ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗಕ್ಕೆ ಆಗ್ರಹಿಸಿ ಕರವೇ ಚಳುವಳಿ ಇಂದು

ಬೆಂಗಳೂರು (ಜುಲೈ.01): ಕನ್ನಡಿಗರಿಗೆ ಕನ್ನಡ ನಾಡಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಎಲ್ಲಾ ‌ ಉದ್ಯೋಗಗಳನ್ನು ನೀಡುವಂತೆ ಸೂಕ್ತ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಸೋಮವಾರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲು ಕಲ್ಪಿಸಲು ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೃಹತ್‌ ಹೋರಾಟಕ್ಕೆ ಕರೆ ನೀಡಲಾಗಿದೆ.

ಸೋಮವಾರ ಬೆಳಗ್ಗೆ 11 ಗಂಟೆ ಯಿಂದ ಸಂಜೆ 4 ಗಂಟೆವರೆಗೂ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಲಿದ್ದು, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿಯೂ ಏಕಕಾಲದಲ್ಲಿ ಪ್ರತಿಭಟನೆಗಳು ಜರುಗಲಿವೆ. 

ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿ ನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದ್ದು, ಇದರಿಂದ ಖಾಸಗಿ ವಲಯದಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಹೀಗಾಗಿ ಕನ್ನಡಿಗರಿಗೆ ಅನ್ಯಾಯ ವಾಗುತ್ತಿದೆ. 

ಖಾಸಗಿ ವಲಯದಲ್ಲಿ ‘ಸಿ’ ಮತ್ತು ‘ಡಿ’ ದರ್ಜೆಯ ಹುದ್ದೆಗಳು ಶೇ.100 ರಷ್ಟು ಕನ್ನಡಿಗರಿಗೆ ಮೀಸಲು ನೀಡಬೇಕು. ಇತರೆ ಗ್ರೂಪ್‌ಗಳಲ್ಲಿ ಶೇ.80 ರಷ್ಟು ಮೀಸಲು ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತದೆ.

ಪ್ರಮುಖ ಬೇಡಿಕೆ; 

1. ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯಿದೆ 1946 ರ ಅನ್ವಯ ಬಲಿಷ್ಠ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡಬೇಕು.

2. ಖಾಸಗಿ ಸಂಸ್ಥೆಗಳ ‘ಸಿ’ ಮತ್ತು ‘ಡಿ’ ದರ್ಜೆ ಹುದ್ದೆಗಳು ಶೇ.100 ಕನ್ನಡಿಗರಿಗೆ ಮೀಸಲಿಡಬೇಕು.

3. ಖಾಸಗಿ ಸಂಸ್ಥೆಗಳ ಇತರೆ ಹುದ್ದೆಯಲ್ಲಿ ಶೇ.80 ಕನ್ನಡಿಗರಿಗೆ ಮೀಸಲಿಡಬೇಕು.

4. 15 ವರ್ಷ ರಾಜ್ಯದಲ್ಲಿದ್ದವರಿಗೆ ಕನ್ನಡಿಗರೆಂದು ಪರಿಗಣಿಸುವ ನಿಯಮವಿದ್ದು, ಅಂತವರಿಗೆ ಕನ್ನಡ ಪರೀಕ್ಷೆ ನಡೆಸಿ ಉತ್ತೀರ್ಣರಾದರೆ ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು.

5. ನಿಯಮ ಪಾಲಿಸದ ಸಂಸ್ಥೆಗಳ ಲೈಸೆನ್ಸ್ ರದ್ದು ಮಾಡಬೇಕು. ಸರಕಾರ ನೀಡಿರುವ ಭೂಮಿ, ಸವಲತ್ತುಗಳನ್ನು ವಾಪಸ್ ಪಡೆದು ಕ್ರಿಮಿನಲ್‌ ಮೊಕದ್ದಮೆ ಹಾಕಬೇಕು.

6. ರಾಜ್ಯ ಸರಕಾರಿ ಸಂಸ್ಥೆ ಮತ್ತು ಸಾರ್ವಜನಿಕ ವಲಯದಲ್ಲಿ ಶೇ.100 ಕನ್ನಡಿಗರಿಗೆ ಮೀಸಲು ನೀಡಬೇಕು.

7. ಕೇಂದ್ರ ಸರಕಾರದ ಇಲಾಖೆಗಳಲ್ಲಿ ಗ್ರೂಪ್ ‘ಸಿ’ ಹಾಗೂ ‘ಡಿ’ ಹುದ್ದೆಗಳಲ್ಲಿ ಶೇ.100 ಕನ್ನಡಿಗರಿಗೆ ಮೀಸಲು ನೀಡಬೇಕು.

8. ಕೇಂದ್ರ ಸರಕಾರದ ಇಲಾಖೆಗಳಲ್ಲಿ ಗ್ರೂಪ್ ‘ಸಿ’, ‘ಡಿ’ ಹೊರತಾದ ಉಳಿದ ಉದ್ಯೋಗದಲ್ಲಿ ಶೇ.90 ಮೀಸಲು ನೀಡಬೇಕು.

9. ಕನ್ನಡಿಗರಿಗೆ ಮೀಸಲು ಕಲ್ಪಿಸಲು ವಿಫಲವಾಗುವ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳಬೇಕು, ಈ ಅಂಶವನ್ನು ಉದ್ದೇಶಿತ ಕಾನೂನಿನಲ್ಲಿ ಸೇರಿಸಬೇಕು.

10. ರಾಜ್ಯ ಸರಕಾರ ರೂಪಿಸುವ ಕಾನೂನು ಜಾರಿ ಮಾಡಲು ಕನ್ನಡ ಪ್ರಾಧಿಕಾರಕ್ಕೆ ಅಧಿಕಾರ ನೀಡಬೇಕು. (ಸಂಗ್ರಹ ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!