ದೊಡ್ಡಬಳ್ಳಾಪುರ, (ಜುಲೈ.01): ಮೈಸೂರಿನ ಯೂನಿವರ್ಸಿಟಿ ಯೋಗ ಭವನದಲ್ಲಿ ನಡೆದ ರಾಜ್ಯ ಮುಕ್ತ ಯೋಗಾಸನ ಚಾಂಪಿಯನ್ ಷಿಪ್ ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ಡಿ.ಎಸ್.ಮಧುಶಾಲಿನಿ ಚಾಂಪಿಯನ್ ಆಫ್ ಚಾಂಪಿಯನ್ ಪ್ರಶಸ್ತಿ ಪಡೆದಿದ್ದಾರೆ.
ಮೈಸೂರಿನ ಯೋಗ ಸ್ಪೋರ್ಟ್ಸ್ ಫೆಡರೇಷನ್ ವತಿಯಿಂದ ಯೂನಿವರ್ಸಿಟಿ ಯೋಗ ಭವನದಲ್ಲಿ ನಡೆದ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಡೆದ ರಾಜ್ಯ ಮುಕ್ತ ಯೋಗಾಸನ ಚಾಂಪಿಯನದ ಷಿಪ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರದ ನಿಸರ್ಗಯೋಗ ಕೇಂದ್ರದ (ರಿ), ಡಿ.ಎಸ್.ಮಧುಶಾಲಿನಿ ಗೆ 15 ರಿಂದ 20 ವರ್ಷದ ಬಾಲಕೀಯರ ವಿಭಾಗದಲ್ಲಿ ಪ್ರಥಮ ಸ್ಥಾನ ಮತ್ತು ನಗದು ಬಹುಮಾನ ಬಾಲಕೀಯರ ಎಲ್ಲಾ ವಿಭಾಗಗಳು ಸೇರಿ ಚಾಂಪಿಯನ್ ಆಫ್ ಚಾಂಪಿಯನ್ ಪ್ರಶಸ್ತಿ ಪಡೆದಿರುತ್ತಾರೆ.
ಇವರಿಗೆ ನಿಸರ್ಗ ಯೋಗ ಕೇಂದ್ರದ ಪದಾಧಿಕಾರಿಗಳು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಶುಭ ಹಾರೈಸುತ್ತಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….