್ಯ ಸಂಹಿತಾ ಕಾನೂನುಗಳನ್ನು ಬದಲಾಗಿದೆ.

ಈ ಹೊಸ ಕಾನೂನುಗಳು ಕಳೆದ ವರ್ಷವೇ ಸಂಸತ್‌ನಲ್ಲಿ ಅನುಮೋದನೆಗೊಂಡಿದ್ದು, ರಾಷ್ಟ್ರಪತಿಗಳ ಅಂಕಿತ ಕೂಡ ಪಡೆದುಕೊಂಡಿವೆ. ಲೋಕಸಭೆ ಚುನಾವಣೆ ಜಾರಿಗೊಂಡಿವೆ.

ಬಳಿಕ ಜೀರೋ ಎಫ್‌ಐಆ‌ರ್, ಆನ್‌ಲೈನ್ ಮೂಲಕ ಪೊಲೀಸ್ ದೂರು ದಾಖಲು, ಎಸ್‌ಎಂಎಸ್‌ನಂತಹ ವಿದ್ಯುನ್ಮಾನ ಸಂದೇಶಗಳ ಮೂಲಕ ಸಮನ್ಸ್ ಜಾರಿ, ಘೋರ ಅಪರಾಧ ದೃಶ್ಯಗಳ ಕಡ್ಡಾಯ ವಿಡಿಯೋಗ್ರಫಿ ಮೂಲಕ ಈ ಹೊಸ ಕಾನೂನುಗಳು ಆಧುನಿಕ ನ್ಯಾಯ ವ್ಯವಸ್ಥೆಯನ್ನು ಪರಿಚಯಿಸುತ್ತವೆ.

ನೂತನ ಕ್ರಿಮಿನಲ್ ಕಾನೂನು ಪ್ರಮುಖಾಂಶಗಳು

• ಭಾರತೀಯ ಸಾಕ್ಷ್ಯ ಅಧಿನಿಯಮವನ್ನು 3 ಭಾಗಗಳಾಗಿ ವಿಂಗಡಿಸಲಾಗಿದ್ದು, 11 ಅಧ್ಯಾಯಗಳನ್ನು ಒಳಗೊಂಡಿದೆ.

• ಜೀರೋ ಎಫ್‌ಐಆರ್ ಪರಿಚಯದ ಮೂಲಕ ಅಪರಾಧ ನಡೆದ ಠಾಣೆ ವ್ಯಾಪ್ತಿಯ ಜತೆಗೆ ಯಾವುದೇ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಬಹುದಾಗಿದೆ.

• ಕ್ರಿಮಿನಲ್ ಪ್ರಕರಣಗಳ ತೀರ್ಪು ವಿಚಾರಣೆ ಮುಗಿಸಿದ 45 ದಿನಗಳೊಳಗಾಗಿ ನೀಡಬೇಕು ಹಾಗೂ ಮೊದಲ ವಿಚಾರಣೆಯ 60 ದಿನಗಳ ಒಳಗೆ ಆರೋಪ ಪಟ್ಟಿ ದಾಖಲಿಸಬೇಕು

• ಅತ್ಯಾಚಾರ ಸಂತ್ರಸ್ತೆಯ ಹೇಳಿಕೆಗಳನ್ನು ಮಹಿಳಾ ಅಧಿಕಾರಿಗಳು ಆಕೆಯ ಗಾರ್ಡಿಯನ್ ಅಥವಾ ಸಂಬಂಧಿಕರ ಎದುರು ಪಡೆಯಬೇಕು ಹಾಗೂ ಮೆಡಿಕಲ್‌ ವರದಿಗಳು 7 ದಿನಗಳೊಳಗಾಗಿ ದಾಖಲಿಸಬೇಕು. ಈ ಹೇಳಿಕೆಗಳ ಆಡಿಯೋ, ವಿಡಿಯೋ ರೆಕಾರ್ಡ್ ಕಡ್ಡಾಯ.

