ಬೆಂಗಳೂರು, (ಜುಲೈ.01): ಉದ್ಯೋಗದ ವಿಚಾರದಲ್ಲಿ ಕನ್ನಡಿಗರಿಗೆ ಕರುನಾಡಿನಲ್ಲೇ ಅನ್ಯಾಯವಾಗುತ್ತಿದೆ. ಕರುನಾಡಿನ ಮಣ್ಣಿನಲ್ಲಿ ಕನ್ನಡಿಗನೇ ಸರ್ವಭೌಮ ಎಂದು ಘೋಷವಾಕ್ಯದೊಂದಿಗೆ ಇಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆಗಿಳಿದಿದೆ.
ಕರವೇ ರಾಜ್ಯಾಧ್ಯಕ್ಷ ಟಿಎ ನಾರಾಯಣಗೌಡ ನೇತೃತ್ವದಲ್ಲಿ ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆದಿದ್ದು, ಉದ್ಯೋಗ ವಿಚಾರದಲ್ಲಿ ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಪರಭಾಷಿಗರ ಹಾವಳಿಯಿಂದ ಕನ್ನಡಿಗರಿಗೆ ನಿರಂತರ ಅನ್ಯಾಯವಾಗುತ್ತಿದೆ. ಕನ್ನಡಿಗರ ಉದ್ಯೋಗ ವಿಚಾರದಲ್ಲಿ ಕಾಯಿದೆ ಜಾರಿಗೆ ಬರಬೇಕು. ಮೂವತ್ತು ದಿನಗಳ ಕಾಲಾವಕಾಶ ನೀಡುತ್ತೇವೆ. ಉತ್ತರ ಸಿಗದಿದ್ದರೆ ಬಹು ದೊಡ್ಡ ಹೋರಾಟ ನಡೆಸಲಾಗುವುದು ಎಂದು ನಾರಾಯಣಗೌಡ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಟ ಪ್ರೇಮ್, ನಟಿ ಪೂಜಾ ಗಾಂಧಿ ಇನ್ನಿತರು ಸಾಥ್ ನೀಡಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….