ಉತ್ತರಾಖಂಡ, (ಜುಲೈ.01): ಕೇದಾರನಾಥ ದೇವಸ್ಥಾನದ ಹಿಂಭಾಗದಲ್ಲಿ ಹಿಮಪಾತ ಸಂಭವಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಭಾನುವಾರ ಮುಂಜಾನೆ 5 ಗಂಟೆ ಸುಮಾರಿಗೆ ಕೇದಾರನಾಥದ ಗಾಂಧಿ ಸರೋವರದಲ್ಲಿ ಹಿಮಕುಸಿತ ಸಂಭವಿಸಿದೆ ಎಂದು ರುದ್ರಪ್ರಯಾಗದ ಹಿರಿಯ ಪೊಲೀಸ್ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದರಿಂದ ಯಾವುದೇ ಪ್ರಾಣ ಹಾನಿ, ಆಸ್ತಿ-ಪಾಸ್ತಿ ಹಾನಿಯಾಗಿಲ್ಲ ಎಂದು ವರದಿಯಾಗಿದೆ.
ಕೇದಾರನಾಥ ದೇವಸ್ಥಾನದ ಹಿಂಭಾಗದಲ್ಲಿರುವ ಪರ್ವತದ ಮೇಲೆ ಹಠಾತ್ ಹಿಮಕುಸಿತವನ್ನು ವೀಡಿಯೊದಲ್ಲಿ ಸ್ಪಷ್ಟವಾಗಿ ಕಾಣಬಹುದು. ಹಿಮಪಾತದಲ್ಲಿ ಬಿದ್ದ ಹಿಮವು ಹೆಚ್ಚಿನ ವೇಗದಲ್ಲಿ ಧಾವಿಸಿ ದೇವಸ್ಥಾನದ ಹಿಂದೆ ಇರುವ ಗಾಂಧಿ ಸರೋವರಕ್ಕೆ ಬಂದು ಬಿದ್ದಿದೆ.
ಈ ಅವಘಡದಿಂದಾಗಿ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ. ದೇವಾಲಯವೇ ಸಂಪೂರ್ಣ ಸುರಕ್ಷಿತವಾಗಿದೆ ಎಂದು ತಿಳಿದುಬಂದಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….