• ಸಂಘಟಿತ ಅಪರಾಧಗಳು ಹಾಗೂ ಭಯೋತ್ಪಾದನೆ ಕೃತ್ಯಗಳನ್ನು ವ್ಯಾಖ್ಯಾನಿಸಲಾಗಿದ್ದು, ಎಲ್ಲಾ ಕಾರ್ಯಾಚರಣೆ ಹಾಗೂ ಅಪರಾಧಕ್ಕೆ ಸಂಬಂಧಿಸಿದ ಸಾಕ್ಷ್ಯ ಸಂಗ್ರಹ ಮತ್ತು ಆರೋಪಿಗಳನ್ನು ವಶಕ್ಕೆ ಪಡೆಯುವ ಪ್ರಕ್ರಿಯೆಯ ವಿಡಿಯೋ ಚಿತ್ರೀಕರಣ ಕಡ್ಡಾಯವಾಗಿದೆ.

• ಮಕ್ಕಳು ಹಾಗೂ ಮಹಿಳೆಯರ ವಿರುದ್ಧದ ಅಪರಾಧಗಳಿಗೆ ವಿಶೇಷ ಅಧ್ಯಾಯ ಸೇರಿಸಲಾಗಿದ್ದು, ಅಕ್ರಮ ಮಕ್ಕಳ ಮಾರಾಟ ಹಾಗೂ ಖರೀದಿಯನ್ನು ಘೋರ ಅಪರಾಧ ಎಂದು ಪರಿಗಣಿಸಲಾಗಿದೆ. ಅಪ್ರಾಪ್ತರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಗೆ ಯೋಗ್ಯ ಎಂದು ಪ್ರಸ್ತಾಪಿಸಲಾಗಿದೆ.

• ಹಳೆಯ ಕಾನೂನಿನಲ್ಲಿದ್ದ ಕೆಲವು ಸೆಕ್ಷನ್‌ಗಳನ್ನು ಒಗ್ಗೂಡಿಸಲಾಗಿದ್ದು, ಭಾರತೀಯ ದಂಡ ಸಂಹಿತೆಯಲ್ಲಿದ್ದ 511 ಸೆಕ್ಷನ್‌ಗಳನ್ನು 358ಕ್ಕೆ ಇಳಿಸಲಾಗಿದೆ.

• ಮದುವೆಯ ಸುಳ್ಳು ಭರವಸೆಯ ಮೇಲೆ ಲೈಂಗಿಕ ಸಂಬಂಧಗಳನ್ನು ಬೆಳೆಸಿದ ನಂತರ ಮಹಿಳೆಯರನ್ನು ದೂರ ಮಾಡುವ ಪ್ರಕರಣಗಳಿಗೆ ಹೊಸ ನಿಬಂಧನೆಯನ್ನು ಮಾಡಲಾಗಿದೆ.

• ಹೊಸ ಕಾನೂನಿನ ಅನ್ವಯ ಆಸ್ಪತ್ರೆಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳಲ್ಲಿ ಸಂತ್ರಸ್ತರಿಗೆ ಉಚಿತ ಪ್ರಥಮ ಚಿಕಿತ್ಸೆ ಅಥವಾ ವೈದ್ಯಕೀಯ ಚಿಕಿತ್ಸೆಯನ್ನು ಖಚಿತಪಡಿಸಲಾಗಿದೆ.

* ಹೊಸ ಕಾನೂನುಗಳ ಅಡಿಯಲ್ಲಿ, ಮಹಿಳೆಯರ ವಿರುದ್ಧದ ಅಪರಾಧದಗಳಲ್ಲಿ ಸಂತ್ರಸ್ತರು ತಮ್ಮ ಪ್ರಕರಣದ ಪ್ರಗತಿಯ ಬಗ್ಗೆ 90 ದಿನಗಳೊಳಗಾಗಿ ಎಲ್ಲಾ ಮಾಹಿತಿಯನ್ನು ಪಡೆಯುವ ಹಕ್ಕು ಹೊಂದಿರುತ್ತಾರೆ. ಇದರಿಂದ ತನಿಖೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸವನ್ನು ಹೊಸ ಕಾನೂನು ಖಚಿತಪಡಿಸುತ್ತದೆ.

