ನವದೆಹಲಿ, (ಜುಲೈ.01): ನರ್ಮದಾ ಬಚಾವೋ ಆಂದೋಲನದ ಸ್ಥಾಪಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ವಿರುದ್ಧ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಪಾಟ್ಕರ್ ಅವರಿಗೆ ದೆಹಲಿಯ ಸಾಕೇತ್ ಕೋರ್ಟ್ 5 ತಿಂಗಳು ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.
ಇದಲ್ಲದೇ ಈ ಪ್ರಕರಣದಲ್ಲಿ ಪಾಟ್ಕರ್ ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿರುವ ಕೋರ್ಟ್, ಅವರ ಪ್ರತಿಷ್ಠೆಗೆ ಉಂಟಾದ ಹಾನಿಗೆ ಸಕ್ಸೇನಾ ಅವರಿಗೆ 10 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ಸೂಚಿಸಿದೆ.
ಇನ್ನು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 389 (3) ರಡಿ ಆಗಸ್ಟ್1 ರವರೆಗೆ ಶಿಕ್ಷೆಯನ್ನು ಕೋರ್ಟ್ ಅಮಾನತ್ತಿನಲ್ಲಿಟ್ಟಿದೆ.
24 ವರ್ಷದ ಹಿಂದಿನ ಪ್ರಕರಣ ಇದಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….