• ಸಮನ್ಸ್‌ಗಳನ್ನು ಈಗ ವಿದ್ಯುನ್ಮಾನವಾಗಿ ಸಲ್ಲಿಸಬಹುದಾಗಿದೆ. ಈ ಮೂಲಕ ಕಾನೂನು ಪ್ರಕ್ರಿಯೆಗಳನ್ನು ತ್ವರಿತಗೊಳಿಸಬಹುದು, ಕಾಗದ ಪತ್ರ ಕೆಲಸಗಳನ್ನು ಕಡಿಮೆ ಮಾಡಬಹುದು ಮತ್ತು ಪ್ರಕರಣದಲ್ಲಿ ಭಾಗಿಯಾದವರ ಮಧ್ಯೆ ಸಮರ್ಥ ಸಂವಹನಕ್ಕೆ ಅವಕಾಶ ಕಲ್ಪಿಸಬಹುದಾಗಿದೆ.

• ಆರೋಪಿ ಮತ್ತು ಸಂತ್ರಸ್ತ ಇಬ್ಬರೂ ಎಫ್‌ಐಆರ್, ಪೊಲೀಸ್ ವರದಿ, ಚಾರ್ಜ್ ಶೀಟ್, ದಾಖಲಿಸ ಲಾದ ಹೇಳಿಕೆ, ತಪ್ರೊಪ್ಪಿಗೆ ಸೇರಿ ಸಂಬಂಧ ಪಟ್ಟ ದಾಖಲೆಗಳ ಪ್ರತಿಯನ್ನು 14 ದಿನಗಳೊಳಗೆ ಪಡೆಯಲು ಅಧಿಕಾರ ಹೊಂದಿರುತ್ತಾರೆ.

• ಪ್ರಕರಣಗಳ ವಿಚಾರಣೆಯಲ್ಲಿ ಅನಗತ್ಯ ವಿಳಂಬ ತಪ್ಪಿಸಲು ಹಾಗೂ ಸಕಾಲಿಕ ನ್ಯಾಯ ವಿತರಣೆಗೆ ಗರಿಷ್ಠ ಎರಡು ವಿಚಾರಣೆ ಮುಂದೂಡಿಕೆಯನ್ನು ಮಾತ್ರ ನೀಡುತ್ತದೆ.

• ಸಾಕ್ಷಿಗಳ ಸುರಕ್ಷತೆ ಮತ್ತು ಸಹಕಾರವನ್ನು ಸಾಧಿಸುವ ನಿಟ್ಟಿನಲ್ಲಿ, ಕಾನೂನು ಪ್ರಕ್ರಿಯೆಗಳ ವಿಶ್ವಾಸಾರ್ಹತೆ ಮತ್ತು ಪರಿಣಾಮಕಾರಿತ್ವವನ್ನು ಹೆಚ್ಚಿಸಲು ಎಲ್ಲಾ ರಾಜ್ಯ ಸರ್ಕಾರಗಳು ಸಾಕ್ಷಿ ರಕ್ಷಣೆ ಯೋಜನೆಗಳನ್ನು ಜಾರಿಗೆ ತರುವುದನ್ನು ಕಡ್ಡಾಯಗೊಳಿಸಲಾಗಿದೆ.

• ಲಿಂಗ’ ಪದದ ವ್ಯಾಖ್ಯಾನವು ತೃತೀಯ ಲಿಂಗ ವ್ಯಕ್ತಿಗಳನ್ನೂ ಒಳಗೊಂಡಿದ್ದು, ಸಮಾನತೆಯನ್ನು ಉತ್ತೇಜಿಸುತ್ತದೆ.

• 15 ವರ್ಷದ ಒಳಗಿನ ಹಾಗೂ 60 ವರ್ಷ ಮೇಲ್ಪಟ್ಟವರು, ಅನಾರೋಗ್ಯಕ್ಕೆ ಒಳಗಾದವರು ಹಾಗೂ ವಿಶೇಷಚೇತನ ವ್ಯಕ್ತಿಗಳಿಗೆ ಪೊಲೀಸ್ ಠಾಣೆಗೆ ಭೇಟಿ ನೀಡುವುದಕ್ಕೆ ವಿನಾಯಿತಿ ನೀಡಲಾಗಿದ್ದು ಅವರಿದ್ದ ಸ್ಥಳದಲ್ಲೇ ಪೊಲೀಸ್ ನೆರವನ್ನು ಪಡೆಯಬಹುದಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!